AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ಪುಷ್ಪ’ ಐಟಮ್​ ಸಾಂಗ್​ನಲ್ಲಿ ಸಮಂತಾ ಹಾಟ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ

ಸಮಂತಾ ಅವರು ವಿಚ್ಛೇದನ ಪಡೆದ ಬಳಿಕ ಮತ್ತೆ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರುವ ಅವರು ಸಿನಿಮಾಗಳ ಆಯ್ಕೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

Samantha: ‘ಪುಷ್ಪ’ ಐಟಮ್​ ಸಾಂಗ್​ನಲ್ಲಿ ಸಮಂತಾ ಹಾಟ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ
ಸಮಂತಾ
TV9 Web
| Edited By: |

Updated on: Dec 09, 2021 | 9:55 AM

Share

ನಟ ಅಲ್ಲು ಅರ್ಜುನ್​ ಹಾಗೂ ನಿರ್ದೇಶಕ ಸುಕುಮಾರ್​ ಕಾಂಬಿನೇಷನ್​​ನಲ್ಲಿ ಮೂಡಿಬರುತ್ತಿರುವ ‘ಪುಷ್ಪ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸಿನಿಮಾ ಹೇಗಿದೆ ಎಂಬುದರ ಝಲಕ್​ ಇತ್ತೀಚೆಗೆ ರಿಲೀಸ್​ ಆದ ಟ್ರೇಲರ್​ ಮೂಲಕ ದೊರೆತಿತ್ತು. ಅಲ್ಲು ಅರ್ಜುನ್​ ಅವರ ರಾ ಲುಕ್​ ಎಲ್ಲರಿಗೂ ಇಷ್ಟವಾಗಿದೆ. ಈಗ ಈ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿರುವ ಸಮಂತಾ ಅವರ ಲುಕ್​ ವೈರಲ್​ ಆಗಿದೆ. ಅವರ ಹಾಟ್​ ಅವತಾರ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಸಮಂತಾ ಅವರು ವಿಚ್ಛೇದನ ಪಡೆದ ಬಳಿಕ ಮತ್ತೆ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರುವ ಅವರು ಸಿನಿಮಾಗಳ ಆಯ್ಕೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಐಟಂ ಸಾಂಗ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದ ಬಗ್ಗೆ ಚಿತ್ರತಂಡದಿಂದಾಗಲೀ ಸಮಂತಾ ಕಡೆಯಿಂದಾಗಿ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಅವರು ಪಡೆಯುತ್ತಾರೆ ಎನ್ನಲಾದ ಸಂಭಾವನೆ ಮೊತ್ತ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ. ಈ ಐಟಂ ಸಾಂಗ್​ನಲ್ಲಿ ನಟಿಸಲು ಸಮಂತಾ ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಸುದ್ದಿ ಹರಡಿದೆ. ಹೀಗಿರುವಾಗಲೇ ಈ ಹಾಡಿನ ಪೋಸ್ಟರ್​ ಒಂದನ್ನು ರಿಲೀಸ್​ ಮಾಡಲಾಗಿದೆ.

ಸಮಂತಾ ನೀಲಿ ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋದಲ್ಲಿ ಅವರ ಲುಕ್ ಮಾದಕವಾಗಿದೆ. ಈ ವಿಶೇಷ ಹಾಡನ್ನು ನಾಳೆ ಅಂದರೆ ಡಿಸೆಂಬರ್​ 10ರಂದು ರಿಲೀಸ್​ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಈ ಮಾತನ್ನು ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಫೋಟೋದಲ್ಲಿ ಅವರು ಇಷ್ಟು ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಿರುವಾಗ ಅವರು ಹೆಜ್ಜೆ ಹಾಕಿರುವ ಹಾಡು ಇನ್ನು ಹೇಗೆ ಇರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಿದೆ.

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಸುಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ಅವರ ಬಹುತೇಕ ಸಿನಿಮಾಗಳಲ್ಲಿ ಒಂದು ಐಟಂ ಸಾಂಗ್​ ಇರುತ್ತದೆ. ಅದೇ ರೀತಿ ‘ಪುಷ್ಪ’ ಸಿನಿಮಾದಲ್ಲೂ ಒಂದು ಭರ್ಜರಿ ಐಟಂ ಸಾಂಗ್​ ಇಟ್ಟಿದ್ದಾರೆ. ಈ ಹಾಡಿನಲ್ಲಿ ನರ್ತಿಸಲು ಈ ಮೊದಲು ಪೂಜಾ ಹೆಗ್ಡೆ ಮತ್ತು ಸನ್ನಿ ಲಿಯೋನ್​ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ ಆ ನಟಿಯರು ಒಪ್ಪಿಕೊಂಡಿಲ್ಲ. ಅಂತಿಮವಾಗಿ ಸಮಂತಾ ಅವರು ಒಪ್ಪಿಕೊಂಡರು.

ಇದನ್ನೂ ಓದಿ: ಕತ್ರಿನಾ-ವಿಕ್ಕಿ ಮದುವೆಯ ಅತಿಥಿಗಳಿಗೆ ವೆಲ್​ಕಮ್ ನೋಟ್​; ಈ ಮೂಲಕ ಮುಖ್ಯ ವಿಚಾರ ತಿಳಿಸಿದ ಜೋಡಿ

ವಿಕ್ಕಿ ಕೌಶಲ್​ಗಿಂತ ಕತ್ರಿನಾ ಕೈಫ್​ ಎಷ್ಟು ಶ್ರೀಮಂತೆ? ಇಲ್ಲಿದೆ ಇಬ್ಬರ ನೆಟ್​ವರ್ತ್​

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ