Samantha Ruth Prabhu: ‘ಶಾಕುಂತಲಂ’ ಟ್ರೇಲರ್​; ಮತ್ತೊಂದು ಗೆಲುವಿಗಾಗಿ ಸಜ್ಜಾದ ಸಮಂತಾ ರುತ್​ ಪ್ರಭು

Samantha | Shaakuntalam Trailer: ಸಮಂತಾ ರುತ್​ ಪ್ರಭು ನಟನೆಯ ‘ಶಾಕುಂತಲಂ’ ಚಿತ್ರ ಫೆಬ್ರವರಿ 17ರಂದು ರಿಲೀಸ್​ ಆಗಲಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

Samantha Ruth Prabhu: ‘ಶಾಕುಂತಲಂ’ ಟ್ರೇಲರ್​; ಮತ್ತೊಂದು ಗೆಲುವಿಗಾಗಿ ಸಜ್ಜಾದ ಸಮಂತಾ ರುತ್​ ಪ್ರಭು
ಸಮಂತಾ ರುತ್ ಪ್ರಭು
Follow us
TV9 Web
| Updated By: ಮದನ್​ ಕುಮಾರ್​

Updated on:Jan 09, 2023 | 8:50 PM

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಸಿನಿಮಾದಿಂದ ಸಿನಿಮಾಗೆ ಅವರು ಡಿಫರೆಂಟ್​ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆ ಕಾರಣದಿಂದ ಸಮಂತಾ ಅವರ ಪ್ರತಿ ಸಿನಿಮಾ ಕೂಡ ಇಂಟರೆಸ್ಟಿಂಗ್​ ಆಗಿರುತ್ತದೆ. 2022ರಲ್ಲಿ ಸಮಂತಾ ನಟನೆಯ ‘ಯಶೋದಾ’ ಸಿನಿಮಾ ತೆರೆಕಂಡು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತು. ಈಗ ಅವರ ಇನ್ನೊಂದು ಸಿನಿಮಾ ‘ಶಾಕುಂತಲಂ’ (Shaakuntalam Movie) ಬಿಡುಗಡೆಗೆ ಸಜ್ಜಾಗಿದೆ. ಪೌರಾಣಿಕ ಕಥಾಹಂದರ ಹೊಂದಿರುವ ಈ ಚಿತ್ರದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಇದರ ಟ್ರೇಲರ್​ (Shaakuntalam Trailer) ಬಿಡುಗಡೆಯಾಗಿದ್ದು, ಸಿನಿಮಾ ಮೇಲಿನ ಹೈಪ್​ ಹೆಚ್ಚಿದೆ.

ಹೈದರಾಬಾದ್​​ನಲ್ಲಿ ಅದ್ದೂರಿ ಕಾರ್ಯಕ್ರಮ ಮಾಡಿ ‘ಶಾಕುಂತಲಂ’ ಸಿನಿಮಾದ ಟ್ರೇಲರ್​ ರಿಲೀಸ್​ ಮಾಡಲಾಗಿದೆ. ಈ ಸಿನಿಮಾದಲ್ಲಿ ಶಕುಂತಲೆಯ ಪಾತ್ರವನ್ನು ಸಮಂತಾ ರುತ್​ ಪ್ರಭು ಮಾಡಿದ್ದಾರೆ. ಈ ಪೌರಾಣಿಕ ಪಾತ್ರ ಅವರಿಗೆ ಚೆನ್ನಾಗಿ ಹೊಂದಿಕೆ ಆಗುತ್ತಿದೆ. ಟ್ರೇಲರ್ ನೋಡಿದ ಎಲ್ಲರೂ ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಮೊದಲ ದಿನವೇ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಅದ್ದೂರಿ ಬಜೆಟ್​ನಲ್ಲಿ ‘ಶಾಕುಂತಲಂ’ ಸಿನಿಮಾ ಮೂಡಿಬಂದಿದೆ. ಬೃಹತ್​ ಸೆಟ್​ಗಳು ಗಮನ ಸೆಳೆಯುತ್ತಿವೆ. ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನದಲ್ಲಿ ಮೂಡಿಬಂದಿರುವ ದೃಶ್ಯಗಳು ಈ ಟ್ರೇಲರ್​ನಲ್ಲಿ ಹೈಲೈಟ್​ ಆಗಿವೆ. ಇದನ್ನು ನೋಡಿದ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಇದನ್ನೂ ಓದಿ: ಇನ್ನಷ್ಟು ಹದಗೆಟ್ಟಿತಾ ಸಮಂತಾ ಆರೋಗ್ಯ?

ಸಮಂತಾ ರುತ್​ ಪ್ರಭು ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅದರ ನಡುವೆಯೂ ಅವರು ಸಿನಿಮಾ ಕೆಲಸಗಳನ್ನು ಮುಗಿಸುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಾ, ಚೇತರಿಸಿಕೊಳ್ಳುತ್ತ, ಎಷ್ಟು ಸಾಧ್ಯವೋ ಅಷ್ಟು ಬೇಗ ಸಿನಿಮಾ ಕೆಲಸ ಮುಗಿಯಲು ಸಹಕರಿಸಿದ್ದಾರೆ. ಅದೆಲ್ಲದರ ಫಲವಾಗಿ ಈಗ ‘ಶಾಕುಂತಲಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

ಇದನ್ನೂ ಓದಿ: Shaakuntalam: ಅಭಿಮಾನಿಗಳಿಗೆ ಸಮಂತಾ ಸರ್​ಪ್ರೈಸ್​; ಹೊಸ ಪೋಸ್ಟರ್​ನಲ್ಲಿದೆ ಹಲವು ವಿಚಾರ

ಫೆಬ್ರವರಿ 17ರಂದು ‘ಶಾಕುಂತಲಂ’ ಚಿತ್ರ ರಿಲೀಸ್​ ಆಗಲಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಸಮಂತಾ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇರುವುದರಿಂದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ಭರವಸೆ ಚಿತ್ರತಂಡಕ್ಕಿದೆ.

ಖ್ಯಾತ ನಿರ್ದೇಶಕ ಗುಣಶೇಖರ್​ ಅವರು ‘ಶಾಕುಂತಲಂ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇದಲ್ಲದೇ ಹಲವು ಪ್ರಾಜೆಕ್ಟ್​ಗಳಲ್ಲಿ ಸಮಂತಾ ಬ್ಯುಸಿ ಆಗಿದ್ದಾರೆ. ವಿಜಯ್​ ದೇವರಕೊಂಡ ನಟನೆಯ ‘ಖುಷಿ’ ಚಿತ್ರಕ್ಕೂ ಅವರು ನಾಯಕಿ. ಅನಾರೋಗ್ಯದ ಕಾರಣದಿಂದ ಆ ಸಿನಿಮಾದ ಕೆಲಸಗಳು ವಿಳಂಬ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:50 pm, Mon, 9 January 23

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು