Rashmika Mandanna: ರಶ್ಮಿಕಾ ಮಂದಣ್ಣಗೆ ಮಹಿಳಾ ಪ್ರಧಾನ ಸಿನಿಮಾ ಸಿಗಲು ಕಾರಣವಾಗಿದ್ದು ಸಮಂತಾ

ಸಮಂತಾ ಅವರು ‘ಯಶೋದಾ’ ಮೊದಲಾದ ಮಹಿಳಾ ಪ್ರಧಾನ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ. ಹೀಗಾಗಿ, ಅವರಿಗೆ ‘ರೇನ್​ಬೋ’ ಆಫರ್ ನೀಡಲಾಯಿತು.

Rashmika Mandanna: ರಶ್ಮಿಕಾ ಮಂದಣ್ಣಗೆ ಮಹಿಳಾ ಪ್ರಧಾನ ಸಿನಿಮಾ ಸಿಗಲು ಕಾರಣವಾಗಿದ್ದು ಸಮಂತಾ
ರಶ್ಮಿಕಾ ಮಂದಣ್ಣ-ಸಮಂತಾ
Follow us
ರಾಜೇಶ್ ದುಗ್ಗುಮನೆ
|

Updated on:Apr 05, 2023 | 6:43 AM

ರಶ್ಮಿಕಾ ಮಂದಣ್ಣ ಅವರಿಗೆ ಇಂದು (ಮಾರ್ಚ್​ 5) ಜನ್ಮದಿನದ ಸಂಭ್ರಮ. ರಶ್ಮಿಕಾ ಮಂದಣ್ಣ (Rashmika Mandanna) ಅವರು ವೃತ್ತಿ ಜೀವನದಲ್ಲಿ 7 ವರ್ಷ ಕಳೆದಿದ್ದಾರೆ. ಇಲ್ಲಿವರೆಗೆ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ಪೂರ್ಣಪ್ರಮಾಣದ ಮಹಿಳಾ ಪ್ರಧಾನ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ‘ರೇನ್​ಬೋ’ ಎನ್ನುವ ಶೀರ್ಷಿಕೆ ಇಡಲಾಗಿದೆ. ರಶ್ಮಿಕಾಗೆ ಈ ಆಫರ್ ಸಿಗೋಕೆ ಕಾರಣವಾಗಿದ್ದು ಸಮಂತಾ (Samantha) ರುತ್ ಪ್ರಭು ಎನ್ನುವ ಸುದ್ದಿ ಹರಿದಾಡಿದೆ. ಇದು ಸತ್ಯವೋ ಅಥವಾ ವದಂತಿಯೋ ಎನ್ನುವ ಬಗ್ಗೆ ರಶ್ಮಿಕಾ ಅವರೇ ಉತ್ತರ ನೀಡಬೇಕಿದೆ.

ಸಮಂತಾ ಅವರ ಬಾಳಲ್ಲಿ ಅನೇಕ ಏಳುಬೀಳುಗಳು ಎದುರಾದವು. ಅವರಿಗೆ Myositis ಹೆಸರಿನ ಕಾಯಿಲೆ ಕಾಣಿಸಿಕೊಂಡಿತು. ಈ ಕಾಯಿಲೆಯಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ದೊಡ್ಡ ಬ್ರೇಕ್ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದರಿಂದ ಸಮಂತಾ ಅವರು ಒಪ್ಪಿಕೊಂಡ ಸಿನಿಮಾ ಕೆಲಸಗಳು ವಿಳಂಬ ಆದವು. ಈಗ ಅವರು Myositis ಕಾಯಿಲೆಯಿಂದ ಗುಣಮುಖರಾಗಿ ಒಪ್ಪಿಕೊಂಡ ಸಿನಿಮಾಗಳ ಕೆಲಸ ಮುಗಿಸುತ್ತಿದ್ದಾರೆ. ಇದು ರಶ್ಮಿಕಾಗೆ ವರದಾನವಾಗಿದೆ ಎನ್ನಲಾಗಿದೆ.

ಸಮಂತಾ ಅವರು ‘ಯಶೋದಾ’ ಮೊದಲಾದ ಮಹಿಳಾ ಪ್ರಧಾನ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ. ಹೀಗಾಗಿ, ಅವರಿಗೆ ‘ರೇನ್​ಬೋ’ ಆಫರ್ ನೀಡಲಾಯಿತು. ಆದರೆ, ಸಮಂತಾ ಇದನ್ನು ಒಪ್ಪಿಕೊಂಡಿಲ್ಲ. ಈಗ ಒಪ್ಪಿಕೊಂಡ ಚಿತ್ರಗಳ ಕೆಲಸ ಪೂರ್ಣಗೊಳಿಸುವ ಅಗತ್ಯ ಅವರಿಗೆ ಇರೋ ಹಿನ್ನೆಲೆಯಲ್ಲಿ ಅವರು ಈ ಆಫರ್ ರಿಜೆಕ್ಟ್ ಮಾಡಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ರಶ್ಮಿಕಾಗೆ ಈ ಆಫರ್ ಹೋಗಿದೆ.

ಇದನ್ನೂ ಓದಿ: RM22: ಬ್ಯಾಕ್ ​ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ‘ರೈನ್​ಬೋ’ ಚಿತ್ರಕ್ಕೆ ಕೊಡಗಿನ ಕುವರಿ ನಾಯಕಿ

ಶಾಂತರುಬಾನ್ ಅವರು ‘ರೈನ್​ಬೋ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರೊಮ್ಯಾಂಟಿಕ್ ಫ್ಯಾಂಟಸಿ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ. ಏಪ್ರಿಲ್ 3ರಂದು ಸಿನಿಮಾದ ಮುಹೂರ್ತ ನೆರವೇರಿದೆ. ಚಿತ್ರದ ಶೂಟಿಂಗ್ ಏಪ್ರಿಲ್ 7ರಿಂದ ಆರಂಭ ಆಗಲಿದೆ. ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಹಾಗೂ ‘ಅನಿಮಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ನಿತೀನ್ ಜೊತೆಗೂ ಅವರು ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:30 am, Wed, 5 April 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ