AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕಿ ಆದ ಸಮಂತಾ; ನಿರ್ಮಾಣ ಸಂಸ್ಥೆಗೆ ಹೆಸರು ಸಿಕ್ಕಿದ್ದು ಇಂಗ್ಲಿಷ್ ಹಾಡಿನಿಂದಿಂದ

ಸಮಂತಾ ನಿರ್ಮಾಣ ಸಂಸ್ಥೆಗೆ ‘ತ್ರಲಾಲ ಮೂವಿಂಗ್ ಪಿಕ್ಚರ್ಸ್' ಎಂದು ಹೆಸರು ಇಡಲಾಗಿದೆ. ಈ ಹೆಸರು ಅವರ ನೆಚ್ಚಿನ ಹಾಡಿನಿಂದ ಪ್ರೇರಿತವಾಗಿದೆಯಂತೆ. ಸಮಂತಾಗೆ ನೆಟ್ಟಿಗರು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ನಿರ್ಮಾಪಕಿ ಆದ ಸಮಂತಾ; ನಿರ್ಮಾಣ ಸಂಸ್ಥೆಗೆ ಹೆಸರು ಸಿಕ್ಕಿದ್ದು ಇಂಗ್ಲಿಷ್ ಹಾಡಿನಿಂದಿಂದ
ರಾಜೇಶ್ ದುಗ್ಗುಮನೆ
|

Updated on:Dec 11, 2023 | 10:52 AM

Share

ಟಾಲಿವುಡ್​ನ ಟಾಪ್ ಹೀರೋಯಿನ್ ಸಮಂತಾ ಅವರು ಕೆಲವು ಸಮಯದಿಂದ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ‘ಖುಷಿ’ ಚಿತ್ರದ (Kushi Movie) ನಂತರ ಅವರು ಸಂಪೂರ್ಣವಾಗಿ ತಮ್ಮ ಆರೋಗ್ಯದತ್ತ ಗಮನ ಹರಿಸಿದರು. ಮಯೋಸೈಟಿಸ್ ಸಮಸ್ಯೆಯಿಂದ ಚೇತರಿಸಿಕೊಳ್ಳಲು ಕೆಲ ತಿಂಗಳು ಅಮೆರಿಕದಲ್ಲಿ ಚಿಕಿತ್ಸೆ ಪಡೆದರು. ನಂತರ ಅವರು ಭೂತಾನ್‌ಗೂ ತೆರಳಿದ್ದರು. ಇತ್ತೀಚೆಗಷ್ಟೇ ಭಾರತಕ್ಕೆ ಮರಳಿರುವ ಸಮಂತಾ ಈಗ ಸಿನಿಮಾ ನಿರ್ಮಾಣದತ್ತ ಗಮನ ಹರಿಸುತ್ತಿದ್ದಾರೆ. ಈ ಬಗ್ಗೆ ಅವರ ಕಡೆಯಿಂದಲೇ ಅಧಿಕೃತ ಘೋಷಣೆ ಆಗಿದೆ.

ಇಲ್ಲಿಯವರೆಗೂ ನಾಯಕಿಯಾಗಿ ಪ್ರೇಕ್ಷಕರನ್ನು ರಂಜಿಸಿದ್ದ ಸಮಂತಾ ಈಗ ನಿರ್ಮಾಪಕಿಯಾಗಿದ್ದಾರೆ. ಹೊಸ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸುತ್ತಿರುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಅವರು ಘೋಷಿಸಿದ್ದಾರೆ. ನಿರ್ಮಾಣ ಸಂಸ್ಥೆ ಹೆಸರನ್ನು ತಿಳಿಸಲು ವಿಶೇಷ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ಸಮಂತಾ ನಿರ್ಮಾಣ ಸಂಸ್ಥೆಗೆ ‘ತ್ರಲಾಲ ಮೂವಿಂಗ್ ಪಿಕ್ಚರ್ಸ್’ ಎಂದು ಹೆಸರು ಇಡಲಾಗಿದೆ. ಈ ಹೆಸರು ಅವರ ನೆಚ್ಚಿನ ಹಾಡಿನಿಂದ ಪ್ರೇರಿತವಾಗಿದೆಯಂತೆ. ಜನಪ್ರಿಯ ಇಂಗ್ಲಿಷ್ ಪಾಪ್ ಹಾಡು ‘ಬ್ರೌನ್ ಗರ್ಲ್ ಇನ್ ದಿ ರಿಂಗ್’ ಹಾಡಿನ ಸಾಹಿತ್ಯಕ್ಕೂ ‘ತ್ರಲಾಲಾ’ ಪದ ಬರುತ್ತದೆ. ಈಗ ಅದನ್ನೇ ಅವರು ನಿರ್ಮಾಣ ಸಂಸ್ಥೆಗೆ ಹೆಸರು ಇಟ್ಟಿದ್ದಾರೆ. ಹೊಸ ಪ್ರತಿಭೆಗಳು ಮತ್ತು ಯುವ ಪೀಳಿಗೆಯನ್ನು ಪ್ರೋತ್ಸಾಹಿಸಲು ತ್ರಲಾಲ ಬ್ಯಾನರ್ ಸಹಕಾರಿ ಆಗಲಿದೆ.

ಇದನ್ನೂ ಓದಿ: ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

ಸಮಂತಾ ಕೆಲ ವರ್ಷಗಳಿಂದ ಸಾಕಷ್ಟು ನೋವು ತಿಂದಿದ್ದಾರೆ. ನಾಗ ಚೈತನ್ಯ ಅವರಿಂದ ಸಮಂತಾ ವಿಚ್ಛೇದನ ಪಡೆದರು. ಇದಾದ ಬಳಿಕ ಮಯೋಸೈಟಿಸ್ ಸಮಸ್ಯೆ ಕಾಣಿಸಿತು. ಸಮಂತಾ ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಖುಷಿ’ ಚಿತ್ರದಲ್ಲಿ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸಿದ್ದರು. ವರುಣ್ ಧವನ್ ಜೊತೆ ‘ಸಿಟಾಡೆಲ್’ ವೆಬ್ ಸರಣಿಯಲ್ಲಿ ನಟಿಸುತ್ತಿದ್ದಾರೆ. ಮುಂದಿನ ವರ್ಷ ಈ ಸರಣಿಯು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:50 am, Mon, 11 December 23

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?