ಸಮಂತಾ ಬಗ್ಗೆ ನಾಗ ಚೈತನ್ಯ ಮೆಚ್ಚುಗೆ; ಮಾಜಿ ಪತ್ನಿಯನ್ನು ಬಾಯ್ತುಂಬ ಹೊಗಳಿದ ನಟ

‘ನಾವು ಬೇರ್ಪಟ್ಟು ಎರಡು ವರ್ಷದ ಮೇಲಾಗಿದೆ. ನಾವು ಔಪಚಾರಿಕವಾಗಿ ವಿಚ್ಛೇದನ ಪಡೆದು ಒಂದು ವರ್ಷವಾಗಿದೆ’ ಎಂದು ನಾಗ ಚೈತನ್ಯ ಹೇಳಿದ್ದಾರೆ.

ಸಮಂತಾ ಬಗ್ಗೆ ನಾಗ ಚೈತನ್ಯ ಮೆಚ್ಚುಗೆ; ಮಾಜಿ ಪತ್ನಿಯನ್ನು ಬಾಯ್ತುಂಬ ಹೊಗಳಿದ ನಟ
ಸಮಂತಾ-ನಾಗ ಚೈತನ್ಯ
Follow us
ರಾಜೇಶ್ ದುಗ್ಗುಮನೆ
|

Updated on: May 06, 2023 | 12:06 PM

ನಾಗ ಚೈತನ್ಯ ಹಾಗೂ ಸಮಂತಾ (Samantha Ruth Prabhu) ಬೇರ್ಪಟ್ಟು ಎರಡು ವರ್ಷ ಕಳೆಯುತ್ತಾ ಬಂದಿದೆ. ಆದರೆ, ಈವರೆಗೆ ಇಬ್ಬರೂ ಬೇರೆ ಆಗೋದಕ್ಕೆ ಕಾರಣ ರಿವೀಲ್ ಆಗಿಲ್ಲ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಇವರ ವಿಚ್ಛೇದನವನ್ನು ವಿಶ್ಲೇಷಿಸುತ್ತಿದ್ದಾರೆ. ಇದೇ ರೀತಿ ನಾಗ ಚೈತನ್ಯ ಹಾಗೂ ಸಮಂತಾಗೆ ಈ ಬಗ್ಗೆ ಪ್ರಶ್ನೆಗಳು ಎದುರಾಗುವುದು ಮಾತ್ರ ನಿಂತಿಲ್ಲ. ಈಗ ನಾಗ ಚೈತನ್ಯ (Naga Chaitanya) ಅವರು ಮತ್ತೆ ಈ ಬಗ್ಗೆ ಮಾತನಾಡಿದ್ದಾರೆ. ಸಮಂತಾ ಅವರನ್ನು ನಾಗ ಚೈತನ್ಯ ಬಾಯ್ತುಂಬ ಹೊಗಳಿದ್ದಾರೆ. ಇದನ್ನು ಕೇಳಿ ಸಮಂತಾ ಅಭಿಮಾನಿಗಳು ಖುಷಿ ಆಗಿದ್ದಾರೆ.

ನಾಗ ಚೈತನ್ಯ ಅವರು ಸದ್ಯ ‘ಕಸ್ಟಡಿ’ ಸಿನಿಮಾ ಪ್ರಮೋಷನ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಮೇ 12ರಂದು ರಿಲೀಸ್ ಆಗಲಿದೆ. ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಚಿತ್ರ ಸಿದ್ಧಗೊಂಡಿದೆ. ವೆಂಕಟ್ ಪ್ರಭು ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಪ್ರಮೋಷನ್ ವೇಳೆ ನಾಗ ಚೈತನ್ಯ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ವಿಚ್ಛೇದನದ ಕುರಿತು ಅವರು ಮಾತನಾಡಿದ್ದಾರೆ. ಇಬ್ಬರೂ ಹಳೆಯದನ್ನು ಮರೆತು ಮುಂದೆ ಸಾಗಿರುವುದಾಗಿ ಅವರು ಹೇಳಿದ್ದಾರೆ.

‘ನಾವು ಬೇರ್ಪಟ್ಟು ಎರಡು ವರ್ಷದ ಮೇಲಾಗಿದೆ. ನಾವು ಔಪಚಾರಿಕವಾಗಿ ವಿಚ್ಛೇದನ ಪಡೆದು ಒಂದು ವರ್ಷವಾಗಿದೆ. ನ್ಯಾಯಾಲಯ ನಮಗೆ ವಿಚ್ಛೇದನ ನೀಡಿದೆ. ನಾವಿಬ್ಬರೂ ನಮ್ಮನಮ್ಮ ಕೆಲಸಗಳಲ್ಲಿ ಬ್ಯುಸಿ ಇದ್ದೇವೆ’ ಎಂದು ಅವರು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ನೀಡಿದ್ದಾರೆ. ಇದಲ್ಲದೆ, ಸಮಂತಾ ಅವರನ್ನು ನಾಗ ಚೈತನ್ಯ ಹೊಗಳಿದ್ದಾರೆ. ‘ಸಮಂತಾ ಒಳ್ಳೆಯ ವ್ಯಕ್ತಿ ಮತ್ತು ಎಲ್ಲಾ ಸಂತಸಕ್ಕೆ ಅರ್ಹರು’ ಎಂದಿದ್ದಾರೆ ಅವರು.

ಸಮಂತಾ ಅವರು ‘ದಿ ಫ್ಯಾಮಿಲಿ ಮ್ಯಾನ್ 2’ ಸರಣಿಯಲ್ಲಿ ಬೋಲ್ಡ್ ಪಾತ್ರ ಮಾಡಿದ್ದರು. ಈ ಕಾರಣಕ್ಕೆ ನಾಗ ಚೈತನ್ಯ ಹಾಗೂ ಸಮಂತಾ ಮಧ್ಯೆ ವೈಮನಸ್ಸು ಮೂಡಿತು ಎಂದು ವರದಿ ಆಗಿತ್ತು. ಆದರೆ, ಇದನ್ನು ಯಾರೂ ಅಧಿಕೃತವಾಗಿ ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ಹೊಸ ವೆಬ್ ಸೀರಿಸ್​​ನಲ್ಲಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಅನುಷ್ಕಾ-ಸಮಂತಾ? ಕೊಹ್ಲಿ ಭಾವ ಡೈರೆಕ್ಟರ್

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಲಂಡನ್​ ಹೋಟೆಲ್ ಒಂದರಲ್ಲಿ ಇಬ್ಬರೂ ಒಟ್ಟಿಗೇ ಊಟಕ್ಕೆ ತೆರಳಿದ್ದ ಫೋಟೋ ವೈರಲ್ ಆಗಿತ್ತು. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಇಬ್ಬರೂ ಮದುವೆ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ