Samantha: ‘ನನ್ನ ಪರಿಸ್ಥಿತಿ ನಿಮಗೆ ಬರದಿರಲಿ’; ಟ್ರೋಲ್ ಮಾಡಿದವರಿಗೂ ಒಳ್ಳೆಯದನ್ನೇ ಬಯಸಿದ ಸಮಂತಾ

Myositis ಕಾಯಿಲೆ ಬಂದ ವಿಚಾರವನ್ನು ಸಮಂತಾ ಕಳೆದವರ್ಷ ಅಧಿಕೃತ ಮಾಡಿದರು. ಆ ಬಳಿಕ ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಚಾರವನ್ನು ಅವರು ಅಧಿಕೃತವಾಗಿ ಹೇಳಿಕೊಂಡಿಲ್ಲ.

Samantha: ‘ನನ್ನ ಪರಿಸ್ಥಿತಿ ನಿಮಗೆ ಬರದಿರಲಿ’; ಟ್ರೋಲ್ ಮಾಡಿದವರಿಗೂ ಒಳ್ಳೆಯದನ್ನೇ ಬಯಸಿದ ಸಮಂತಾ
ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 10, 2023 | 7:16 AM

ನಟಿ ಸಮಂತಾ (Samantha) ಅವರು Myositis ಹೆಸರಿನ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಸಮಂತಾ ಆರೋಗ್ಯ ತುಂಬಾನೇ ಹದಗೆಟ್ಟಿತ್ತು. ಈ ಸಮಸ್ಯೆ ಎದುರಾದರೆ ಸ್ನಾಯುಗಳಲ್ಲಿ ಸೆಳೆತ ಶುರುವಾಗುತ್ತದೆ. ಪರಿಸ್ಥಿತಿ ಕೈಮೀರಿದರೆ ನಡೆಯಲೂ ಸಾಧ್ಯವಾಗುವುದಿಲ್ಲ. ಸಮಂತಾ ಅವರು ತಿಂಗಳಾನುಗಟ್ಟಲೆ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ‘ಶಾಕುಂತಲಂ’ ಸಿನಿಮಾದ ಟ್ರೇಲರ್ ಲಾಂಚ್ ವೇಳೆ ಸಮಂತಾ ಪೋಸ್ ನೀಡಿದ್ದಾರೆ. ಅವರಲ್ಲಿ ಮೊದಲಿನ ಚಾರ್ಮ್​ ಇಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಸಮಂತಾ ತಿರುಗೇಟು ನೀಡಿದ್ದಾರೆ.

Myositis ಕಾಯಿಲೆ ಬಂದ ವಿಚಾರವನ್ನು ಸಮಂತಾ ಕಳೆದವರ್ಷ ಅಧಿಕೃತ ಮಾಡಿದರು. ಆ ಬಳಿಕ ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಚಾರವನ್ನು ಅವರು ಅಧಿಕೃತವಾಗಿ ಹೇಳಿಕೊಂಡಿಲ್ಲ. ಸಮಂತಾ ಅವರು ‘ಶಾಕುಂತಲಂ’ ಟ್ರೇಲರ್ ಲಾಂಚ್​​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ವೇದಿಕೆ ಮೇಲೆ ಅವರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಸುದ್ದಿಗೋಷ್ಠಿಯ ಫೋಟೋಗಳನ್ನು ಕೆಲ ಪೇಜ್​ಗಳು ಶೇರ್ ಮಾಡಿಕೊಂಡಿವೆ. ‘ಸಮಂತಾ ಮೊದಲಿನ ಚಾರ್ಮ್​ ಉಳಿಸಿಕೊಂಡಿಲ್ಲ’ ಎಂದು ಬರೆಯಲಾಗಿತ್ತು. ಈ ಟ್ವೀಟ್​ನ ರೀಟ್ವೀಟ್ ಮಾಡಿರುವ ಸಮಂತಾ, ‘ನಾನು ಚಿಕಿತ್ಸೆ ಪಡೆದುಕೊಂಡಷ್ಟು ಮತ್ತು ಔಷಧಗಳನ್ನು ತೆಗೆದುಕೊಂಡಷ್ಟು ನೀವು ತೆಗೆದುಕೊಳ್ಳದಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀವು ಮತ್ತಷ್ಟು ಚಾರ್ಮ್​ ಪಡೆಯಲು ನನ್ನ ಕಡೆಯಿಂದ ಒಂದಷ್ಟು ಪ್ರೀತಿ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

ಸಮಂತಾ ಮಾಡಿರುವ ಟ್ವೀಟ್​ ಸಖತ್ ವೈರಲ್ ಆಗಿದೆ. ಅನಾರೋಗ್ಯಕ್ಕೆ ತುತ್ತಾದ ನಂತರ ಸಮಂತಾ ಬಗ್ಗೆ ಅನೇಕರು ಈ ರೀತಿ ಹೇಳಿದರೂ ಅವರು ಇಷ್ಟು ಕೂಲ್ ಆಗಿ ಒಳ್ಳೆಯ ಮನಸ್ಸಿನಿಂದ ಟ್ವೀಟ್ ಮಾಡುತ್ತಿದ್ದಾರೆ ಅನ್ನೋದು ಖುಷಿಯ ವಿಚಾರ ಎಂದು ಅನೇಕರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Samantha: ವೇದಿಕೆ ಮೇಲೆ ಎಲ್ಲರ ಎದುರು ಕಣ್ಣೀರು ಹಾಕಿದ ಸಮಂತಾ ರುತ್​ ಪ್ರಭು; ವಿಡಿಯೋ ವೈರಲ್​

‘ಶಾಕುಂತಲಂ’ ಸಿನಿಮಾದ ಟ್ರೇಲರ್ ಜನವರಿ 9ರಂದು ರಿಲೀಸ್ ಆಗಿದೆ. ಪೌರಾಣಿಕ ಕಥಾಹಂದರವನ್ನು ಈ ಚಿತ್ರ ಒಳಗೊಂಡಿದೆ. ಈ ಸಿನಿಮಾ ಫೆಬ್ರವರಿ 17ರಂದು ತೆರೆಗೆ ಬರುತ್ತಿದೆ. ತೆಲುಗು ಮಾತ್ರವಲ್ಲದೆ, ಕನ್ನಡ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!