Samantha: ಮಿತಿ ಮೀರಿದ ಯೂಟ್ಯೂಬರ್; ಸಮಂತಾ ಹೆಲ್ತ್ ಬಗ್ಗೆ ತಪ್ಪು ಮಾಹಿತಿ ಹರಡಿದವರಿಗೆ ಕಾದಿದೆ ಗ್ರಹಚಾರ
Samantha Ruth Prabhu: ಈ ಹಿಂದಿನ ಘಟನೆಯಿಂದ ಕೆಲವು ಯೂಟ್ಯೂಬರ್ಗಳು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಅಂಥವರಿಗೆ ಈ ಬಾರಿ ಸಮಂತಾ ತಕ್ಕ ಪಾಠ ಕಲಿಸುವ ಸಾಧ್ಯತೆ ದಟ್ಟವಾಗಿದೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ಭರ್ಜರಿ ಡಿಮ್ಯಾಂಡ್ ಇದೆ. ಅವರು ಸದಾ ಸುದ್ದಿಯಲ್ಲಿ ಇರುತ್ತಾರೆ. ಗಾಸಿಪ್ಗಳಿಗೂ ಕೊರತೆ ಇಲ್ಲ. ಸಮಂತಾ ಅವರ ವೃತ್ತಿ ಜೀವನ ಮತ್ತು ಖಾಸಗಿ ಬದುಕಿನ ಬಗ್ಗೆ ಅನೇಕ ಅಂತೆ-ಕಂತೆಗಳು ಹರಿದಾಡುತ್ತಿವೆ. ಸೆಲೆಬ್ರಿಟಿ ಎಂದಮೇಲೆ ಅದೆಲ್ಲ ಸಹಜ. ಆದರೆ ಎಲ್ಲದಕ್ಕೂ ಒಂದು ಮಿತಿ ಇರಬೇಕು. ಕೆಲವರು ಸಮಂತಾ ಆರೋಗ್ಯದ (Samantha Health) ಬಗ್ಗೆಯೂ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ಅವರ ವೃತ್ತಿಜೀವನಕ್ಕೆ ತೊಂದರೆ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ಬಾರಿ ಸಮಂತಾ ಅವರು ಕಾನೂನು ಸಮರ ಸಾರಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಯೂಟ್ಯೂಬರ್ಗಳಿಗೆ (Youtubers) ಗ್ರಹಚಾರ ಬಿಡಿಸಲು ಸಮಂತಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.
ಅಷ್ಟಕ್ಕೂ ಸಮಂತಾ ಅವರು ಆರೋಗ್ಯದ ಬಗ್ಗೆ ಗಾಸಿಪ್ ಹಬ್ಬಿದ್ದು ಯಾಕೆ? ಉತ್ತರ ಸಿಂಪಲ್. ಸಮಂತಾ ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಅವರು ಅಷ್ಟಾಗಿ ಸೋಶಿಯಲ್ ಮೀಡಿಯಾ ಬಳಸುತ್ತಿಲ್ಲ. ಅವರಿಗೆ ಅನಾರೋಗ್ಯ ಕಾಡುತ್ತಿರುವುದರಿಂದ ಈ ರೀತಿ ಸೈಲೆಂಟ್ ಆಗಿದ್ದಾರೆ ಎಂಬುದು ಕೆಲವು ಯೂಟ್ಯೂಬರ್ಗಳ ವಾದ. ಕೆಲವರಂತೂ ಅತಿ ಕೆಟ್ಟದಾಗಿ ಥಂಬ್ನೇಲ್ಗಳನ್ನು ಮಾಡಿ ಹರಿಬಿಟ್ಟಿದ್ದಾರೆ. ಇದರಿಂದ ಸಮಂತಾ ಅಭಿಮಾನಿಗಳಿಗೆ ಬೇಸರ ಆಗಿದೆ.
ಈ ಹಿಂದೆ ಕೂಡ ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ನೀಡಿದ ಸಂದರ್ಭದಲ್ಲೂ ಇದೇ ರೀತಿ ಆಗಿತ್ತು. ಸಮಂತಾ ಅವರ ಪರ್ಸನಲ್ ಲೈಫ್ ಬಗ್ಗೆ ಇಲ್ಲಸಲ್ಲದ ಗಾಸಿಪ್ ಹಬ್ಬಿಸಲಾಗಿತ್ತು. ಆಗಲೂ ಅವರು ಕಾನೂನು ಸಮರ ಸಾರಿದ್ದರು. ಅಷ್ಟಾದರೂ ಕೆಲವು ಯೂಟ್ಯೂಬರ್ಗಳು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಅಂಥವರಿಗೆ ಈ ಬಾರಿ ಸಮಂತಾ ತಕ್ಕ ಪಾಠ ಕಲಿಸುವ ಸಾಧ್ಯತೆ ದಟ್ಟವಾಗಿದೆ.
ಸಿನಿಮಾ ವಿಚಾರಕ್ಕೆ ಬರುವುದಾದರೆ, ವಿಚ್ಛೇದನದ ಬಳಿಕ ಸಮಂತಾ ಅವರು ಚಾರ್ಮ್ ಹೆಚ್ಚಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ವಿಜಯ್ ದೇವರಕೊಂಡ ಜೊತೆ ಅವರು ಅಭಿನಯಿಸುತ್ತಿರುವ ‘ಖುಷಿ’ ಸಿನಿಮಾ ಸಖತ್ ನಿರೀಕ್ಷೆ ಮೂಡಿಸಿದೆ. ಹಾಗೆಯೇ ‘ಯಶೋಧ’ ಸಿನಿಮಾದಲ್ಲಿ ಸಮಂತಾ ಅವರು ಆ್ಯಕ್ಷನ್ ಅವತಾರ ತಾಳುತ್ತಿದ್ದಾರೆ. ‘ಶಾಕುಂತಲಂ’ ಚಿತ್ರದಲ್ಲಿ ಶಕುಂತಲೆಯ ಪಾತ್ರ ಮಾಡುತ್ತಿದ್ದಾರೆ. ಹೀಗೆ ಒಂದಕ್ಕಿಂತ ಒಂದು ಡಿಫರೆಂಟ್ ಸಿನಿಮಾಗಳು ಅವರ ಕೈಯಲ್ಲಿವೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:46 pm, Tue, 6 September 22