Samantha: ಇಂಗ್ಲೆಂಡ್​ ಜನರ ರೀತಿ ಇಂಗ್ಲಿಷ್​ ಮಾತನಾಡಲು ಹೋಗಿ ಟ್ರೋಲ್​ ಆದ ಸಮಂತಾ; ವಿಡಿಯೋ ವೈರಲ್​

Samantha Fake Accent: ಲಂಡನ್​ಗೆ ತೆರಳಿದ ಸಮಂತಾ ಅವರು ಅಲ್ಲಿನ ಮಾಧ್ಯಮಗಳ ಜೊತೆ ಮಾತಾಡಿದ್ದಾರೆ. ಉಚ್ಚಾರಣೆಯಲ್ಲಿ ಇಂಗ್ಲಿಷ್​ ಮಂದಿಯನ್ನು ಅವರು ಅನುಕರಣೆ ಮಾಡಿದ್ದಕ್ಕೆ ಟೀಕೆಗೆ ಒಳಗಾಗಿದ್ದಾರೆ.

Samantha: ಇಂಗ್ಲೆಂಡ್​ ಜನರ ರೀತಿ ಇಂಗ್ಲಿಷ್​ ಮಾತನಾಡಲು ಹೋಗಿ ಟ್ರೋಲ್​ ಆದ ಸಮಂತಾ; ವಿಡಿಯೋ ವೈರಲ್​
ವರುಣ್ ಧವನ್, ಸಮಂತಾ
Follow us
ಮದನ್​ ಕುಮಾರ್​
|

Updated on: Apr 25, 2023 | 12:15 PM

ಸೆಲೆಬ್ರಿಟಿಗಳನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಅವರ ನಡೆ-ನುಡಿಯಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಕೂಡ ಅದು ಅಭಿಮಾನಿಗಳಿಗೆ ಗೊತ್ತಾಗುತ್ತದೆ. ಆ ಕಾರಣದಿಂದ ನಟ-ನಟಿಯರು ಕೆಲವೊಮ್ಮೆ ಟ್ರೋಲ್​ (Troll​) ಆದ ಉದಾಹರಣೆ ಕೂಡ ಇದೆ. ಈಗ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಆಗುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಅವರು ಇಂಗ್ಲಿಷ್​ ಉಚ್ಛಾರ. ಇತ್ತೀಚೆಗೆ ‘ಸಿಟಾಡೆಲ್​’ (Citadel) ವೆಬ್​ ಸರಣಿಯ ಪ್ರೀಮಿಯರ್​ ಶೋ ಸಲುವಾಗಿ ಲಂಡನ್​ಗೆ ತೆರಳಿದ್ದ ಅವರು ಅಲ್ಲಿನ ಜನರ ರೀತಿಯಲ್ಲಿ ಮಾತನಾಡಲು ಪ್ರಯತ್ನಿಸಿದ್ದಾರೆ. ಇದು ನೆಟ್ಟಿಗರಿಗೆ ಸರಿ ಎನಿಸಿಲ್ಲ. ಹಾಗಾಗಿ ಸಮಂತಾರನ್ನು ಟೀಕೆ ಮಾಡಲಾಗುತ್ತಿದೆ. ಇಂಗ್ಲೆಂಡ್ ಮಂದಿಯ ರೀತಿ ಸಮಂತಾ ಇಂಗ್ಲಿಷ್​ ಮಾತನಾಡಿರುವ ವಿಡಿಯೋ ವೈರಲ್​ ಆಗಿದೆ. ಇದಕ್ಕೆ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ‘ಸಿಟಾಡೆಲ್​’ ವೆಬ್​ ಸರಣಿ ಬಿಡುಗಡೆ ಆಗಲಿದೆ. ಇದರಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ರಿಚರ್ಡ್​ ಮ್ಯಾಡನ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಏಪ್ರಿಲ್​ 28ರಂದು ಈ ವೆಬ್​ ಸರಣಿ ಬಿತ್ತರ ಆಗಲಿದೆ. ಇದರ ಇಂಡಿಯನ್​ ವರ್ಷನ್​ನಲ್ಲಿ ಸಮಂತಾ ರುತ್​ ಪ್ರಭು ಮತ್ತು ವರುಣ್​ ಧವನ್​ ನಟಿಸಿದ್ದಾರೆ. ಹಾಗಾಗಿ ಅವರು ಕೂಡ ಪ್ರೀಮಿಯರ್​ ಶೋ ಸಲುವಾಗಿ ಇಂಗ್ಲೆಂಡ್​ಗೆ ತೆರಳಿದ್ದರು.

Samantha: ಸಮಂತಾ 10ನೇ ತರಗತಿಯಲ್ಲಿ ಪಡೆದ ಅಂಕ ಎಷ್ಟು? ವೈರಲ್​ ಆಗಿದೆ ನಟಿಯ ಮಾರ್ಕ್ಸ್​ ಕಾರ್ಡ್​

ವಿದೇಶಿ ಮಾಧ್ಯಮಗಳ ಜೊತೆ ವರುಣ್​ ಧವನ್​ ಮತ್ತು ಸಮಂತಾ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಉಚ್ಚಾರಣೆಯಲ್ಲಿ ಇಂಗ್ಲಿಷ್​ ಮಂದಿಯನ್ನು ಅವರು ಅನುಕರಣೆ ಮಾಡಿರುವುದು ಹಾಸ್ಯಾಸ್ಪದ ಎಂದು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ಈ ಹಿಂದೆ ನಟ ಜೂನಿಯರ್​ ಎನ್​ಟಿಆರ್​ ಕೂಡ ಲಾಸ್​ ಏಂಜಲಿಸ್​ನಲ್ಲಿ ಮಾತನಾಡಿದ್ದು ಕೂಡ ಟ್ರೋಲ್​ಗೆ ಕಾರಣ ಆಗಿತ್ತು.

ಅನಾರೋಗ್ಯದ ಕಾರಣದಿಂದ ಸಮಂತಾ ಅವರ ವೃತ್ತಿಜೀವನ ಕೊಂಚ ಕುಂಠಿತ ಆಗಿತ್ತು. ಆದರೆ ಈಗ ಅವರು ಸಂಪೂರ್ಣ ಚೇತರಿಸಿಕೊಂಡು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ವಿಜಯ್​ ದೇವರಕೊಂಡ ಜೊತೆಗಿನ ‘ಖುಷಿ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ‘ಸಿಟಾಡೆಲ್​’ ಮೇಲೆ ಅವರ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Chittibabu: ತಮ್ಮ ಬಗ್ಗೆ ಕೆಟ್ಟದಾಗಿ ಮಾತಾಡಿದ ನಿರ್ಮಾಪಕನ ಕಿವಿ ಕೂದಲಿನ ರಹಸ್ಯ ಬಯಲು ಮಾಡಿದ ಸಮಂತಾ

‘ಸಿಟಾಡೆಲ್​’ ವೆಬ್​ ಸಿರೀಸ್​ನಲ್ಲಿ ಸಮಂತಾ ಅವರು ಸಿಕ್ಕಾಪಟ್ಟೆ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಇದರ ಶೂಟಿಂಗ್​ ವೇಳೆ ಸಮಂತಾ ಕೈಗೆ ಗಾಯಗಳಾಗಿತ್ತು. ಆ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ವೆಬ್​ ಸಿರೀಸ್​ಗೆ ರಾಜ್​ ಮತ್ತು ಡಿಕೆ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ