ಮದುವೆ ಬಳಿಕ ಸಮಂತಾ ಮೊದಲ ಸಿನಿಮಾ; ಹೇಗಿದೆ ನೋಡಿ ಫಸ್ಟ್ ಲುಕ್

ಎರಡು ವರ್ಷಗಳ ಗ್ಯಾಪ್ ಬಳಿಕ ನಟಿ ಸಮಂತಾ ರುತ್ ಪ್ರಭು ಅವರು ಮತ್ತೆ ಬೆಳ್ಳಿತೆರೆ ಮೇಲೆ ಬರುತ್ತಿದ್ದಾರೆ. ಅವರು ನಟಿಸಿದ ‘ಮಾ ಇಂಟಿ ಬಂಗಾರಂ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಜನವರಿ 9ರಂದು ಈ ಸಿನಿಮಾದ ಟೀಸರ್ ಕೂಡ ಬಿಡುಗಡೆ ಆಗಲಿದೆ. ಸಿನಿಮಾ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಮದುವೆ ಬಳಿಕ ಸಮಂತಾ ಮೊದಲ ಸಿನಿಮಾ; ಹೇಗಿದೆ ನೋಡಿ ಫಸ್ಟ್ ಲುಕ್
Samantha

Updated on: Jan 07, 2026 | 4:05 PM

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ನಿರ್ದೇಶಕ ರಾಜ್ ನಿಡಿಮೋರು ಜೊತೆ ಇತ್ತೀಚೆಗೆ ಮದುವೆ ಆದರು. ಈಗ ಮತ್ತೆ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಮಂತಾ ನಟನೆಯ ಹೊಸ ಸಿನಿಮಾ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಗೆ ಸಜ್ಜಾಗುತ್ತಿದೆ. 2 ವರ್ಷಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದ ಸಮಂತಾ (Samantha) ಅವರು ಈ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅದನ್ನು ನೋಡಿದ ಬಳಿಕ ಅಭಿಮಾನಿಗಳಿಗೆ ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಸಮಂತಾ ರುತ್ ಪ್ರಭು ಅವರು ‘ಮಾ ಇಂಟಿ ಬಂಗಾರಂ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಮುಖ್ಯ ಪಾತ್ರದಲ್ಲಿ ನಟಿಸುವುದರ ಜೊತೆಗೆ ಸಮಂತಾ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ತಮ್ಮದೇ ಪ್ರೊಡಕ್ಷನ್ ಹೌಸ್ ಮೂಲಕ ಬಂಡವಾಳ ಹೂಡಿದ್ದಾರೆ. ಆ ಕಾರಣದಿಂದಲೂ ಅವರಿಗೆ ಈ ಸಿನಿಮಾ ತುಂಬಾ ಸ್ಪೆಷಲ್ ಆಗಿದೆ.

‘ಮಾ ಇಂಟಿ ಬಂಗಾರಂ’ ಸಿನಿಮಾದ ಫಸ್ಟ್ ಲುಕ್​​ನಲ್ಲಿ ಸಮಂತಾ ಅವರು ಸೀರೆ ಧರಿಸಿ ಕಾಣಿಸಿಕೊಂಡಿದ್ದಾರೆ. ಗ್ಲಾಮರ್ ಪಾತ್ರವನ್ನು ಬಿಟ್ಟು ಅವರು ರಫ್ ಆ್ಯಂಡ್ ಟಫ್ ಪಾತ್ರ ಮಾಡಿದ್ದಾರೆ. ವಿಲನ್​​ಗಳ ಮೂಳೆ ಮುರಿಯಲು ಸಜ್ಜಾಗಿರುವ ದುರ್ಗೆಯ ರೀತಿ ಅವರು ಪೋಸ್ ನೀಡಿದ್ದಾರೆ. ಸಮಂತಾ ರುತ್ ಪ್ರಭು ಅಭಿಮಾನಿಗಳು ಈ ಸಿನಿಮಾ ಮೇಲೆ ಭರವಸೆ ಇಟ್ಟುಕೊಂಡಿದ್ದಾರೆ.

ಈ ಪೋಸ್ಟರ್ ನೋಡಿದ ಅಭಿಮಾನಿಗಳು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಲೇಡಿ ಬಾಸ್ ಮರಳಿ ಬಂದಿದ್ದಾರೆ’, ‘ಸಮಂತಾ ಅವರ ಕಮ್​ಬ್ಯಾಕ್ ಬಹಳ ಮಾಸ್ ಆಗಿದೆ’ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ. ಫ್ಯಾನ್ಸ್ ಪುಟಗಳಲ್ಲಿ ಈ ಪೋಸ್ಟರ್ ವೈರಲ್ ಆಗುತ್ತಿದೆ. ಬಿ.ವಿ. ನಂದಿನಿ ರೆಡ್ಡಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ನಿಧಿ ಅಗರ್​​ವಾಲ್ ಬಳಿಕ ಸಮಂತಾಗೂ ಫ್ಯಾನ್ಸ್ ಕಾಟ: ವಿಡಿಯೋ ವೈರಲ್

ಫಸ್ಟ್ ಲುಕ್ ಪೋಸ್ಟರ್ ಜೊತೆ ಇನ್ನೊಂದು ಗುಡ್ ನ್ಯೂಸ್ ನೀಡಲಾಗಿದೆ. ಜನವರಿ 9ರಂದು ಬೆಳಗ್ಗೆ 10 ಗಂಟೆಗೆ ‘ಮಾ ಇಂಟಿ ಬಂಗಾರಂ’ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ ಎಂದು ಕೂಡ ತಿಳಿಸಲಾಗಿದೆ. ಆದರೆ ಸಿನಿಮಾದ ರಿಲೀಸ್ ದಿನಾಂಕ ಇನ್ನೂ ಬಹಿರಂಗ ಆಗಿಲ್ಲ. ಇದು ಸಮಂತಾ ಅವರು 2ನೇ ಮದುವೆ ಆದ ಬಳಿಕ ಬರುತ್ತಿರುವ ಮೊದಲ ಸಿನಿಮಾ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.