AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2025ರಲ್ಲಿ ಸಮಂತಾ 2ನೇ ಮದುವೆ, ತಾಯಿ ಆಗುವ ಸೂಚನೆ ನೀಡಿದ ನಟಿ

ಸಮಂತಾ ಅವರ ಮಾಜಿ ಪತಿ ನಾಗ ಚೈತನ್ಯ ಅವರ 2ನೇ ಮದುವೆ ಕೆಲವೇ ದಿನಗಳ ಹಿಂದೆ ನಡೆಯಿತು. ಈಗ ಸಮಂತಾ ಕೂಡ ಇನ್ನೊಂದು ಮದುವೆಯ ಬಗ್ಗೆ ಆಲೋಚನೆ ಮಾಡಿದಂತಿದೆ. 2025ರಲ್ಲಿ ತಮ್ಮ ರಾಶಿಫಲ ಏನು ಹೇಳುತ್ತಿದೆ ಎಂಬುದನ್ನು ಸಮಂತಾ ರುತ್ ಪ್ರಭು ಅವರು ಹಂಚಿಕೊಂಡಿದ್ದಾರೆ. ರಾಶಿಫಲದಲ್ಲಿ ಇರುವಂತೆಯೇ ಆಗಲಿ ಎಂದು ಅವರು ಆಶಿಸಿದ್ದಾರೆ.

2025ರಲ್ಲಿ ಸಮಂತಾ 2ನೇ ಮದುವೆ, ತಾಯಿ ಆಗುವ ಸೂಚನೆ ನೀಡಿದ ನಟಿ
ಸಮಂತಾ
ಮದನ್​ ಕುಮಾರ್​
|

Updated on: Dec 11, 2024 | 5:34 PM

Share

ನಟಿ ಸಮಂತಾ ರುತ್ ಪ್ರಭು ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳು ಉಂಟಾಗಿವೆ. ನಾಗ ಚೈತನ್ಯ ಜೊತೆಗಿನ ಅವರ ದಾಂಪತ್ಯ ಅಂತ್ಯವಾಯ್ತು. ಗಂಭೀರವಾದ ಆರೋಗ್ಯ ಸಮಸ್ಯೆ ಕೂಡ ಎದುರಾಯಿತು. ಅದರಿಂದಾಗಿ ಅವರ ವೃತ್ತಿ ಜೀವನದ ಮೇಲೂ ಪರಿಣಾಮ ಬಿತ್ತು. ಎಲ್ಲ ಸಮಸ್ಯೆಗಳನ್ನೂ ಎದುರಿಸಿ ಸಮಂತಾ ಅವರು ಮುನ್ನುಗ್ಗುತ್ತಿದ್ದಾರೆ. 2024ರ ವರ್ಷ ಕಳೆಯುತ್ತಿದೆ. 2025ರ ಸ್ವಾಗತಕ್ಕೆ ಎಲ್ಲರೂ ಸಜ್ಜಾಗಿದ್ದಾರೆ. ಈ ಸಂದರ್ಭದಲ್ಲಿ ಸಮಂತಾ ರುತ್ ಪ್ರಭು ಅವರು ಒಂದು ಸೂಚನೆ ನೀಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳ ಕೌತುಕ ಹೆಚ್ಚಾಗಿದೆ.

ಕೆಲವೇ ದಿನಗಳ ಹಿಂದೆ ಸಮಂತಾ ರುತ್ ಪ್ರಭು ಅವರ ಮಾಜಿ ಪತಿ ನಾಗ ಚೈತನ್ಯ ಎರಡನೇ ಮದುವೆ ನಡೆಯಿತು. ನಟಿ ಶೋಭಿತಾ ಧುಲಿಪಾಲ ಜೊತೆ ನಾಗ ಚೈತನ್ಯ ಹಸೆಮಣೆ ಏರಿದರು. ಹಾಗಾದರೆ ಸಮಂತಾ ಅವರು ಇನ್ನೊಂದು ಮದುವೆ ಆಗುವುದು ಯಾವಾಗ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಇದೆ. 2025ರಲ್ಲಿ ಸಮಂತಾ ಅವರು ಈ ಬಗ್ಗೆ ಯೋಚಿಸಬಹುದು ಎಂಬುದಕ್ಕೆ ಈಗ ಸೂಚನೆ ಸಿಕ್ಕಿದೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸಮಂತಾ ರುತ್ ಪ್ರಭು ಅವರು ಒಂದು ಸ್ಟೋರಿ ಶೇರ್​ ಮಾಡಿಕೊಂಡಿದ್ದಾರೆ. 2025ರಲ್ಲಿ ತಮ್ಮ ರಾಶಿಫಲ ಏನಿದೆ ಎಂಬುದನ್ನು ಈ ಪೋಸ್ಟ್ ವಿವರಿಸುತ್ತಿದೆ. ಸಮಂತಾ ಅವರದ್ದು ವೃಷಭ ರಾಶಿ. ಈ ರಾಶಿಯವರು 2025ರ ವರ್ಷದಲ್ಲಿ ಏನನ್ನೆಲ್ಲ ನಿರೀಕ್ಷೆ ಮಾಡಬಹುದು ಎಂಬ ಪಟ್ಟಿಯನ್ನು ಸಮಂತಾ ಹಂಚಿಕೊಂಡು, ‘ಹಾಗೆಯೇ ಆಗಲಿ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ಮದುವೆ ಮತ್ತು ಮಕ್ಕಳ ಬಗ್ಗೆ ಇದರಲ್ಲಿ ಸೂಚನೆ ಇದೆ.

‘ನಿಮಗೆ ನಿಷ್ಠಾವಂತ ಮತ್ತು ಪ್ರೀತಿಯ ಬಾಳಸಂಗಾತಿ ಸಿಗಲಿದ್ದಾರೆ. ಮಕ್ಕಳನ್ನು ಪಡೆಯಲಿದ್ದೀರಿ’ ಎಂಬ ಸಾಲುಗಳು ರಾಶಿ ಫಲದಲ್ಲಿ ಇದೆ. ಇದನ್ನು ಸಮಂತಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿರುವುದರಿಂದ ಬರುವ ವರ್ಷ ಅವರು ಮದುವೆ ಮತ್ತು ಮಗು ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಊಹೆ ನಿಜವಾಗಲಿ ಎಂದು ಕೂಡ ಫ್ಯಾನ್ಸ್ ಆಶಿಸಿದ್ದಾರೆ.

ಇದನ್ನೂ ಓದಿ: ಸಮಂತಾ ಎದುರು ಶೋಭಿತಾ ಜನಪ್ರಿಯತೆಯೇ ಹೆಚ್ಚು; ನಾಗ ಚೈತನ್ಯ ಪತ್ನಿಗೆ 5ನೇ ಸ್ಥಾನ

‘2025ರ ವರ್ಷ ನೀವು ತುಂಬ ಬ್ಯುಸಿ ಆಗಿರಲಿದ್ದೀರಿ. ಕೌಶಲ ವೃದ್ಧಿ ಆಗಲಿದ್ದು, ಅದರಿಂದ ನಿಮಗೆ ಹೆಚ್ಚಿನ ಆದಾಯ ಬರಲಿದೆ. ಆರ್ಥಕ ಸ್ಥಿರತೆ ಸಿಗಲಿದೆ. ಹಲವು ವರ್ಷಗಳಿಂದ ಇಟ್ಟುಕೊಂಡಿದ್ದ ಗುರಿಯನ್ನು ಸಾಧಿಸುತ್ತೀರಿ. ಆದಾಯದ ಮೂಲಗಳು ಹೆಚ್ಚಲಿವೆ. ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸಲಿದೆ’ ಎಂಬ ಸಾಧ್ಯತೆಗಳನ್ನು ಕೂಡ ಸಮಂತಾ ಅವರ ರಾಶಿಫಲದಲ್ಲಿ ಬರೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ