
ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ‘ಪುಷ್ಪ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸಿನಿಮಾ ಹೇಗಿದೆ ಎಂಬುದರ ಝಲಕ್ ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಮೂಲಕ ದೊರೆತಿತ್ತು. ಅಲ್ಲು ಅರ್ಜುನ್ ಅವರ ರಾ ಲುಕ್ ಎಲ್ಲರಿಗೂ ಇಷ್ಟವಾಗಿದೆ. ಈಗ ಈ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿರುವ ಸಮಂತಾ ಅವರ ಲುಕ್ ವೈರಲ್ ಆಗಿದೆ. ಅವರ ಹಾಟ್ ಅವತಾರ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸಮಂತಾ ಅವರು ವಿಚ್ಛೇದನ ಪಡೆದ ಬಳಿಕ ಮತ್ತೆ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರುವ ಅವರು ಸಿನಿಮಾಗಳ ಆಯ್ಕೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಐಟಂ ಸಾಂಗ್ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದ ಬಗ್ಗೆ ಚಿತ್ರತಂಡದಿಂದಾಗಲೀ ಸಮಂತಾ ಕಡೆಯಿಂದಾಗಿ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಅವರು ಪಡೆಯುತ್ತಾರೆ ಎನ್ನಲಾದ ಸಂಭಾವನೆ ಮೊತ್ತ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ. ಈ ಐಟಂ ಸಾಂಗ್ನಲ್ಲಿ ನಟಿಸಲು ಸಮಂತಾ ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಸುದ್ದಿ ಹರಡಿದೆ. ಹೀಗಿರುವಾಗಲೇ ಈ ಹಾಡಿನ ಪೋಸ್ಟರ್ ಒಂದನ್ನು ರಿಲೀಸ್ ಮಾಡಲಾಗಿದೆ.
ಸಮಂತಾ ನೀಲಿ ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋದಲ್ಲಿ ಅವರ ಲುಕ್ ಮಾದಕವಾಗಿದೆ. ಈ ವಿಶೇಷ ಹಾಡನ್ನು ನಾಳೆ ಅಂದರೆ ಡಿಸೆಂಬರ್ 10ರಂದು ರಿಲೀಸ್ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಈ ಮಾತನ್ನು ಕೇಳಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಫೋಟೋದಲ್ಲಿ ಅವರು ಇಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಿರುವಾಗ ಅವರು ಹೆಜ್ಜೆ ಹಾಕಿರುವ ಹಾಡು ಇನ್ನು ಹೇಗೆ ಇರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಿದೆ.
ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಸುಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಬಹುತೇಕ ಸಿನಿಮಾಗಳಲ್ಲಿ ಒಂದು ಐಟಂ ಸಾಂಗ್ ಇರುತ್ತದೆ. ಅದೇ ರೀತಿ ‘ಪುಷ್ಪ’ ಸಿನಿಮಾದಲ್ಲೂ ಒಂದು ಭರ್ಜರಿ ಐಟಂ ಸಾಂಗ್ ಇಟ್ಟಿದ್ದಾರೆ. ಈ ಹಾಡಿನಲ್ಲಿ ನರ್ತಿಸಲು ಈ ಮೊದಲು ಪೂಜಾ ಹೆಗ್ಡೆ ಮತ್ತು ಸನ್ನಿ ಲಿಯೋನ್ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ಆ ನಟಿಯರು ಒಪ್ಪಿಕೊಂಡಿಲ್ಲ. ಅಂತಿಮವಾಗಿ ಸಮಂತಾ ಅವರು ಒಪ್ಪಿಕೊಂಡರು.
ಇದನ್ನೂ ಓದಿ: ಕತ್ರಿನಾ-ವಿಕ್ಕಿ ಮದುವೆಯ ಅತಿಥಿಗಳಿಗೆ ವೆಲ್ಕಮ್ ನೋಟ್; ಈ ಮೂಲಕ ಮುಖ್ಯ ವಿಚಾರ ತಿಳಿಸಿದ ಜೋಡಿ
ವಿಕ್ಕಿ ಕೌಶಲ್ಗಿಂತ ಕತ್ರಿನಾ ಕೈಫ್ ಎಷ್ಟು ಶ್ರೀಮಂತೆ? ಇಲ್ಲಿದೆ ಇಬ್ಬರ ನೆಟ್ವರ್ತ್