‘ಸಮಂತಾ ತಾಯಿ ಆಗುತ್ತಿರುವುದು ನಿಜ’; ಕೊನೆಗೂ ಸಿಕ್ತು ಗುಡ್ ನ್ಯೂಸ್

ಸಮಂತಾ ರುತ್ ಪ್ರಭು ತಾಯಿ ಆಗುತ್ತಿರುವುದು ಅವರ ಆಪ್ತರಿಂದ ಖಚಿತವಾಗಿದೆ. 'ಮಾ ಇಂಟಿ ಬಂಗಾರಂ' ಚಿತ್ರದ ನಿರ್ದೇಶಕಿ ನಂದಿನಿ ರೆಡ್ಡಿ ಸಮಂತಾ ಗರ್ಭಿಣಿಯಾಗಿರುವುದನ್ನು ದೃಢಪಡಿಸಿದ್ದಾರೆ. ಚಿತ್ರದ ಯಶಸ್ಸಿನ ಬೆನ್ನಲ್ಲೇ ಈ ಶುಭ ಸುದ್ದಿ ಸಿಕ್ಕಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ನಾಗ ಚೈತನ್ಯ ಅವರಿಂದ ವಿಚ್ಛೇದನದ ಬಳಿಕ ರಾಜ್ ನಿಧಿಮೋರು ಅವರನ್ನು ಸಮಂತಾ ವಿವಾಹವಾಗಿದ್ದರು.

‘ಸಮಂತಾ ತಾಯಿ ಆಗುತ್ತಿರುವುದು ನಿಜ’; ಕೊನೆಗೂ ಸಿಕ್ತು ಗುಡ್ ನ್ಯೂಸ್
ಸಮಂತಾ

Updated on: Jun 22, 2026 | 2:44 PM

ಸಮಂತಾ ‘ಮಾ ಇಂಟಿ ಬಂಗಾರಂ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಮೂರೇ ದಿನಕ್ಕೆ 40+ ಕೋಟಿ ರೂಪಾಯಿ ಗಳಿಕೆ ಮಾಡಿ ಬೀಗಿದೆ. ಈ ಸಿನಿಮಾ ಗೆದ್ದ ಖುಷಿಯಲ್ಲಿ ಸಮಂತಾ ಮಾತನಾಡುವಾಗ ಎಲ್ಲರ ಗಮನ ಅವರ ಹೊಟ್ಟೆಯ ಮೇಲೆ ನೆಟ್ಟಿತ್ತು. ಅವರು ತಾಯಿ ಆಗುತ್ತಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಈಗ ಈ ಊಹೆ ಸರಿಯಾಗಿದೆ. ಸಮಂತಾ ತಾಯಿ ಆಗುತ್ತಿರುವ ವಿಷಯವನ್ನು ಅವರ ಆಪ್ತರೇ ಖಚಿತಪಡಿಸಿದ್ದಾರೆ.

ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ಬಳಿಕ ರಾಜ್ ನಿಧಿಮೋರು ಅವರನ್ನು ಸಮಂತಾ ವಿವಾಹ ಆದರು. ಕಳೆದ ವರ್ಷ ಡಿಸೆಂಬರ್ 1ರಂದು ಈ ವಿವಾಹ ನೆರವೇರಿತು. ಆಪ್ತರು ಹಾಗೂ ಕುಟುಂಬದವರು ಮಾತ್ರ ಈ ಮದುವೆಯಲ್ಲಿ ಭಾಗಿ ಆದರು. ಈಗ ಸಮಂತಾ ಅವರು ತಾಯಿ ಆಗುತ್ತಿದ್ದಾರೆ. ಸಮಂತಾ ಆಪ್ತ ಗೆಳತಿ ಹಾಗೂ ‘ಮಾ ಇಂಟಿ ಬಂಗಾರಂ’ ನಿರ್ದೇಶಕ ನಂದಿನಿ ರೆಡ್ಡಿ ಅವರೇ ಈ ವಿಷಯ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ನಟಿ ಸಮಂತಾ ಕಟೌಟ್​​ಗೆ ಅದ್ಧೂರಿ ಹಾರ, ಹಾಲಿನಭಿಷೇಕ: ವಿಡಿಯೋ

‘ಸಿನೇಮಾ ಎಕ್ಸ್​​ಪ್ರೆಸ್​’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಂದಿನಿ, ‘ಅವಳ ಪ್ರೆಗ್ನೆನ್ಸಿ ಸರಿಯಾದ ಹಾಗೂ ಸುಂದರ ಸಮಯದಲ್ಲಿ ಬಂದಿದೆ. ನಮ್ಮ ಸಿನಿಮಾ ಮಾ ಇಂಟಿ ಬಂಗಾರಂ ಯುಶಸ್ಸು ಕಂಡಿದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಸಮಂತಾ ತಾಯಿ ಆಗುತ್ತಿರುವ ವಿಷಯ ಬಹುತೇಕ ಅಧಿಕೃತವಾದಂತೆ ಆಗಿದೆ.
‘ಮಾ ಇಂಟಿ ಬಂಗಾರಂ’ ಸಿನಿಮಾ ತಂಡ ಇತ್ತೀಚೆಗೆ ಸಕ್ಸಸ್ ಮೀಟ್ ಆಯೋಜನೆ ಮಾಡಿತ್ತು. ಇದರಲ್ಲಿ ಅವರು ಸ್ವಲ್ಪ ಟೈಟ್ ಶರ್ಟ್ ಧರಿಸಿದ್ದರಿಂದ ಹೊಟ್ಟೆ ದೊಡ್ಡದಾಗಿ ಕಾಣುತ್ತಾ ಇತ್ತು. ಆಗಿನಿಂದ ಸಮಂತಾ ಪ್ರೆಗ್ನೆನ್ಸಿ ವಿಷಯ ಹರಿದಾಡಿತ್ತು. ಸಮಂತಾ ಕಡೆಯಿಂದ ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

‘ಮಾ ಇಂಟಿ ಬಂಗಾರಂ’ ಸಿನಿಮಾದಲ್ಲಿ ಕನ್ನಡದ ದಿಗಂತ್ ಕೂಡ ನಟಿಸಿದ್ದಾರೆ. ಈ ಚಿತ್ರಕ್ಕೆ ಕೆಲವರು ಪಾಸಿಟಿವ್ ಪ್ರತಿಕ್ರಿಯೆ ಹೊರಹಾಕಿದರೆ ಇನ್ನೂ ಕೆಲವರು ಮಿಶ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us