ಚಿತ್ರರಂಗದ ಬಗ್ಗೆ ಸಮಂತಾಗೆ ನಿರಾಸಕ್ತಿ; ಒಪ್ಪಿಕೊಂಡ ಸಿನಿಮಾದಿಂದ ಹೊರಕ್ಕೆ?

ಇಡೀ ತಂಡ ಈ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿ ಆಗಿತ್ತು. ಆದರೆ, ಸಮಂತಾ ಮಾತ್ರ ಇದರಲ್ಲಿ ಭಾಗಿ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಸಮಂತಾ ಈ ಚಿತ್ರದಿಂದ ಹಿಂದೆ ಸರಿದರೇ ಎನ್ನುವ ಪ್ರಶ್ನೆ ಮೂಡಿದೆ.

ಚಿತ್ರರಂಗದ ಬಗ್ಗೆ ಸಮಂತಾಗೆ ನಿರಾಸಕ್ತಿ; ಒಪ್ಪಿಕೊಂಡ ಸಿನಿಮಾದಿಂದ ಹೊರಕ್ಕೆ?
ಸಮಂತಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jul 12, 2024 | 11:39 AM

ನಟಿ ಸಮಂತಾ ಅವರು ಹಿರಿತೆರೆಯಿಂದ ದೂರ ಆಗಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಅವರು ತಮ್ಮದೇ ಲೋಕದಲ್ಲಿ ಇದ್ದಾರೆ. ದೇಶ-ವಿದೇಶ ಸುತ್ತಿತ್ತಿದ್ದಾರೆ. ಸಿನಿಮಾ ಕೆಲಸ ಎಂದರೆ ದೂರ ಹೋಗುತ್ತಿದ್ದಾರೆ. ಅವರು ಸಿನಿಮಾ ಬಗ್ಗೆ, ಚಿತ್ರರಂಗದ ಬಗ್ಗೆ ಸಂಪೂರ್ಣ ಆಸಕ್ತಿ ಕಳೆದುಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಈಗ ಅವರ ಮುಂದಿನ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ. ಇದು ಅನೇಕ ಪ್ರಶ್ನೆಗಳ್ನು ಹುಟ್ಟುಹಾಕಿದೆ.

ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸಿದರು. ಆ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇದು ಸಾಕಷ್ಟು ಅಚ್ಚರಿ ಸೃಷ್ಟಿ ಮಾಡಿತ್ತು. ಅವರ ಮುಂದಿನ ಸಿನಿಮಾ ಯಾವುದು ಎಂದು ಫ್ಯಾನ್ಸ್ ಕೇಳುತ್ತಲೇ ಬರುತ್ತಿದ್ದರು. ಆದರೆ, ಸಮಂತಾ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈಗ ಸಮಂತಾ ಅವರು ಗೌತಮ್ ಮೆನನ್ ನಿರ್ದೇಶನದ ಸಿನಿಮಾದಲ್ಲಿ ನಟಿಸಬೇಕಿತ್ತು. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಳ್ಳಬೇಕಿತ್ತು. ಆದರೆ, ಹಾಗಾಗುತ್ತಿಲ್ಲ ಎನ್ನಲಾಗಿದೆ.

ಈ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ಇಡೀ ತಂಡ ಈ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿ ಆಗಿತ್ತು. ಆದರೆ, ಸಮಂತಾ ಮಾತ್ರ ಇದರಲ್ಲಿ ಭಾಗಿ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಸಮಂತಾ ಈ ಚಿತ್ರದಿಂದ ಹಿಂದೆ ಸರಿದರೇ ಎನ್ನುವ ಪ್ರಶ್ನೆ ಮೂಡಿದೆ.

ಸಮಂತಾ ಅವರು ವೆಬ್ ಸೀರಿಸ್​ಗಳ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪಿಸಿ, ವೆಬ್ ಸೀರಿಸ್ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಮಂತಾ ಮುಂದಿನ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ನಿರಂತರವಾಗಿ ಕಾಡುತ್ತಿದೆ. ಅವರ ಹೊಸ ಸಿನಿಮಾ ಘೋಷಿಸಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಸಮಂತಾಗೆ ಚಿಕಿತ್ಸೆ ನೀಡುತ್ತಿರುವ ವ್ಯಕ್ತಿ ವೈದ್ಯನೇ ಅಲ್ಲ; ಹೊರಬಿತ್ತು ಶಾಕಿಂಗ್ ವಿಚಾರ

ಸಮಂತಾ ಅವರು ಆರೋಗ್ಯ ಸಮಸ್ಯೆ ಕಾರಣಕ್ಕೂ ಆಗಾಗ ಸುದ್ದಿ ಆಗುತ್ತಾರೆ. ಅವರು ಇತ್ತೀಚೆಗೆ ಹೈಡ್ರೋಜನ್ ಪೆರಾಕ್ಸೈಡ್ ಹಾಗೂ ಭಟ್ಟಿ ಇಳಿಸಿದ ನೀರನ್ನು ಸೇವಿಸಿ ವೈರಲ್ ಇನ್​ಫೆಕ್ಷನ್​ನಿಂದ ಬಚಾವ್ ಆಗಬಹುದು ಎಂದು ಹೇಳಿದ್ದರು. ಇದು ವಿಷಕಾರಿ ಎಂದು ಅನೇಕ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣಕ್ಕೆ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ