Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ಪುಷ್ಪ’ ಚಿತ್ರದ ಐಟಂ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡಲು ಸಮಂತಾ ಕೇಳಿದ ಸಂಬಳ ಎಷ್ಟು ಕೋಟಿ?

Samantha Remuneration: ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಪಾತ್ರವರ್ಗದ ಕಾರಣದಿಂದ ಹೈಪ್​ ಸೃಷ್ಟಿ ಮಾಡಿದೆ. ಚಿತ್ರತಂಡಕ್ಕೆ ಈಗ ಸಮಂತಾ ಕೂಡ ಸೇರ್ಪಡೆ ಆಗಿದ್ದಾರೆ.

Samantha: ‘ಪುಷ್ಪ’ ಚಿತ್ರದ ಐಟಂ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡಲು ಸಮಂತಾ ಕೇಳಿದ ಸಂಬಳ ಎಷ್ಟು ಕೋಟಿ?
ಸಮಂತಾ
Follow us
TV9 Web
| Updated By: ಮದನ್​ ಕುಮಾರ್​

Updated on: Nov 16, 2021 | 3:05 PM

ನಟಿ ಸಮಂತಾ (Samantha) ಅವರು ವಿಚ್ಛೇದನ ಪಡೆದ ಬಳಿಕ ಮತ್ತೆ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರುವ ಅವರು ಸಿನಿಮಾಗಳ ಆಯ್ಕೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ವಿಶೇಷ ಏನೆಂದರೆ ಅವರು ‘ಪುಷ್ಪ’ ಸಿನಿಮಾದ ಐಟಂ ಸಾಂಗ್​ನಲ್ಲಿ (Pushpa Movie) ನಟಿಸಲು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ಅವರು ದೊಡ್ಡ ಮೊತ್ತದ ಸಂಭಾವನೆ (Samantha Remuneration) ಕೇಳುತ್ತಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದ ಬಗ್ಗೆ ಚಿತ್ರತಂಡದಿಂದಾಗಲೀ ಸಮಂತಾ ಕಡೆಯಿಂದಾಗಿ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಅವರು ಪಡೆಯುತ್ತಾರೆ ಎನ್ನಲಾದ ಸಂಭಾವನೆ ಮೊತ್ತ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ. ಈ ಐಟಂ ಸಾಂಗ್​ನಲ್ಲಿ ನಟಿಸಲು ಸಮಂತಾ ಬರೋಬ್ಬರಿ 1.5 ಕೋಟಿ ರೂಪಾಯಿ ಕೇಳಿದ್ದಾರೆ ಎಂಬ ಸುದ್ದಿ ಹರಡಿದೆ.

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಸುಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ಅವರ ಬಹುತೇಕ ಸಿನಿಮಾಗಳಲ್ಲಿ ಒಂದು ಐಟಂ ಸಾಂಗ್​ ಇರುತ್ತದೆ. ಅದೇ ರೀತಿ ‘ಪುಷ್ಪ’ ಸಿನಿಮಾದಲ್ಲೂ ಒಂದು ಭರ್ಜರಿ ಐಟಂ ಸಾಂಗ್​ ಇಟ್ಟಿದ್ದಾರಂತೆ. ಈ ಹಾಡಿನಲ್ಲಿ ನರ್ತಿಸಲು ಈ ಮೊದಲು ಪೂಜಾ ಹೆಗ್ಡೆ ಮತ್ತು ಸನ್ನಿ ಲಿಯೋನ್​ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ ಆ ನಟಿಯರು ಒಪ್ಪಿಕೊಂಡಿಲ್ಲ. ಅಂತಿಮವಾಗಿ ಸಮಂತಾ ಅವರು ಒಪ್ಪಿಕೊಂಡಿದ್ದಾರೆ. ಈ ಹಾಡಿಗಾಗಿ ಅವರು ಒಂದೂವರೆ ಕೋಟಿ ರೂ. ಸಂಭಾವನೆ ಕೇಳುತ್ತಿದ್ದಾರೆ ಎಂಬ ಮಾಹಿತಿ ಹಬ್ಬಿದೆ.

ಇದಲ್ಲದೇ, ‘ಶಾಕುಂತಲಂ’, ‘ಕಾದು ವಾಕುಲ ರೆಂಡು ಕಾದಲ್​’ ಮುಂತಾದ ಸಿನಿಮಾಗಳಲ್ಲಿ ಸಮಂತಾ ನಟಿಸಿದ್ದಾರೆ. ಸೋಮವಾರವಷ್ಟೇ (ನ.15) ‘ಕಾದು ವಾಕುಲ ರೆಂಡು ಕಾದಲ್​’ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​ಲುಕ್​​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್​ ಸೇತುಪತಿಗೂ ಪ್ರಮುಖ ಪಾತ್ರ ಇದೆ. ನಯನತಾರಾ ಅವರ ಪ್ರಿಯಕರ ವಿಘ್ನೇಶ್ ಶಿವನ್​ ಅವರು ‘ಕಾದು ವಾಕುಲ ರೆಂಡು ಕಾದಲ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

‘ಪುಷ್ಪ’ ಸಿನಿಮಾದಿಂದ ನಟಿ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ವೃತ್ತಿಜೀವನಕ್ಕೆ ದೊಡ್ಡ ತಿರುವು ಸಿಗುವ ನಿರೀಕ್ಷೆ ಇದೆ. ಪಾತ್ರವರ್ಗದ ಕಾರಣದಿಂದಲೂ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಪ್ರಕಾಶ್​ ರಾಜ್​, ಡಾಲಿ ಧನಂಜಯ, ಫಹಾದ್​ ಫಾಸಿಲ್​ ಮುಂತಾದ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಎರಡು ಪಾರ್ಟ್​​ಗಳಲ್ಲಿ ‘ಪುಷ್ಪ’ ಮೂಡಿಬಂದಿದ್ದು, ಈ ವರ್ಷ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ಡಿ.17ರಂದು ಮೊದಲ ಪಾರ್ಟ್​ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ:

ಸಮಂತಾ ಹೊಸ ಸಿನಿಮಾ ಲುಕ್ ಬಹಿರಂಗ

ಒಂದು ಸಿನಿಮಾಗೆ ಸಮಂತಾ ಪಡೆಯುವ ಸಂಭಾವನೆ ಇಷ್ಟೊಂದಾ; ಅಚ್ಚರಿ ಹೊರ ಹಾಕಿದ ಫ್ಯಾನ್ಸ್​