AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದಿಂದ ಸಮಂತಾ 50 ಕೋಟಿ ರೂ. ದರೋಡೆ ಮಾಡಿದ್ದಾರೆ ಎಂದ ನೆಟ್ಟಿಗ: ನಟಿಯ ಖಡಕ್​ ಉತ್ತರವೇನು?

Samantha | Troll: ನೆಟ್ಟಿಗನ ಖಾರದ ಕಮೆಂಟ್​ ಕಂಡು ಸಮಂತಾ ಬೇಸರ ಮಾಡಿಕೊಂಡಿದ್ದಾರೆ. ಆದರೆ ಅವರು ತುಂಬ ಸಭ್ಯವಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ವಿಚ್ಛೇದನದಿಂದ ಸಮಂತಾ 50 ಕೋಟಿ ರೂ. ದರೋಡೆ ಮಾಡಿದ್ದಾರೆ ಎಂದ ನೆಟ್ಟಿಗ: ನಟಿಯ ಖಡಕ್​ ಉತ್ತರವೇನು?
ಸಮಂತಾ
TV9 Web
| Edited By: |

Updated on:Dec 22, 2021 | 2:14 PM

Share

ವೈಯಕ್ತಿಕ ಜೀವನದಲ್ಲಿ ಏನೇ ಕಿರಿಕ್​ ಇದ್ದರೂ ಕೂಡ ನಟಿ ಸಮಂತಾ (Samantha) ಅವರು ವೃತ್ತಿಜೀವನದಲ್ಲಿ ಬ್ಯಾಕ್​ ಟು ಬ್ಯಾಕ್​ ಯಶಸ್ಸು ಪಡೆಯುತ್ತಿದ್ದಾರೆ. ನಾಗ ಚೈತನ್ಯ (Naga Chaitanya) ಅವರ ಜತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ, ವಿಚ್ಛೇದನ (Divorce) ಪಡೆದುಕೊಂಡ ಬಳಿಕ ಸಮಂತಾ ಅವರಿಗೆ ಇದ್ದ ಡಿಮ್ಯಾಂಡ್​​ ಹೆಚ್ಚಿದೆ. ಇತ್ತೀಚೆಗೆ ಅವರು ಡ್ಯಾನ್ಸ್​ ಮಾಡಿದ ‘ಹು ಅಂತಿಯಾ ಮಾವ..’ ಹಾಡು ಸೂಪರ್​ ಹಿಟ್​ ಆಯಿತು. ಅವರ ಅಭಿಮಾನಿ ಬಳಗ ದೊಡ್ಡದಾಯಿತು. ಆದರೆ ಒಂದು ವರ್ಗದ ಜನರು ಸಮಂತಾರನ್ನು ದ್ವೇಷಿಸುತ್ತಿದ್ದಾರೆ. ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಸಮಂತಾ ಅವರನ್ನು ಸಿಕ್ಕಾಪಟ್ಟೆ ಟ್ರೋಲ್​ (Troll) ಮಾಡಲಾಗುತ್ತಿದೆ.

ಸಮಾನ್ಯವಾಗಿ ಟ್ರೋಲ್​ಗಳಿಗೆ ಸಮಂತಾ ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಕೆಲವು ಟ್ರೋಲ್​ಗಳನ್ನು ಸಿಹಿಸಿಕೊಳ್ಳುವುದು ಕಷ್ಟ. ಇತ್ತೀಚೆಗೆ ನೆಟ್ಟಿಗನೊಬ್ಬ ತುಂಬ ಖಾರವಾಗಿ ಸಮಂತಾ ಬಗ್ಗೆ ಕಮೆಂಟ್​ ಮಾಡಿದ್ದ. ಅದನ್ನು ಕಂಡು ಸಮಂತಾ ಅಭಿಮಾನಿಗಳಿಗೆ ಬೇಸರವಾಗಿದೆ. ‘ವಿಚ್ಛೇದನ ಪಡೆದು ಹಾಳಾದ ಸೆಕೆಂಡ್​ ಹ್ಯಾಂಡ್​ ಐಟಂ ಈ ಸಮಂತಾ. ಸಂಭಾವಿತ ವ್ಯಕ್ತಿಯಿಂದ ತೆರಿಗೆ ರಹಿತ 50 ಕೋಟಿ ರೂ. ಹಣವನ್ನು ದರೋಡೆ ಮಾಡಿದ್ದಾರೆ’ ಎಂದು ಆತ ಕಮೆಂಟ್​ ಮಾಡಿದ್ದಾನೆ.

ಈ ಕಮೆಂಟ್​ ಕಂಡು ಸಮಂತಾ ಬೇಸರ ಮಾಡಿಕೊಂಡಿದ್ದಾರೆ. ಆದರೆ ಅವರು ತುಂಬ ಸಭ್ಯವಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮಗೆ ದೇವರ ಆಶೀರ್ವಾದ ಸಿಗಲಿ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸಮಂತಾ ಬಗ್ಗೆ ಕೇಳಿಬಂದ ಅಂತೆ-ಕಂತೆಗಳು ಒಂದೆರಡಲ್ಲ. ಯೂಟ್ಯೂಬ್​ನಲ್ಲಿ ಅವರ ಕುರಿತು ಇಲ್ಲಸಲ್ಲದ ಅನೇಕ ಗಾಸಿಪ್​ಗಳನ್ನು ಹರಡಿಸಲಾಗಿತ್ತು. ಅವುಗಳ ವಿರುದ್ಧ ಅವರು ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದರು.

ಸಮಂತಾ ಕೈಯಲ್ಲಿ ಈಗ ಅನೇಕ ಆಫರ್​ಗಳಿವೆ. ಫಿಲಿಪ್​ ಜಾನ್​ ನಿರ್ದೇಶನದ ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಇಂಗ್ಲಿಷ್​ ಸಿನಿಮಾದಲ್ಲಿ ದ್ವಿಲಿಂಗಿ​ ಮಹಿಳೆಯ ಪಾತ್ರ ಮಾಡುತ್ತಿದ್ದಾರೆ. ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಲೈಂಗಿಕ ಆಸಕ್ತಿ ಇರುವ ತಮಿಳು ಮಹಿಳೆಯಾಗಿ ಸಮಂತಾ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಬಗ್ಗೆ ಅವರು ವಿಶೇಷ ಆಸಕ್ತಿ ಇಟ್ಟುಕೊಂಡಿದ್ದಾರೆ. ‘ಇದು ನನಗೆ ಹೊಸ ಪ್ರಪಂಚ. ನಾನು ಕೊನೆ ಬಾರಿಗೆ ಆಡಿಷನ್​ ನೀಡಿದ್ದು 2009ರಲ್ಲಿ ‘ಏ ಮಾಯ ಚೇಸಾವೆ’ ಚಿತ್ರಕ್ಕಾಗಿ. 12 ವರ್ಷಗಳ ಬಳಿಕ ಮತ್ತೆ ಆಡಿಷನ್​ ನೀಡಿದ್ದೇನೆ. ಮತ್ತೆ ಅದೇ ರೀತಿ ನರ್ವಸ್​ ಆಗಿದ್ದೇನೆ. ಫಿಲಿಪ್​ ಜಾನ್ ಜೊತೆ ಕೆಲಸ ಮಾಡುವುದು ತುಂಬ ಅಪರೂಪದ ಅವಕಾಶ. ಈ ಪಾತ್ರಕ್ಕೆ ಆಯ್ಕೆ ಆಗಿರುವುದು ತುಂಬ ಖುಷಿ ಆಗುತ್ತಿದೆ. ಈ ಪಯಣ ಆರಂಭಿಸಲು ಕಾತರದಿಂದ ಕಾಯುತ್ತಿದ್ದೇನೆ’ ಎಂದು ಸಮಂತಾ ಹೇಳಿದ್ದಾರೆ.​

ಇದನ್ನೂ ಓದಿ:

‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?

‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

Published On - 1:38 pm, Wed, 22 December 21

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್