ನಾಗ ಚೈತನ್ಯ, ಶೋಭಿತಾ ಧುಲಿಪಾಲ ಜೊತೆಯಾಗಿರುವ ಇನ್ನೊಂದು ಫೋಟೋ ವೈರಲ್​

ಕಳೆದೊಂದು ವರ್ಷದಿಂದ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧುಲಿಪಾಲ ಅವರ ಸಂಬಂಧದ ಬಗ್ಗೆ ಸುದ್ದಿ ಹರಿದಾಡುತ್ತಲೇ ಇದೆ. ಅನೇಕ ಸಂದರ್ಭಗಳಲ್ಲಿ ಅವರಿಬ್ಬರು ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಈಗ ಮತ್ತೆ ಅವರಿಬ್ಬರು ಜೊತೆಯಾಗಿರುವ ಫೋಟೋ ವೈರಲ್​ ಆಗಿದೆ. ಯುರೋಪ್​ನಲ್ಲಿ ಅವರಿಬ್ಬರು ಎಂಜಾಯ್​ ಮಾಡುತ್ತಿದ್ದಾರೆ.

ನಾಗ ಚೈತನ್ಯ, ಶೋಭಿತಾ ಧುಲಿಪಾಲ ಜೊತೆಯಾಗಿರುವ ಇನ್ನೊಂದು ಫೋಟೋ ವೈರಲ್​
ನಾಗ ಚೈತನ್ಯ, ಶೋಭಿತಾ ಧುಲಿಪಾಲ
Follow us
ಮದನ್​ ಕುಮಾರ್​
|

Updated on: May 31, 2024 | 6:52 PM

ನಟ ನಾಗ ಚೈತನ್ಯ (Naga Chaitanya) ಮತ್ತು ನಟಿ ಸಮಂತಾ ರುತ್​ ಪ್ರಭು ಅವರು ವಿಚ್ಛೇದನ ಪಡೆದಿದ್ದು ಬೇಸರದ ಸಂಗತಿ. ಅವರಿಬ್ಬರು ದೂರಾಗಿದ್ದಕ್ಕೆ ಕಾರಣ ಏನು ಎಂಬುದು ಸದ್ಯಕ್ಕಂತೂ ನಿಗೂಢವಾಗಿಯೇ ಉಳಿದುಕೊಂಡಿದೆ. ಡಿವೋರ್ಸ್​ ಪಡೆದ ಬಳಿಕ ಸಮಂತಾ (Samantha) ಅವರು ಸಿಂಗಲ್​ ಆಗಿದ್ದಾರೆ. ಆದರೆ ನಾಗ ಚೈತನ್ಯ ಅವರು ಏಕಾಂಗಿ ಆಗಿಲ್ಲ. ಅವರ ಜೀವನದಲ್ಲಿ ಬೇರೆ ನಟಿಯ ಎಂಟ್ರಿ ಆಗಿದೆ. ನಟಿ ಶೋಭಿತಾ ಧುಲಿಪಾಲ (Sobhita Dhulipala) ಜೊತೆ ಅವರು ಆಗಾಗ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರೂ ಜೊತೆಯಾಗಿ ವಾಸಿಸುತ್ತಿದ್ದಾರೆ ಎಂಬ ಗುಮಾನಿ ಇದೆ. ಈಗ ಶೋಭಿತಾ ಧುಲಿಪಾಲ ಮತ್ತು ನಾಗ ಚೈತನ್ಯ ಅವರು ಜೊತೆಯಾಗಿರುವ ಇನ್ನೊಂದು ಫೋಟೋ ವೈರಲ್​ ಆಗಿದೆ.

ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರ ನಡುವೆ ಆಪ್ತತೆ ಬೆಳೆದಿದೆ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಆದರೆ ಅವರಿಬ್ಬರು ತಮ್ಮ ಸಂಬಂಧದ ಬಗ್ಗೆ ಓಪನ್​ ಆಗಿ ಇನ್ನೂ ಮಾತನಾಡಿಲ್ಲ. ತಮ್ಮಿಬ್ಬರ ನಡುವೆ ಇರುವ ಸಂಬಂಧ ಏನು ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ. ಹಾಗಿದ್ದರೂ ಕೂಡ ಪರಸ್ಪರ ಡೇಟಿಂಗ್​ ಮಾಡುತ್ತಿದ್ದಾರೆ. ಆಗಾಗ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಶೋಭಿತಾ ಧುಲಿಪಾಲ ಅವರು ಹಿಂದಿ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರಿಗೆ 31 ವರ್ಷ ವಯಸ್ಸು. ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್​ ಪಡೆದ ಬಳಿಕ ನಾಗ ಚೈತನ್ಯ ಜೊತೆ ಶೋಭಿತಾ ಧುಲಿಪಾಲ ಹೆಸರು ತಳುಕು ಹಾಕಿಕೊಂಡಿತು. ವಿದೇಶದ ಹೋಟೆಲ್​ಗಳಲ್ಲಿ ಅವರಿಬ್ಬರು ಜೊತೆಯಾಗಿ ಕಾಲ ಕಳೆದಿರುವುದಕ್ಕೆ ಸಾಕ್ಷಿ ಕೂಡ ಸಿಕ್ಕಿದೆ.

ಇದನ್ನೂ ಓದಿ; ನಾಗ ಚೈತನ್ಯ ಮಾಡಿದ ಪರಸ್ತ್ರೀ ಸಹವಾಸದಿಂದಲೇ ಸಮಂತಾ ವಿಚ್ಛೇದನ? ವೈರಲ್​ ವಿಡಿಯೋ ಸಾಕ್ಷಿ

ಕೆಲವು ತಿಂಗಳ ಹಿಂದೆ ಲಂಡನ್​ನ ರೆಸ್ಟೋರೆಂಟ್​ವೊಂದರಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರು ಒಟ್ಟಿಗೆ ಇದ್ದಿದ್ದು ಜಗಜ್ಜಾಹೀರಾಯಿತು. ಆದರೂ ಸಹ ಅವರಿಬ್ಬರು ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿಲ್ಲ. ನಾಗ ಚೈತನ್ಯ ಅವರಿಗೆ ‘ಧೂತ’ ವೆಬ್​ ಸಿರೀಸ್​ ಮೂಲಕ ಗೆಲುವು ಸಿಕ್ಕಿದೆ. ‘ತಂಡೇಲ್​’ ಸಿನಿಮಾದ ಬಿಡುಗಡೆಯಾಗಿ ಅವರು ಕಾದಿದ್ದಾರೆ. ಆ ಸಿನಿಮಾದಲ್ಲಿ ಅವರು ಸಾಯಿ ಪಲ್ಲವಿ ಜೊತೆ ನಟಿಸಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾಗೆ ಭರ್ಜರಿ ಡಿಮ್ಯಾಂಡ್​ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM