ವಿಚ್ಛೇದನದ ಬಳಿಕ ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ: ಮನದ ಮಾತು ಹಂಚಿಕೊಂಡ ನಟಿ ಸಮಂತಾ ರುತ್ ಪ್ರಭು

ವಿಚ್ಛೆದನದ ಬಳಿಕ ಸಂದರ್ಶನವೊಂದರಲ್ಲಿ ಸಮಂತಾ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ. ನಾಗಚೈತನ್ಯರಿಂದ ಬೇರೆಯಾದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ.

ವಿಚ್ಛೇದನದ ಬಳಿಕ ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ: ಮನದ ಮಾತು ಹಂಚಿಕೊಂಡ ನಟಿ ಸಮಂತಾ ರುತ್ ಪ್ರಭು
ಸಮಂತಾ
Follow us
TV9 Web
| Updated By: Pavitra Bhat Jigalemane

Updated on: Dec 07, 2021 | 12:20 PM

ತೆಲುಗು ಚಿತ್ರರಂಗದಲ್ಲಿ ತಮ್ಮ ನಟನೆಯಿಂದ ಗುರುತಿಸಿಕೊಂಡಿರುವ ಸಮಂತಾ ರುತ್ ಪ್ರಭು ಇತ್ತೀಚೆಗೆ ಪತಿ ನಾಗಚೈತನ್ಯರಿಂದ ವಿಚ್ಛೇದನ ಪಡೆದಿದ್ದಾರೆ. ವಿಚ್ಛೆದನದ ಬಳಿಕ ಸಂದರ್ಶನವೊಂದರಲ್ಲಿ ಸಮಂತಾ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ. ನಾಗಚೈತನ್ಯರಿಂದ ಬೇರೆಯಾದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಇದೇ ಮೊದಲ ಬಾರಿಗೆ ತಮ್ಮ ವಿಚ್ಛೇದನದ ನಂತರದ ಬದುಕಿನ ಕುರಿತು ಸಮಂತಾ ಹೇಳಿಕೊಂಡಿದ್ದಾರೆ. ಅಕ್ಟೋಬರ್ 2ರಂದು ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ 4 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ತಮ್ಮ ವಿಚ್ಛೇದನದ ಕುರಿತು ಸ್ಪಷ್ಟನೆ ನೀಡಿದ್ದರು.

ವಿಚ್ಚೇದನದ ಕುರಿತು ಹೇಳಿಕೆ ನೀಡುವ ಮುನ್ನ ಸಮಂತಾ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಅಕೌಂಟ್​ನಲ್ಲಿ ಸಮಂತಾ ಅಕ್ಕಿನೇನಿ ಎಂಬ ಹೆಸರಿಗೆ ಕೋಕ್​ ನೀಡಿ ಸಮಂತಾ ಎಂದಷ್ಟೇ ಇರಿಸಿಕೊಂಡಿದ್ದರು. ಇದರಿಂದ ಸಮಂತಾ ಹಾಗೂ ನಾಗಚೈತನ್ಯರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ವದಂತಿಗಳು ಹರಿದಾಡುತಿದ್ದ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ವಿಚ್ಚೇದನದ ಕುರಿತು ಘೋಷಿಸಿ ಅಭಿಮಾನಿಗಳಿಗೆ ಶಾಕ್​ ನೀಡಿದ್ದರು.

ಇದೀಗ ಫಿಲ್ಮ್​ ಫೇರ್​ ಸಂದರ್ಶನವೊಂದರಲ್ಲಿ ಸಮಂತಾ ನಾಗಚೈತನ್ಯರೊಂದಿಗೆ ಬೇರೆಯಾಗಿದ್ದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಜೀವನದಲ್ಲಿ ಕಷ್ಟದ ದಿನಗಳು ಬರುವುದು ಸಾಮಾನ್ಯ. ಅದನ್ನು ನಾವು ಧೈರ್ಯದಿಂದ ಎದುರಿಸಬೇಕು,ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ನಮಗೆ ಇರಬೇಕು. ನಾನು ನನ್ನನ್ನು ತುಂಬಾ ದುರ್ಬಲ ವ್ಯಕ್ತಿ ಎಂದು ಭಾವಿಸಿದ್ದೆ, ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ ಆದರೆ ನನ್ನನ್ನು ನಾನು ಸಮರ್ಥವಾಗಿ ನಿಭಾಯಿಸಿಕೊಂಡಿದ್ದೇನೆ. ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಭಾವಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನು ಜೀವನದಲ್ಲಿ ಬಹಳ ಮುಂದೆ ಸಾಗಬೇಕಿದೆ ಎಂದು ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ.

ಸಮಂತಾ ವಿಚ್ಛೇದನದ ಬಳಿಕ ಮತ್ತೆ ತಮ್ಮ ನಟನಾ ಪ್ರಪಂಚಕ್ಕೆ ಮರಳಿದ್ದಾರೆ. ಡಿ.6ರಂದು ಸಮಂತಾ ತಮ್ಮ ಹೊಸ ಚಿತ್ರ ಯಶೋದಾ ಚಿತ್ರೀಕರಣವನ್ನು ಪುಣೆಯಲ್ಲಿ ಆರಂಭಿಸಿದ್ದಾರೆ. ಈ ಚಿತ್ರವನ್ನು ಹರಿ ಮತ್ತು ಹರೀಶ್ ನಿರ್ದೇಶಿಲಿದ್ದು, ತೆಲುಗು, ಮಲಯಾಳಂ, ತಮಿಳು, ಕನ್ನಡ, ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಮಂತಾ ಲೇಖಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಹೊಸ ಚಿತ್ರದ ಪೋಸ್ಟರ್​ ಅನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು,  ಹೊಸ ಚಿತ್ರಕ್ಕೆ  ಆಶೀರ್ವದಿಸಿ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು: ರಾಜಸ್ತಾನಕ್ಕೆ ತೆರಳಿದ ಬಾಲಿವುಡ್​ ಜೋಡಿ ಕತ್ರಿನಾ -ವಿಕ್ಕಿ

ಡಿವೋರ್ಸ್​ ಬಳಿಕ ಸಮಂತಾ ಗುಡ್​ ನ್ಯೂಸ್​; ಇಂಗ್ಲಿಷ್​ ಸಿನಿಮಾ ನಿರ್ದೇಶಕನನ್ನು ತಬ್ಬಿಕೊಂಡ ಫೋಟೋ ವೈರಲ್​

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್