‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು.

‘ಸಮಂತಾ ನನ್ನ ಮೊಮ್ಮಗಳಿದ್ದಂತೆ’; ನಟಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದ ವೈದ್ಯನ ಹೊಸ ಹೇಳಿಕೆ
ಡಾ. ಸಿ.ಎಲ್​. ವೆಂಕಟ್ ಮತ್ತು ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 24, 2021 | 4:55 PM

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡು ದೂರವಾಗಿದ್ದಾರೆ. ಇವರು ಬೇರೆ ಆಗೋಕೆ ಕಾರಣ ಏನು ಎಂಬುದು ಮಾತ್ರ ಇನ್ನೂ ಪ್ರಶ್ನೆಯಾಗೇ ಉಳಿದಿದೆ. ಅಕ್ಕಿನೇನಿ ಕುಟುಂಬದ ಯಾರೊಬ್ಬರೂ ಈ ಬಗ್ಗೆ ಮಾತನಾಡಿಲ್ಲ. ಸಮಂತಾ ಕೂಡ ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಸಮಂತಾ ಬಗ್ಗೆ ವೈದ್ಯರೊಬ್ಬರು ಗಂಭೀರ ಆರೋಪ ಮಾಡಿದ್ದರು. ಅವರಿಗೆ ಸಾಕಷ್ಟು ಅಕ್ರಮ ಸಂಬಂಧ ಇದೆ ಎಂದಿದ್ದರು. ಆದರೆ, ಈಗ ವರಸೆ ಬದಲಿಸಿದ್ದಾರೆ.

ಉದರ ತಜ್ಞ ಡಾ. ಸಿ.ಎಲ್​. ವೆಂಕಟ್​ ರಾವ್​ ಅವರು ಶಾಕಿಂಗ್​ ಹೇಳಿಕೆ ನೀಡಿದ್ದರು. ‘ಸಮಂತಾ ಅವರು ಸಾಕಷ್ಟು ಅನೈತಿಕ ಸಂಬಂಧ ಹೊಂದಿದ್ದರು. ಈ ಕಾರಣಕ್ಕೆ ಅವರದ್ದು ವಿಚ್ಛೇದನವಾಗಿದೆ’ ಎಂದು ಅವರು ಹೇಳಿದ್ದರು. ಈ ವಿಚಾರದಲ್ಲಿ ಸಮಂತಾ ಸುಮ್ಮನೆ ಕೂತಿಲ್ಲ. ವೆಂಕಟ್​ ರಾವ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಯಾವಾಗ ವಿಚಾರ ಕೋರ್ಟ್​ ಮೆಟ್ಟಿಲೇರಿತೋ ಆಗ, ವೆಂಕಟ್​ ರಾವ್ ತಮ್ಮ ಮಾತು ಬದಲಿಸಿದ್ದಾರೆ.

‘ಸಮಂತಾ ನನ್ನ ಮೊಮ್ಮಗಳು ಇದ್ದಂತೆ. ಅವರಿಗೆ ನ್ಯಾಯ ಸಿಗುವಂತೆ ಮಾಡಲು ನನ್ನ ಬೆಂಬಲ ಸದಾ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಬಂದ ಪೋಸ್ಟ್​ಗಳನ್ನು ನೋಡಿ ನಾನು ಈ ರೀತಿಯ ಬೇಜವಾಬ್ದಾರಿಯುತ ಹೇಳಿಕೆ ನೀಡಿದೆ’ ಎಂದು ವರಸೆ ಬದಲಿಸಿದ್ದಾರೆ ಡಾ. ಸಿ.ಎಲ್​. ವೆಂಕಟ್​ ರಾವ್.

ಮಾನ ಹಾನಿ ಮಾಡಿದ ಆರೋಪದಲ್ಲಿ  ಸಮಂತಾ ಹೈದರಾಬಾದ್​ನ ಸ್ಥಳೀಯ ನ್ಯಾಯಾಲಯದಲ್ಲಿ  ಮೊಕದ್ದಮೆ ಹೂಡಿದ್ದಾರೆ. ಈ ಪ್ರಕರಣದ​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ. ‘ಸೆಲೆಬ್ರಿಟಿಗಳು ಸಾರ್ವಜನಿಕ ವಲಯದಲ್ಲಿ ಇರುತ್ತಾರೆ. ಆ ಕಾರಣದಿಂದ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡುವುದು ಕೂಡ ಸಹಜ. ಅದಕ್ಕೆಲ್ಲ ಮಾನಹಾನಿ ಮೊಕದ್ದಮೆ ದಾಖಲಿಸುವ ಬದಲು, ಅಂಥ ಮಾಹಿತಿ ಪ್ರಸಾರ ಮಾಡಿದವರು ಕ್ಷಮೆ ಕೇಳಲಿ ಅಂತ ಸಮಂತಾ ಒತ್ತಾಯಿಸಬಹುದು’ ಎಂದು ಕೋರ್ಟ್​ ಹೇಳಿದೆ ಎಂಬುದಾಗಿ ವರದಿ ಆಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹಬ್ಬಿಸಿದವರಿಗೆ ನಡುಕ ಹುಟ್ಟಿಸಿದ ಸಮಂತಾ; ಯಾರಿಗೆಲ್ಲಾ ತೊಂದರೆ?

ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ