AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ವೇದಿಕೆ ಮೇಲೆ ಎಲ್ಲರ ಎದುರು ಕಣ್ಣೀರು ಹಾಕಿದ ಸಮಂತಾ ರುತ್​ ಪ್ರಭು; ವಿಡಿಯೋ ವೈರಲ್​

Samantha Viral Video: ‘ಜೀವನದಲ್ಲಿ ನಾನು ಎಷ್ಟೇ ಕಷ್ಟಗಳನ್ನು ಎದುರಿಸಬಹುದು. ಆದರೆ ಒಂದು ವಿಷಯ ಬದಲಾಗುವುದಿಲ್ಲ’ ಎಂದು ಸಮಂತಾ ರುತ್​ ಪ್ರಭು ಅವರ ಹೇಳಿದ್ದಾರೆ.

Samantha: ವೇದಿಕೆ ಮೇಲೆ ಎಲ್ಲರ ಎದುರು ಕಣ್ಣೀರು ಹಾಕಿದ ಸಮಂತಾ ರುತ್​ ಪ್ರಭು; ವಿಡಿಯೋ ವೈರಲ್​
ಸಮಂತಾ ರುತ್ ಪ್ರಭು
TV9 Web
| Edited By: |

Updated on: Jan 09, 2023 | 10:42 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಜೀವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ವೃತ್ತಿಜೀವನ ಇನ್ನೇನು ಏರುಗತಿಯಲ್ಲಿ ಇದೆ ಎನ್ನುವಾಗಲೇ ಅವರಿಗೆ ಆರೋಗ್ಯ ಕೈ ಕೊಟ್ಟಿತು. ಹಲವು ತಿಂಗಳು ಚಿಕಿತ್ಸೆ ಪಡೆದ ನಂತರವೂ ಅವರು ಪೂರ್ಣವಾಗಿ ಗುಣಮುಖವಾಗಿಲ್ಲ. ಅನಾರೋಗ್ಯದ ನಡುವೆಯೂ ಅವರು ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಸಮಂತಾ ನಟಿಸಿರುವ ‘ಶಾಕುಂತಲಂ’ ಸಿನಿಮಾ (Shaakuntalam) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಟ್ರೇಲರ್​ ಬಿಡುಗಡೆ ಆಗಿದೆ. ಹೈದರಾಬಾದ್​ನಲ್ಲಿ ಅದ್ದೂರಿ ಇವೆಂಟ್​ ಮಾಡಲಾಯಿತು. ಈ ವೇಳೆ ಸಮಂತಾ (Samantha) ಅವರು ಕಣ್ಣೀರು ಹಾಕಿದ್ದಾರೆ. ವೇದಿಕೆ ಮೇಲೆ ಅವರು ಗಳಗಳನೆ ಅತ್ತಿರುವ ವಿಡಿಯೋ ವೈರಲ್​ ಆಗಿದೆ.

ಸಮಂತಾ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಹತ್ತಾರು ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ ಆರೋಗ್ಯ ಅಡ್ಡಿ ಆಗಿರುವುದರಿಂದ ಸರಿಯಾದ ಸಮಯಕ್ಕೆ ಸಿನಿಮಾ ಕೆಲಸಗಳನ್ನು ಮುಗಿಸಿಕೊಡಲು ಕಷ್ಟವಾಗುತ್ತಿದೆ. ಆ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಆದರೂ ಕೂಡ ಚಿತ್ರತಂಡದವರು ಸಮಂತಾಗೆ ಸೂಕ್ತ ಬೆಂಬಲ ನೀಡುತ್ತಿದ್ದಾರೆ. ಈ ಬೆಂಬಲವನ್ನು ನೆನೆದು ಅವರು ಎಮೋಷನಲ್​ ಆಗಿದ್ದಾರೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

‘ಜೀವನದಲ್ಲಿ ನಾನು ಎಷ್ಟೇ ಕಷ್ಟಗಳನ್ನು ಎದುರಿಸಬಹುದು. ಆದರೆ ಒಂದು ವಿಷಯ ಬದಲಾಗುವುದಿಲ್ಲ. ನಾನು ಸಿನಿಮಾವನ್ನು ಎಷ್ಟು ಪ್ರೀತಿಸುತ್ತೀನೋ ಸಿನಿಮಾ ಕೂಡ ನನ್ನನ್ನು ಅಷ್ಟೇ ಪ್ರೀತಿಸುತ್ತದೆ. ಶಾಕುಂತಲಂ ಸಿನಿಮಾದಿಂದ ಈ ಪ್ರೀತಿ ಇನ್ನಷ್ಟು ಹೆಚ್ಚಾಗಲಿದೆ’ ಎಂದು ಸಮಂತಾ ಹೇಳಿದ್ದಾರೆ.

ಇದನ್ನೂ ಓದಿ: Samantha: ಒಂದೇ ವಾಕ್ಯದಲ್ಲಿ ಟ್ರೋಲ್​​ಗಳ ಬಾಯಿ ಮುಚ್ಚಿಸಿದ ನಟಿ ಸಮಂತಾ

ಅದ್ದೂರಿ ಬಜೆಟ್​ನಲ್ಲಿ ‘ಶಾಕುಂತಲಂ’ ಸಿನಿಮಾ ಮೂಡಿಬಂದಿದೆ. ಬೃಹತ್​ ಸೆಟ್​ಗಳು ಗಮನ ಸೆಳೆಯುತ್ತಿವೆ. ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ಮೂಡಿಬಂದಿರುವ ದೃಶ್ಯಗಳು ಈ ಟ್ರೇಲರ್​ನಲ್ಲಿ ಹೈಲೈಟ್​ ಆಗಿವೆ. ಇದನ್ನು ನೋಡಿದ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.

ಇದನ್ನೂ ಓದಿ: ಸಮಂತಾ ಬಗ್ಗೆ ಹುಟ್ಟಿಕೊಂಡಿತು ಮತ್ತಷ್ಟು ವದಂತಿ; ಬೇಸರದಲ್ಲೇ ಸ್ಪಷ್ಟನೆ ನೀಡಿದ ತಂಡ

ಫೆಬ್ರವರಿ 17ರಂದು ‘ಶಾಕುಂತಲಂ’ ಚಿತ್ರ ರಿಲೀಸ್​ ಆಗಲಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಸಮಂತಾ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇರುವುದರಿಂದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ಭರವಸೆ ಚಿತ್ರತಂಡಕ್ಕಿದೆ.

ಖ್ಯಾತ ನಿರ್ದೇಶಕ ಗುಣಶೇಖರ್​ ಅವರು ‘ಶಾಕುಂತಲಂ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇದಲ್ಲದೇ ಹಲವು ಪ್ರಾಜೆಕ್ಟ್​ಗಳಲ್ಲಿ ಸಮಂತಾ ಬ್ಯುಸಿ ಆಗಿದ್ದಾರೆ. ವಿಜಯ್​ ದೇವರಕೊಂಡ ನಟನೆಯ ‘ಖುಷಿ’ ಚಿತ್ರಕ್ಕೂ ಅವರು ನಾಯಕಿ. ಅನಾರೋಗ್ಯದ ಕಾರಣದಿಂದ ಆ ಸಿನಿಮಾದ ಕೆಲಸಗಳು ವಿಳಂಬ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
TV9 Web
TV9 Web

TV9 Kannada

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್