Samantha: ‘ನಾನು ಪರ್ಫೆಕ್ಟ್​​ ಅಲ್ಲ’; ತಾಯಿ ಹೇಳಿದ ಮಾತುಗಳನ್ನು ಡಿವೋರ್ಸ್​ ಬಳಿಕ ಹಂಚಿಕೊಂಡ ಸಮಂತಾ

‘ನನ್ನ ತಾಯಿ ಹೇಳಿದ್ದರು’ ಎಂಬ ಕ್ಯಾಪ್ಷನ್​ನೊಂದಿಗೆ ಕೆಲವೊಂದು ಅಂಶಗಳನ್ನು ಸಮಂತಾ ಪಟ್ಟಿ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಸಕ್ರಿಯವಾಗಿರುವ ಅವರು ಅನೇಕ ವಿಚಾರಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

Samantha: ‘ನಾನು ಪರ್ಫೆಕ್ಟ್​​ ಅಲ್ಲ’; ತಾಯಿ ಹೇಳಿದ ಮಾತುಗಳನ್ನು ಡಿವೋರ್ಸ್​ ಬಳಿಕ ಹಂಚಿಕೊಂಡ ಸಮಂತಾ
ಸಮಂತಾ
Follow us
TV9 Web
| Updated By: ಮದನ್​ ಕುಮಾರ್​

Updated on: Nov 02, 2021 | 11:43 AM

ನಟಿ ಸಮಂತಾ ಹೊಸ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಡಿವೋರ್ಸ್​ ಮೂಲಕ ಅಧಿಕೃತವಾಗಿ ಅಂತ್ಯ ಹಾಡಿದ ಬಳಿಕ ಸಮಂತಾ ಬದುಕಿನಲ್ಲಿ ಹೊಸ ಬದಲಾವಣೆಯ ಗಾಳಿ ಬೀಸಿದೆ. ಅನೇಕ ಸ್ಥಳಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ಅನೇಕ ವಿಚಾರಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಜನರಿಗೆ ಸ್ಫೂರ್ತಿ ತುಂಬುವಂತಹ ಮಾತುಗಳನ್ನು ಸಮಂತಾ ಆಡುತ್ತಿದ್ದಾರೆ. ಈಗ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯನ್ನು ಶೇರ್​ ಮಾಡಿಕೊಂಡಿರುವ ಕೆಲವು ಅಂಶಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ.

‘ನನ್ನ ತಾಯಿ ಹೇಳಿದ್ದರು’ ಎಂಬ ಕ್ಯಾಪ್ಷನ್​ನೊಂದಿಗೆ ಕೆಲವೊಂದು ಅಂಶಗಳನ್ನು ಸಮಂತಾ ಪಟ್ಟಿ ಮಾಡಿದ್ದಾರೆ. ‘ನಾನು ಸ್ಟ್ರಾಂಗ್​, ಬೇಗ ಚೇತರಿಸಿಕೊಳ್ಳುತ್ತೇನೆ. ನಾನು ಪರ್ಫೆಕ್ಟ್​ ಅಲ್ಲ. ನನ್ನತನಕ್ಕೆ ನಾನು ಪರ್ಫೆಕ್ಟ್​. ನಾನೆಂದೂ ಬಿಟ್ಟು ಕೊಡುವುದಿಲ್ಲ. ನಾನು ಪ್ರೀತಿ ಪಾತ್ರಳು. ನಾನು ಬದ್ಧತೆ ಹೊಂದಿರುವವಳು. ನಾನು ಮನುಷ್ಯಳು. ನಾನು ವಾರಿಯರ್​’ ಎಂಬ ಬರಹವುಳ್ಳ ಪೋಸ್ಟರ್​ ಅನ್ನು ಸಮಂತಾ ಶೇರ್​ ಮಾಡಿಕೊಂಡಿದ್ದಾರೆ.

ಕೆಲವೇ ದಿನಗಳ ಹಿಂದೆ ಹೆಣ್ಣುಮಕ್ಕಳ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ ಸಮಂತಾ ತಮ್ಮ ಅನಿಸಿಕೆ ಹಂಚಿಕೊಂಡಿದ್ದರು. ‘ನಿಮ್ಮ ಮಗಳನ್ನು ಸಮರ್ಥವಾಗಿ ಬೆಳೆಸಿ. ಈ ಮೂಲಕ ತಾವು ಯಾರನ್ನು ಮದುವೆ ಆಗುತ್ತೇವೆ ಎನ್ನುವ ಚಿಂತೆಯೇ ಅವರಿಗೆ ಬರದಿರಲಿ. ಮಗಳ ಮದುವೆಗೆ ಹಣ ಕೂಡಿಡುವ ಬದಲು, ಅವರ ಶಿಕ್ಷಣಕ್ಕೆ ಆ ಹಣ ಬಳಸಿ. ಅವರನ್ನು ಮದುವೆಗೆ ಮಾನಸಿಕವಾಗಿ ಸಿದ್ಧಪಡಿಸುವ ಬದಲು ಅವರನ್ನು ವೈಯಕ್ತಿಕವಾಗಿ ಗಟ್ಟಿಗೊಳಿಸಿ. ಸೆಲ್ಫ್​ ಲವ್​, ಆತ್ಮವಿಶ್ವಾಸವನ್ನು ಅವರಲ್ಲಿ ಬೆಳೆಸಿ’ ಎಂದು ಸಮಂತಾ ಮನವಿ ಮಾಡಿಕೊಂಡಿದ್ದರು.

ನಾಗ ಚೈತನ್ಯಗೆ ವಿಚ್ಛೇದನ ನೀಡಿದ ಬಳಿಕ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್​ ಆಗಿದ್ದಾರೆ. ಅಲ್ಲದೇ ಹಲವು ಸ್ಥಳಗಳಿಗೆ ಅವರು ಪ್ರವಾಸ ಕೈಗೊಂಡಿದ್ದಾರೆ. ಪ್ರಕೃತಿ ಸೌಂದರ್ಯದ ತಾಣಗಳ ಜೊತೆಗೆ ಆಧ್ಯಾತ್ಮಿಕ ಕ್ಷೇತ್ರಗಳಿಗೂ ಭೇಟಿ ನೀಡುತ್ತಿದ್ದಾರೆ. ಪೂಜೆ, ಹೋಮ-ಹವನ ಮಾಡಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮಹಾರಿಷಿ ಮಹೇಶ್​ ಯೋಗಿ ಆಶ್ರಮದ ಧ್ಯಾನ ಕೇಂದ್ರಕ್ಕೆ ತೆರಳಿದ್ದರು. ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿ ಯಶಸ್ಸಿನ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಸದ್ಯ ಅವರು ತೆಲುಗಿನ ‘ಶಾಕುಂತಲಂ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾ ಕೂಡ ಅನೌನ್ಸ್​ ಆಗಿದೆ. ಅದರ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ.

ಇದನ್ನೂ ಓದಿ:

‘ಆತ ಸಲಿಂಗಕಾಮಿ, ಅಂಥ ವ್ಯಕ್ತಿ ಜತೆ ಸಮಂತಾ ಸಂಬಂಧ ಬೆಳೆಸಲ್ಲ’; ನಟಿ ಶ್ರೀರೆಡ್ಡಿ ಶಾಕಿಂಗ್​ ಹೇಳಿಕೆ

ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ