Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?

Samantha Ruth Prabhu | Naga Chaitanya: ಸಮಂತಾ ಮತ್ತು ನಾಗ ಚೈತನ್ಯ ಅವರು ಮದುವೆ ಬಳಿಕ ಆ ಮನೆಯಲ್ಲಿ ವಾಸವಾಗಿದ್ದರು. ನಂತರ ಅದನ್ನು ಮಾರಾಟ ಮಾಡಿದ್ದರು. ಈಗ ಆ ಮನೆ ಮತ್ತೆ ಸಮಂತಾ ಪಾಲಾಗಿದೆ.

Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
ನಾಗ ಚೈತನ್ಯ, ಸಮಂತಾ
Follow us
TV9 Web
| Updated By: ಮದನ್​ ಕುಮಾರ್​

Updated on:Jul 29, 2022 | 12:21 PM

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರ ಖಾಸಗಿ ಜೀವನದ ವಿಚಾರಗಳು ಪದೇ ಪದೇ ಸುದ್ದಿ ಆಗುತ್ತಲೇ ಇವೆ. ಈಗ ಅವರ ಮನೆ ಬಗ್ಗೆ ಒಂದು ಬಿಸಿ ಬಿಸಿ ನ್ಯೂಸ್​ ಕೇಳಿಬಂದಿದೆ. ವಿಚ್ಛೇದನ (Divorce) ಪಡೆಯುವುದಕ್ಕಿಂತ ಮುಂಚೆ ನಾಗ ಚೈತನ್ಯ (Naga Chaitanya) ಜೊತೆ ವಾಸಿಸುತ್ತಿದ್ದ ಮನೆಯನ್ನು ಈಗ ಸಮಂತಾ ಮರಳಿ ಪಡೆದಿದ್ದಾರೆ ಎಂಬುದು ಖಚಿತವಾಗಿದೆ. ಈ ಬಗ್ಗೆ ಫ್ಯಾನ್ಸ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಆ ಮನೆಯ ಜೊತೆಗೆ ಸಮಂತಾ ಅವರಿಗೆ ವಿಶೇಷ ಸೆಂಟಿಮೆಂಟ್​ ಇದೆ. ಆ ಕಾರಣಕ್ಕಾಗಿಯೇ ಅವರು ಅದನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಸಮಂತಾ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಹಾಗಿದ್ದರೂ ಕೂಡ ಅವರ ವೃತ್ತಿಜೀವನಕ್ಕಿಂತಲೂ ಹೆಚ್ಚಾಗಿ ಪರ್ಸನಲ್​ ವಿಚಾರವೇ ಹೈಲೈಟ್​ ಆಗುತ್ತಿದೆ.

ಸಮಂತಾ ಮತ್ತು ನಾಗ ಚೈತನ್ಯ ಅವರದ್ದು ಲವ್​ ಕಮ್​ ಅರೇಂಜ್​ ಮ್ಯಾರೇಜ್​. ಮದುವೆ ಬಳಿಕ ಅವರಿಬ್ಬರು ಒಂದು ಮನೆಯಲ್ಲಿ ವಾಸವಾಗಿದ್ದರು. ನಂತರ ಅವರ ನಡುವೆ ವೈಮನಸ್ಸು ಮೂಡಿತು. ಡಿವೋರ್ಸ್​ ಪಡೆಯುವುದಕ್ಕಿಂತ ಕೆಲವೇ ದಿನಗಳ ಮುನ್ನ ಆ ಮನೆಯನ್ನು ಮಾರಾಟ ಮಾಡಲಾಗಿತ್ತು. ಆದರೆ ಈಗ ಅದಕ್ಕಿಂತಲೂ ದುಬಾರಿ ಬೆಲೆಯನ್ನು ನೀಡಿ ಸಮಂತಾ ಆ ಮನೆಯನ್ನು ಮರಳಿ ಖರೀದಿಸಿದ್ದಾರೆ.

ಸಮಂತಾ ಅವರಿಗೆ ಆ ಮನೆಯ ಜೊತೆ ಸ್ಪೆಷಲ್​ ಕನೆಕ್ಷನ್​ ಇದೆ. ಅಲ್ಲಿ ಅವರ ಕೆಲವು ಸುಂದರ ನೆನಪುಗಳಿವೆ. ಎಲ್ಲಕ್ಕಿಂತ ಹೆಚ್ಚಾಗಿ ಅವರಿಗೆ ಆ ಮನೆ ಕಂಫರ್ಟ್​ ಆಗಿದೆ. ಈ ಎಲ್ಲ ಕಾರಣಗಳಿಂದಾಗಿ ಅವರು ಅದೇ ಮನೆಯನ್ನು ಹೆಚ್ಚಿನ ಹಣ ನೀಡಿ ಕೊಂಡುಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಸಮಂತಾ ಅವರು ಈ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸದ್ಯ ಅವರು ‘ಖುಷಿ’, ‘ಶಾಕುಂತಲಂ’, ‘ಯಶೋದ’ ಮುಂತಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ
Image
Samantha: ಸಮಂತಾಗೆ ಜೋಡಿಯಾಗಲು ಸಿದ್ಧವಾಗಿದೆ ಬಾಲಿವುಡ್​ ಹೀರೋಗಳ ಪಟ್ಟಿ; ಆದ್ರೂ ಫ್ಯಾನ್ಸ್​ಗೆ ಸಮಾಧಾನ ಇಲ್ಲ
Image
ದೇಶದ ಅತ್ಯಂತ ಜನಪ್ರಿಯ ನಟಿ ಸಮಂತಾ; ರಶ್ಮಿಕಾ ಮಂದಣ್ಣಗೆ ಎಷ್ಟನೇ ಸ್ಥಾನ?
Image
No Entry 2: ಸಲ್ಮಾನ್​ ಖಾನ್​ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಸಮಂತಾ? ‘ನೋ ಎಂಟ್ರಿ’ಯಲ್ಲೂ ಸಿಗಬಹುದು ಎಂಟ್ರಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?

ಇತ್ತೀಚೆಗೆ ಸಮಂತಾ ಅವರು ‘ಕಾಫಿ ವಿತ್​ ಕರಣ್​ ಸೀಸನ್​ 7’ ಶೋಗೆ ಅತಿಥಿಯಾಗಿ ಬಂದಿದ್ದರು. ಅವರಿಗೆ ನಟ ಅಕ್ಷಯ್​ ಕುಮಾರ್​ ಸಾಥ್​ ನೀಡಿದ್ದರು. ಈ ವೇಳೆ ಅನೇಕ ವಿಚಾರಗಳ ಬಗ್ಗೆ ಸಮಂತಾ ಮಾತನಾಡಿದರು. ಮಾಜಿ ಪತಿ ನಾಗಚೈತನ್ಯ ಬಗ್ಗೆಯೂ ಅವರು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಇಬ್ಬರ ನಡುವೆ ವಿಚ್ಛೇದನಕ್ಕೆ ನಿಜವಾದ ಕಾರಣ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ.

Published On - 12:21 pm, Fri, 29 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ