AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: 12 ಕೋಟಿ ರೂಪಾಯಿ ಲಾಸ್ ಮಾಡಿಕೊಂಡ ಸಮಂತಾ; ಇದಕ್ಕೂ ಒಂದು ವರ್ಷ ಬ್ರೇಕ್​ಗೂ ಇದೆ ಲಿಂಕ್

2020ರಲ್ಲಿ ಕೊವಿಡ್ ಕಾಣಿಸಿ ಕೊಂಡಿತು. ಅದಕ್ಕೂ ಮೊದಲು ವರ್ಷಕ್ಕೆ ಸಮಂತಾ ನಟನೆಯ ಮೂರು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ, ಕೊವಿಡ್ ಕಾಣಿಸಿಕೊಂಡ ಬಳಿಕ ಸಮಂತಾ ವೃತ್ತಿ ಜೀವನದ ವೇಗ ಕೊಂಚ ತಗ್ಗಿದೆ.

Samantha: 12 ಕೋಟಿ ರೂಪಾಯಿ ಲಾಸ್ ಮಾಡಿಕೊಂಡ ಸಮಂತಾ; ಇದಕ್ಕೂ ಒಂದು ವರ್ಷ ಬ್ರೇಕ್​ಗೂ ಇದೆ ಲಿಂಕ್
ಸಮಂತಾ
ರಾಜೇಶ್ ದುಗ್ಗುಮನೆ
|

Updated on:Jul 26, 2023 | 8:57 AM

Share

ನಟಿ ಸಮಂತಾ (Samantha) ಅವರು ಸದ್ಯ ಒಂದು ವರ್ಷ ಬ್ರೇಕ್ ತೆಗೆದುಕೊಂಡಿದ್ದಾರೆ. Myositis ಕಾಯಿಲೆಯಿಂದ ಬಳಲುತ್ತಿರುವ ಅವರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕಾಯಿಲೆಯಿಂದ ಸ್ವಲ್ಪ ಚೇತರಿಕೆ ಕಂಡ ಬಳಿಕ ಅವರು ಒಪ್ಪಿಕೊಂಡ ಸಿನಿಮಾ ಕೆಲಸಗಳನ್ನು ಮುಗಿಸಿಕೊಟ್ಟರು. ಹೀಗಿರುವಾಗಲೇ ಸಮಂತಾ ಒಂದು ವರ್ಷ ಬ್ರೇಕ್ ತೆಗೆದುಕೊಂಡಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಸಮಂತಾಗೆ ಇದರಿಂದ ಒಂದಲ್ಲ, ಎರಡಲ್ಲ ಬರೋಬ್ಬರಿ 12 ಕೋಟಿ ರೂಪಾಯಿ ನಷ್ಟ ಆಗುತ್ತಿದೆ! ಸದ್ಯ ಹೀಗೊಂದು ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಫ್ಯಾನ್ಸ್ ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2020ರಲ್ಲಿ ಕೊವಿಡ್ ಕಾಣಿಸಿಕೊಂಡಿತು. ಅದಕ್ಕೂ ಮೊದಲು ವರ್ಷಕ್ಕೆ ಸಮಂತಾ ನಟನೆಯ ಮೂರು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ, ಕೊವಿಡ್ ಕಾಣಿಸಿಕೊಂಡ ಬಳಿಕ ಸಮಂತಾ ವೃತ್ತಿ ಜೀವನದ ವೇಗ ಕೊಂಚ ತಗ್ಗಿದೆ. ಎಲ್ಲವೂ ಸರಿ ಆಯಿತು ಎಂದುಕೊಳ್ಳುವಾಗಲೇ ಅವರಿಗೆ myositis ಕಾಯಿಲೆ ಕಾಣಿಸಿಕೊಂಡಿತು. ಈಗ ಸಮಂತಾಗೆ ಒಂದು ವರ್ಷ ಬ್ರೇಕ್ ಪಡೆಯೋದು ಅನಿವಾರ್ಯ ಆಗಿದೆ.

ಸಮಂತಾ ಅವರು ಪ್ರತಿ ಸಿನಿಮಾಗೆ 3.5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ಇದರ ಜೊತೆಗೆ ಅನೇಕ ಜಾಹೀರಾತುಗಳಲ್ಲಿ ಅವರು ನಟಿಸುತ್ತಾರೆ. ಇದನ್ನು ಗಮನದಲ್ಲಿ ಇಟ್ಟುಕೊಂಡರೆ ವರ್ಷಕ್ಕೆ ಅವರು 12 ಕೋಟಿ ರೂಪಾಯಿ ಗಳಿಕೆ ಮಾಡುತ್ತಿದ್ದರು. ಈಗ ಒಂದು ವರ್ಷದ ಬ್ರೇಕ್​ನಿಂದ ಅವರಿಗೆ 12 ಕೋಟಿ ರೂಪಾಯಿ ನಷ್ಟ ಆಗಿದೆ. ಈ ನಷ್ಟ ಭರಿಸಲು ಅವರು ಸಿದ್ಧರಿದ್ದಾರೆ.

ಇದನ್ನೂ ಓದಿ: ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​

ಇತ್ತೀಚೆಗೆ ಸಮಂತಾ ಅವರು ಬಾಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫ್ರೆಂಡ್ ಜೊತೆ ಸೇರಿ ಅವರು ಬಾಲಿ ಸುತ್ತುತ್ತಿದ್ದಾರೆ. ಸಿನಿಮಾ ವಿಚಾರಕ್ಕೆ ಬರೋದಾದರೆ ಅವರ ನಟನೆಯ ‘ಖುಷಿ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ಹೀರೋ. ಇನ್ನು, ಇಂಗ್ಲಿಷ್ ಸೀರಿಸ್​ ‘ಸಿಟಾಡೆಲ್’ನ ಇಂಡಿಯನ್ ವರ್ಷನ್​ನಲ್ಲಿ ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Wed, 26 July 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ