AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನಾಯಿ-ಬೆಕ್ಕುಗಳ ಜತೆ ಒಂಟಿಯಾಗಿ ಸಾಯುತ್ತೀರಿ’ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು ನೋಡಿ

ನಾಗ ಚೈತನ್ಯ ಹಾಗೂ ಸಮಂತಾ ಇಬ್ಬರೂ ತಮ್ಮದೇ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅನೇಕರು ಸಮಂತಾ ಬಗ್ಗೆ ಟೀಕೆಯ ಮಾತುಗಳನ್ನು ಆಡಿದ್ದಾರೆ. ಇದಕ್ಕೆ ಅವರು ಕೂಲ್ ಆಗಿಯೇ ಉತ್ತರ ನೀಡುತ್ತಿದ್ದಾರೆ.

‘ನೀವು ನಾಯಿ-ಬೆಕ್ಕುಗಳ ಜತೆ ಒಂಟಿಯಾಗಿ ಸಾಯುತ್ತೀರಿ’ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು ನೋಡಿ
ಸಮಂತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 27, 2022 | 6:59 PM

Share

ನಟಿ ಸಮಂತಾ ಅವರು (Samantha) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ವಿಚ್ಛೇದನದ ಬಳಿಕ ಅವರು ಸಂಪೂರ್ಣ ಸಮಯವನ್ನು ಗೆಳೆಯರು ಹಾಗೂ ಪ್ರಾಣಿಗಳ ಜತೆ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಪೋಸ್ಟ್ ಮಾಡುತ್ತಿರುತ್ತಾರೆ. ಇತ್ತೀಚೆಗೆ ಸಮಂತಾ ಅವರು ಇನ್​ಸ್ಟಾಗ್ರಾಮ್ (Instagram) ಸ್ಟೋರಿಯಲ್ಲಿ ಶ್ವಾನದ ಫೋಟೋಗಳನ್ನು ಹಾಕುವುದು ಹೆಚ್ಚಿದೆ. ಇದೇ ವಿಚಾರಕ್ಕೆ ಸಮಂತಾ ಅವರನ್ನು ಟೀಕೆ ಮಾಡಲಾಗಿದೆ. ನಟಿ ಈ ವಿಚಾರಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ.

ಸಮಂತಾ ಅವರು ಕಳೆದ ವರ್ಷ ನಾಗ ಚೈತನ್ಯ ಜತೆಗೆ ವಿಚ್ಛೇದನ ಪಡೆದರು. ಅಕ್ಟೋಬರ್ ತಿಂಗಳಲ್ಲಿ ಈ ಬಗ್ಗೆ ಘೋಷಣೆ ಮಾಡಲಾಯಿತು. ಪ್ರೀತಿಸಿ ಮದುವೆ ಆದ ಇವರು ಬೇರೆ ಆಗುತ್ತಿರುವ ವಿಚಾರ ಅನೇಕರಿಗೆ ನಿಜಕ್ಕೂ ಶಾಕ್ ನೀಡಿತ್ತು. ನಾಗ ಚೈತನ್ಯ ಹಾಗೂ ಸಮಂತಾ ಇಬ್ಬರೂ ತಮ್ಮದೇ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಅನೇಕರು ಸಮಂತಾ ಬಗ್ಗೆ ಟೀಕೆಯ ಮಾತುಗಳನ್ನು ಆಡಿದ್ದಾರೆ. ಇದಕ್ಕೆ ಅವರು ಕೂಲ್ ಆಗಿಯೇ ಉತ್ತರ ನೀಡುತ್ತಿದ್ದಾರೆ.

ಇದನ್ನೂ ಓದಿ
Image
ಶೂಟಿಂಗ್ ವೇಳೆ ನಡೆಯಿತು ಭೀಕರ ಅವಘಡ; ಸಮಂತಾ-ವಿಜಯ್​ ದೇವರಕೊಂಡಗೆ ಗಾಯ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Happy Birthday Samantha: ಅಭಿಮಾನಿಗಳು ಸಮಂತಾಗೆ ಫಿದಾ ಆಗಲು ಈ ಚಿತ್ರಗಳೇ ಕಾರಣ..
Image
Samantha: ಸಮಂತಾ ಸ್ಟೈಲ್​ಗಿಲ್ಲ ಸರಿಸಾಟಿ; ಬಗೆಬಗೆಯ ಫ್ಯಾಶನ್ ಅವತಾರದಲ್ಲಿ ಮಿಂಚುವ ನಟಿ- ಫೋಟೋಗಳು ಇಲ್ಲಿವೆ

ಸಮಂತಾ ಅವರು ಶ್ವಾನದ ಜತೆಗೆ ಹೆಚ್ಚು ಸಮಯ ಕಳೆಯುತ್ತಿರುವ ಬಗ್ಗೆ ಅಭಿಮಾನಿಯೋರ್ವ ವ್ಯಂಗ್ಯವಾಡಿದ್ದ. ‘ನಾಯಿ ಮತ್ತು ಬೆಕ್ಕುಗಳ ಜತೆ ಸಮಂತಾ ಒಂಟಿಯಾಗಿ ಸಾಯುತ್ತಾಳೆ’ ಎಂದು ಬರೆದುಕೊಂಡಿದ್ದ. ಇದಕ್ಕೆ ಸಮಂತಾ ಸಿಟ್ಟು ಮಾಡಿಕೊಳ್ಳಲಿಲ್ಲ. ಬದಲಿಗೆ ‘ನಾನು ಅದೃಷ್ಟಶಾಲಿ ಎಂದುಕೊಳ್ಳುತ್ತೇನೆ’ ಎಂದಷ್ಟೇ ಹೇಳಿದ್ದಾರೆ. ಸಮಂತಾ ಉತ್ತರಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಸಮಂತಾ ಇತ್ತೀಚೆಗೆ ‘ಖುಷಿ’ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸುತ್ತಿದ್ದಾರೆ. ಶೂಟಿಂಗ್ ವೇಳೆ ಕಾರು ನೀರಿಗೆ ಬಿದ್ದಿದೆ, ಸಮಂತಾ ಹಾಗೂ ವಿಜಯ್​ಗೆ ಗಾಯಗಳಾಗಿವೆ ಎಂದು ವರದಿ ಆಗಿತ್ತು. ಆದರೆ, ಈ ವರದಿ ಸುಳ್ಳು ಎಂಬುದು ನಂತರ ತಿಳಿದು ಬಂದಿತ್ತು. ಸದ್ಯ, ‘ಖುಷಿ’ ಸಿನಿಮಾದ ಒಂದು ಹಂತದ ಶೂಟಿಂಗ್ ಮಾತ್ರ ಮುಗಿದಿದೆ. ಇದಲ್ಲದೆ, ಹಲವು ಸಿನಿಮಾ ಕೆಲಸಗಳಲ್ಲಿ ಸಮಂತಾ ಬ್ಯುಸಿ ಇದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ