AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಕುಟುಂಬ ಮತ್ತು ನಿಕಟ ಸ್ನೇಹಿತರಿಗೆ ಸತ್ಯ ತಿಳಿದಿದೆ’: ವಿಚ್ಛೇದನ ಬಗ್ಗೆ ಸಮಂತಾ ಮಾತು

Samantha Ruth Prabhu: ಸಮಂತಾ ಋತ್ ಪ್ರಭು ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡು ಮೂರು ವರ್ಷಗಳಾಗಿವೆ. ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದ ಚರ್ಚೆ ಇನ್ನೂ ಚಾಲ್ತಿಯಲ್ಲಿದೆ. ಇದೀಗ ಸಮಂತಾ ಋತ್ ಪ್ರಭು ವಿಚ್ಛೇದನದ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

‘ನಿಮ್ಮ ಕುಟುಂಬ ಮತ್ತು ನಿಕಟ ಸ್ನೇಹಿತರಿಗೆ ಸತ್ಯ ತಿಳಿದಿದೆ’: ವಿಚ್ಛೇದನ ಬಗ್ಗೆ ಸಮಂತಾ ಮಾತು
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 26, 2024 | 9:43 PM

Share

ಮದುವೆಯಾದ ನಾಲ್ಕು ವರ್ಷಗಳ ನಂತರ ನಟಿ ಸಮಂತಾ ರೂತ್ ಪ್ರಭು ಮತ್ತು ನಾಗ ಚೈತನ್ಯ ಅವರಿಂದ ಬೇರ್ಪಟ್ಟರು. ಅವರು 2021ರಲ್ಲಿ ತಮ್ಮ ವಿಚ್ಛೇದನವನ್ನು ಘೋಷಿಸಿದರು. ಈ ವಿಚ್ಛೇದನದ ನಂತರ, ಸಮಂತಾ ಸಾಕಷ್ಟು ಟ್ರೋಲ್ ಎದುರಿಸಬೇಕಾಯಿತು. ಸುಳ್ಳು ಚರ್ಚೆಗಳು ಮತ್ತು ಟೀಕೆಗಳು ಬಂದಾಗಲೂ ಸಮಂತಾ ಮೌನವನ್ನು ಉಳಿಸಿಕೊಳ್ಳಲು ಆದ್ಯತೆ ನೀಡಿದರು. ಈಗ ನಾಗ ಚೈತನ್ಯ ಅವರ ಎರಡನೇ ಮದುವೆಗೆ ಕೆಲವೇ ದಿನ ಬಾಕಿ ಇದೆ. ಸಮಂತಾ ಎಲ್ಲಾ ವಿಷಯಗಳ ಬಗ್ಗೆ ಮೌನ ಮುರಿದಿದ್ದಾರೆ.

‘ಗಲಾಟಾ ಇಂಡಿಯಾ’ಗೆ ನೀಡಿದ ಸಂದರ್ಶನದಲ್ಲಿ ಸಮಂತಾ ಮಾತನಾಡಿದ್ದಾರೆ. ‘ದುರದೃಷ್ಟವಶಾತ್ ನಾವು ಅಂತರ್ಗತವಾಗಿ ಪಿತೃಪ್ರಧಾನ ಸಮಾಜದಲ್ಲಿ ವಾಸಿಸುತ್ತಿದ್ದೇವೆ. ಹಾಗಾಗಿ ತಪ್ಪು ನಡೆದಾಗಲೆಲ್ಲಾ ಮಹಿಳೆಯರನ್ನು ಟೀಕಿಸಲಾಗುತ್ತದೆ. ಪುರುಷರು ಜವಾಬ್ದಾರರಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಮಹಿಳೆಯರು ಆನ್‌ಲೈನ್‌ನಲ್ಲಿ ಮಾತ್ರವಲ್ಲದೇ ನಿಜ ಜೀವನದಲ್ಲಿಯೂ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಾರೆ’ ಎಂದು ಬೇಸರ ಹೊರಹಾಕಿದ್ದಾರೆ ಸಮಂತಾ.

‘ನನ್ನ ಬಗ್ಗೆ ಅನೇಕ ವಿಷಯಗಳನ್ನು ಹೇಳಲಾಯಿತು. ಅದು ನಿಜವಲ್ಲ. ಆದರೂ ನಾನು ನನ್ನನ್ನು ನಿಯಂತ್ರಿಸಿಕೊಂಡು ಸುಮ್ಮನಿದ್ದೆ. ನನ್ನ ಬಗ್ಗೆ ತುಂಬಾ ಕೆಟ್ಟದಾಗಿ ಹೇಳಲಾಗಿತ್ತು. ಅನೇಕ ಸುಳ್ಳುಗಳನ್ನು ಹಬ್ಬಿಸಿದ್ದು ನನಗೆ ಇನ್ನೂ ನೆನಪಿದೆ. ಆ ಸಮಯದಲ್ಲಿ ನಾನು ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಬೇಕು ಎಂದು ಆಗಾಗ ಅನಿಸುತ್ತಿತ್ತು’ ಎಂದಿದ್ದಾರೆ ಅವರು.

‘ಕೆಲವರು ತುಂಬಾ ಚಂಚಲ ಸ್ವಭಾವದವರು. ಅವರು ನಿಮ್ಮನ್ನು ಒಂದು ನಿಮಿಷ ಪ್ರೀತಿಸುತ್ತಾರೆ, ಆದರೆ ಮೂರು ದಿನಗಳ ನಂತರ ನೀವು ಕೆಲವು ನಿರ್ಧಾರಗಳನ್ನು ತೆಗೆದುಕೊಂಡಾಗ ಅಥವಾ ನಿಮ್ಮ ಜೀವನದಲ್ಲಿ ಏನಾದರೂ ಕೆಟ್ಟದು ಸಂಭವಿಸಿದಾಗ ಅವರು ನಿಮ್ಮನ್ನು ಮತ್ತೆ ದ್ವೇಷಿಸಲು ಪ್ರಾರಂಭಿಸುತ್ತಾರೆ. ನಿಮ್ಮ ಕುಟುಂಬ ಮತ್ತು ನಿಕಟ ಸ್ನೇಹಿತರಿಗೆ ಸತ್ಯ ತಿಳಿದಿದೆ. ಆದ್ದರಿಂದ ಅವರಿಗೆ ನಿಜವಾಗಿಯೂ ಏನು ನಡೆದಿದೆ ಎಂಬುದನ್ನು ತಿಳಿದುಕೊಂಡು ನೀವು ತೃಪ್ತರಾಗಿರಬೇಕು’ ಎಂದಿದ್ದಾರೆ ಸಮಂತಾ.

ಇದನ್ನೂ ಓದಿ:‘ನಿಮ್ಮ ಕುಟುಂಬ ಮತ್ತು ನಿಕಟ ಸ್ನೇಹಿತರಿಗೆ ಸತ್ಯ ತಿಳಿದಿದೆ’: ವಿಚ್ಛೇದನ ಬಗ್ಗೆ ಸಮಂತಾ ಮಾತು

‘ನನ್ನ ಜೀವನದಲ್ಲಿ ಇಲ್ಲಿಯವರೆಗೆ ಜನರು ನನ್ನನ್ನು ಪ್ರೀತಿಸಬೇಕು ಮತ್ತು ನನ್ನನ್ನು ಪ್ರಶಂಸಿಸಬೇಕೆಂದು ನಾನು ಬಯಸುತ್ತೇನೆ. ನಾನು ಇನ್ನೂ ಏನನ್ನೂ ಹೇಳಿಲ್ಲ. ಹಾಗಾಗಿ ತನಗೆ ಅನಿಸಿದ್ದನ್ನು ನಂಬಬೇಕು. ಇದು ಅವರ ನಿರ್ಧಾರ’ ಎಂದು ಸಮಂತಾ ಹೇಳಿದ್ದಾರೆ.

ಏತನ್ಮಧ್ಯೆ, ನಾಗ ಚೈತನ್ಯ ಮತ್ತು ಶೋಭಿತಾ ಮದುವೆಯಾಗುವ ಮೊದಲು ಎರಡು ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು. ಇವರಿಬ್ಬರ ಡೇಟಿಂಗ್ ಸಮಯದಲ್ಲಿ ಅವರ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆದರೆ ಆ ಸಮಯದಲ್ಲಿ ಇಬ್ಬರೂ ತಮ್ಮ ಪ್ರೀತಿಯನ್ನು ಬಹಿರಂಗವಾಗಿ ಹೇಳಿರಲಿಲ್ಲ. ಇಬ್ಬರೂ ನಿಶ್ಚಿತಾರ್ಥದ ಫೋಟೋಗಳನ್ನು ಪೋಸ್ಟ್ ಮಾಡಿ ಮದುವೆಯ ಬಗ್ಗೆ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಡಿಸೆಂಬರ್ನಲ್ಲಿ ಇವರು ಮದುವೆ ನಡೆದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Tue, 26 November 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ