Samantha: ‘ಖುಷಿ’ ಸಿನಿಮಾದ ಹಾಡಿಗೆ ಮನಸೋತ ಪ್ರೇಕ್ಷಕರು; ಯೂಟ್ಯೂಬ್ನಲ್ಲಿ ಸದ್ದು ಮಾಡುತ್ತಿದೆ ಸಮಂತಾ ಸಾಂಗ್
Kushi Movie Songs: ವಿಜಯ್ ದೇವರಕೊಂಡ ಅವರ ಜನ್ಮದಿನದ ಪ್ರಯುಕ್ತ ‘ನಾ ರಾಜ ನುವ್ವೇ..’ ಹಾಡು ಬಿಡುಗಡೆ ಮಾಡಲಾಯಿತು. ಇದರಲ್ಲಿ ಸಮಂತಾ ರುತ್ ಪ್ರಭು ಮತ್ತು ವಿಜಯ್ ದೇವರಕೊಂಡ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ.
ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಅವರ ಸಿನಿಮಾಗಳು ಸೋತರೂ ಕೂಡ ಬೇಡಿಕೆ ಮಾತ್ರ ಕಡಿಮೆ ಆಗಿಲ್ಲ. ಏಪ್ರಿಲ್ 14ರಂದು ಸಮಂತಾ ನಟನೆಯ ‘ಶಾಕುಂತಲಂ’ ಸಿನಿಮಾ ತೆರೆಕಂಡು ಸೋತಿತು. ಆ ಸೋಲಿನ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಅದರ ಬೆನ್ನಲ್ಲೇ ಅವರು ಮುಂದಿನ ಸಿನಿಮಾದ ಕೆಲಸಗಳತ್ತ ಗಮನ ಹರಿಸಿದರು. ಈಗ ಅವರು ‘ಖುಷಿ’ (Kushi Movie) ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ವಿಜಯ್ ದೇವರಕೊಂಡ (Vijay Devarakonda) ನಟಿಸುತ್ತಿದ್ದಾರೆ. ಈ ಸಿನಿಮಾದ ಮೊದಲ ಹಾಡು ಇತ್ತೀಚೆಗಷ್ಟೇ ಬಿಡುಗಡೆ ಆಯಿತು. ‘ನಾ ರಾಜ ನುವ್ವೇ..’ ಎಂಬ ಈ ಗೀತೆಗೆ ಪ್ರೇಕ್ಷಕರು ಮನ ಸೋತಿದ್ದಾರೆ. ಯೂಟ್ಯೂಬ್ನಲ್ಲಿ ಈ ಹಾಡು ಎರಡು ದಿನಕ್ಕೆ 70 ಲಕ್ಷಕ್ಕಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ. ಇದು ಸಮಂತಾ ರುತ್ ಪ್ರಭು ಅಭಿಮಾನಿಗಳಿಗೆ ಖುಷಿ ನೀಡಿದೆ. ಜನರಿಂದ ಸಿಕ್ಕ ಪ್ರತಿಕ್ರಿಯೆ ಕಂಡು ‘ಖುಷಿ’ ಚಿತ್ರಕ್ಕೆ ಹೊಸ ಜೋಶ್ ಬಂದಂತಾಗಿದೆ.
ಮೇ 9ರಂದು ವಿಜಯ್ ದೇವರಕೊಂಡ ಅವರ ಜನ್ಮದಿನದ ಪ್ರಯುಕ್ತ ‘ನಾ ರಾಜ ನುವ್ವೇ..’ ಹಾಡು ಬಿಡುಗಡೆ ಮಾಡಲಾಯಿತು. ಇದರಲ್ಲಿ ಸಮಂತಾ ರುತ್ ಪ್ರಭು ಮತ್ತು ವಿಜಯ್ ದೇವರಕೊಂಡ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಅವರು ಈ ಹಾಡಿಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆಗೆ ಧ್ವನಿ ನೀಡಿದ್ದಾರೆ ಕೂಡ. ಶಿವ ನಿರ್ವಾಣ ಅವರು ಸಾಹಿತ್ಯ ಬರೆಯುವುದರ ಜೊತೆಗೆ ನೃತ್ಯ ನಿರ್ದೇಶನವನ್ನೂ ಮಾಡಿದ್ದಾರೆ.
ಸಂಗೀತ ಪ್ರಿಯರು ಈ ಹಾಡಿಗೆ ಮನಸೋತಿದ್ದಾರೆ. ಎಲ್ಲರಿಂದ ಮೆಚ್ಚುಗೆ ಮಾತುಗಳು ಕೇಳಿಬರುತ್ತಿವೆ. ಯೂಟ್ಯೂಬ್ನಲ್ಲಿ ಅಭಿಮಾನಿಗಳು ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ. ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಟಾಪ್ 5 ವಿಡಿಯೋಗಳ ಪಟ್ಟಿಯಲ್ಲಿ ಈ ಹಾಡು ಕೂಡ ಸ್ಥಾನ ಪಡೆದುಕೊಂಡಿದೆ. ಇದರಿಂದ ‘ಖುಷಿ’ ಚಿತ್ರದ ಮೇಲೆ ಜನರಿಗೆ ಎಷ್ಟು ನಿರೀಕ್ಷೆ ಇದೆ ಎಂಬುದು ಗೊತ್ತಾಗಿದೆ.
ಇದನ್ನೂ ಓದಿ: Shaakuntalam: ಸದ್ದಿಲ್ಲದೇ ಒಟಿಟಿಗೆ ಬಂತು ‘ಶಾಕುಂತಲಂ’; ಕನ್ನಡದಲ್ಲೂ ಲಭ್ಯವಿದೆ ಸಮಂತಾ ನಟನೆಯ ಹೊಸ ಸಿನಿಮಾ
ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು ಅವರನ್ನು ದೊಡ್ಡ ಪರದೆಯಲ್ಲಿ ಜೊತೆಯಾಗಿ ನೋಡಬೇಕು ಎಂದು ಫ್ಯಾನ್ಸ್ ಕಾದಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಕೆಲಸಗಳು ತಡವಾದವು. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.