AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ‘ಎಂದೆಂದಿಗೂ ನಿಮ್ಮನ್ನು ಪ್ರೀತಿಸುತ್ತೇನೆ’: ಸ್ಪೆಷಲ್​ ವ್ಯಕ್ತಿ ಬಗ್ಗೆ ನಟಿ ಸಮಂತಾ ಮಾತು

Samantha Ruth Prabhu: ರಾಹುಲ್​ ಮತ್ತು ಸಮಂತಾ ನಡುವೆ ಹಲವು ವರ್ಷಗಳಿಂದ ಒಡನಾಟ ಇದೆ. ಸಮಂತಾ ಅನಾರೋಗ್ಯಕ್ಕೆ ಒಳಗಾದಾಗ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ರಾಹುಲ್​ ಮಾಡಿದ್ದರು.

Samantha: ‘ಎಂದೆಂದಿಗೂ ನಿಮ್ಮನ್ನು ಪ್ರೀತಿಸುತ್ತೇನೆ’: ಸ್ಪೆಷಲ್​ ವ್ಯಕ್ತಿ ಬಗ್ಗೆ ನಟಿ ಸಮಂತಾ ಮಾತು
ಸಮಂತಾ, ರಾಹುಲ್​ ರವೀಂದ್ರನ್​
ಮದನ್​ ಕುಮಾರ್​
|

Updated on: Jun 23, 2023 | 7:40 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಖಾಸಗಿ ಜೀವನದಲ್ಲಿ ಮತ್ತು ವೃತ್ತಿಬದುಕಿನಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ನಟ ನಾಗ ಚೈತನ್ಯ ಜೊತೆ ಅವರು ಹಲವು ವರ್ಷಗಳ ಕಾಲ ಪ್ರೀತಿಯಲ್ಲಿ ಮುಳುಗಿದ್ದರು. ಅವರನ್ನೇ ಮದುವೆಯಾಗಿ ನಾಲ್ಕು ವರ್ಷ ಸಂಸಾರ ಮಾಡಿದರು. ಆದರೆ ಇಬ್ಬರ ನಡುವೆ ವೈಮನಸ್ಸು ಮೂಡಿದ್ದರಿಂದ ವಿಚ್ಛೇದನ ಪಡೆದುಕೊಂಡರು. ಈಗ ಸಮಂತಾ (Samantha) ಅವರು ಒಂಟಿಯಾಗಿ ಜೀವನ ನಡೆಸುತ್ತಿದ್ದಾರೆ. ಮತ್ತೊಂದು ಮದುವೆಯ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಮಾಡಿದಂತೆ ಕಾಣುತ್ತಿಲ್ಲ. ಈಗ ಅವರ ಜೀವನದಲ್ಲಿ ಸ್ನೇಹಿತರಿಗಾಗಿ ಹೆಚ್ಚು ಸಮಯ ನೀಡುತ್ತಿದ್ದಾರೆ. ಆ ಬಗ್ಗೆ ಸೋಶಿಯಲ್​ ಮೀಡಿಯಾ ಪೋಸ್ಟ್​ಗಳ ಮೂಲಕ ಅವರು ಮಾಹಿತಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರು ತಮ್ಮ ಆಪ್ತ ಸ್ನೇಹಿತ ರಾಹುಲ್​​ ರವೀಂದ್ರನ್​ (Rahul Ravindran) ಜೊತೆ ಕಾಲ ಕಳೆದಿದ್ದಾರೆ. ಇಬ್ಬರೂ ಜೊತೆಯಾಗಿ ಊಟ ಸವಿದಿದ್ದಾರೆ.

‘ನಿಮಗೆ ಗೊತ್ತಿರುವ ತುಂಬಾ ಒಳ್ಳೆಯ ವ್ಯಕ್ತಿಯನ್ನು ನೂರರಿಂದ ಗುಣಿಸಿ. ಅಷ್ಟಕ್ಕೆ ಸಮನಾದವರು ನನ್ನ ಬೆಸ್ಟ್​ ಫ್ರೆಂಡ್​ ರಾಹುಲ್​ ರವೀಂದ್ರನ್​. ಎಂದೆಂದಿಗೂ ನಿಮ್ಮನ್ನು ಪ್ರೀತಿಸುತ್ತೇನೆ ರಾಹುಲ್’ ಎಂಬ ಕ್ಯಾಪ್ಷನ್​ ಜೊತೆಯಲ್ಲಿ ಸಮಂತಾ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ರಾಹುಲ್​​ ರವೀಂದ್ರನ್​ ಅವರು ತೆಲುಗು ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರ ಜೊತೆಗೆ ಸಮಂತಾಗೆ ಹಲವು ವರ್ಷಗಳಿಂದ ಸ್ನೇಹ ಇದೆ. ಸಮಂತಾ ಅವರ ಕಷ್ಟದ ದಿನಗಳಲ್ಲಿ ರಾಹುಲ್​ ಜೊತೆಗಿದ್ದರು. ಹಾಗಾಗಿ ಅವರನ್ನು ಕಂಡರೆ ಸಮಂತಾಗೆ ತುಂಬ ಇಷ್ಟ.

ರಾಹುಲ್​ ರವೀಂದ್ರನ್​ ಅವರು 2006ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದೆರಡು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ಗಾಯಕಿ ಚಿನ್ಮಯಿ ಶ್ರೀಪಾದ್​ ಜೊತೆ ಅವರು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಮಂತಾ ಅನಾರೋಗ್ಯಕ್ಕೆ ಒಳಗಾದಾಗ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ರಾಹುಲ್​ ಮಾಡಿದ್ದರು. ಇಬ್ಬರ ಸ್ನೇಹ ಹೀಗೆ ಮುಂದುವರಿಯಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ. ಇನ್ನು, ನಟ ವಿಜಯ್​ ದೇವರಕೊಂಡ ಜೊತೆಗೂ ಸಮಂತಾ ರುತ್​ ಪ್ರಭು ಅವರು ಸ್ನೇಹ ಹೊಂದಿದ್ದಾರೆ. ಅವರಿಬ್ಬರು ‘ಖುಷಿ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Citadel: ಸೆರ್ಬಿಯಾದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಸಮಂತಾ, ವರುಣ್​ ಧವನ್​; ಫೋಟೋ ವೈರಲ್​

ಸಮಂತಾ ಅವರು ಎಲ್ಲ ರೀತಿಯ ಪಾತ್ರಗಳನ್ನೂ ಪ್ರಯತ್ನಿಸುತ್ತಿದ್ದಾರೆ. ಈ ವರ್ಷ ಅವರಿಗೆ ‘ಶಾಕುಂತಲಂ’ ಸಿನಿಮಾದಿಂದ ಯಶಸ್ಸು ಸಿಗಲಿಲ್ಲ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಯಶೋಧ’ ಸಿನಿಮಾ ಕೂಡ ಹೇಳಿಕೊಳ್ಳುವಂತಹ ಕಲೆಕ್ಷನ್​ ಮಾಡಲಿಲ್ಲ. ಹಾಗಿದ್ದರೂ ಕೂಡ ಸಮಂತಾಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ‘ಸಿಟಾಡೆಲ್​’ ಇಂಗ್ಲಿಷ್​ ವೆಬ್​ ಸರಣಿಯ ಇಂಡಿಯನ್​ ವರ್ಷನ್​ನಲ್ಲಿ ಅವರು ನಟಿಸುತ್ತಿದ್ದಾರೆ. ಇದರಲ್ಲಿ ಅವರಿಗೆ ವರುಣ್​ ಧವನ್​ ಜೋಡಿಯಾಗಿದ್ದಾರೆ. ಇದರ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ