Samantha: ಭಾರತದ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂಬರ್​ 1; ಸಿನಿಮಾ ಸೋತರೂ ಕಮ್ಮಿ ಆಗಿಲ್ಲ ಖ್ಯಾತಿ

Samantha Ruth Prabhu: ಸೋಲಿನ ಬಗ್ಗೆ ಸಮಂತಾ ತಲೆ ಕೆಡಿಸಿಕೊಂಡಿಲ್ಲ. ಮುಂದಿನ ಸಿನಿಮಾಗಳತ್ತ ಅವರು ಗಮನ ಹರಿಸಿದ್ದಾರೆ. ಜನಪ್ರಿಯತೆಯ ವಿಚಾರದಲ್ಲಿ ಅವರು ಹಿಂದೆ ಬಿದ್ದಿಲ್ಲ.

Samantha: ಭಾರತದ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂಬರ್​ 1; ಸಿನಿಮಾ ಸೋತರೂ ಕಮ್ಮಿ ಆಗಿಲ್ಲ ಖ್ಯಾತಿ
ಸಮಂತಾ ರುತ್ ಪ್ರಭು

Updated on: May 03, 2023 | 5:50 PM

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಪದೇ ಪದೇ ಸುದ್ದಿ ಆಗುತ್ತಿದ್ದಾರೆ. ಅವರ ಜನಪ್ರಿಯತೆ ಹೆಚ್ಚಾಗುತ್ತಲೇ ಇದೆ. ಈ ವರ್ಷ ಅವರು ನಟಿಸಿದ ‘ಶಾಕುಂತಲಂ’ ಸಿನಿಮಾ ಬಿಡುಗಡೆ ಆಗಿ ಹೀನಾಯವಾಗಿ ಸೋತಿತು. ಹಾಗಿದ್ದರೂ ಕೂಡ ಅವರ ಖ್ಯಾತಿ ಕಡಿಮೆ ಆಗಿಲ್ಲ. ಅಭಿಮಾನಿಗಳು ಅವರ ಕೈ ಹಿಡಿದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಐಎಂಡಿಬಿ ಪ್ರಕಟಿಸಿರುವ ಭಾರತದ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ (Popular Indian Celebrities list) ಸಮಂತಾಗೆ ನಂಬರ್​ ಒನ್​ ಪಟ್ಟ ಸಿಕ್ಕಿದೆ. ಈ ವಿಷಯ ಕೇಳಿ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಪಟ್ಟಿಯಲ್ಲಿ ಬಾಲಿವುಡ್​ನ ಘಟಾನುಘಟಿ ಸೆಲೆಬ್ರಿಟಿಗಳನ್ನು ಕೂಡ ಸಮಂತಾ ಹಿಂದಿಕ್ಕಿದ್ದಾರೆ. ಅವರಿಗೆ ಎಷ್ಟು ಫ್ಯಾನ್​ ಫಾಲೋಯಿಂಗ್​ ಇದೆ ಎಂಬುದಕ್ಕೆ ಈ ಪಟ್ಟಿಯೇ ಸಾಕ್ಷಿ. ಸೋಶಿಯಲ್​ ಮೀಡಿಯಾದಲ್ಲಿ ಸಮಂತಾ (Samantha) ಅವರು ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ದಿನದಿಂದ ದಿನಕ್ಕೆ ಅವರ ಫಾಲೋವರ್ಸ್​ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.

ವೃತ್ತಿಜೀವನದಲ್ಲಿ ಸಮಂತಾ ಅವರು ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ‘ಶಾಕುಂತಲಂ’ ಸಿನಿಮಾ ಮೇಲೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ಚಿತ್ರಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಕಿಂಚಿತ್ತೂ ಲಾಭ ಆಗಿಲ್ಲ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡ ಆ ಸಿನಿಮಾಗೆ ಜನರಿಂದ ಮೆಚ್ಚುಗೆ ಸಿಕ್ಕಿಲ್ಲ. ಆ ಸೋಲಿಗೆ ಸಮಂತಾ ತಲೆ ಕೆಡಿಸಿಕೊಂಡಿಲ್ಲ. ಮುಂದಿನ ಸಿನಿಮಾಗಳತ್ತ ಅವರು ಗಮನ ಹರಿಸಿದ್ದಾರೆ.

ಇದನ್ನೂ ಓದಿ
Samantha Ruth Prabhu: ಮತ್ತೆ ಕೈ ಕೊಟ್ಟಿದೆ ಸಮಂತಾ ರುತ್​ ಪ್ರಭು ಆರೋಗ್ಯ; ಅಭಿಮಾನಿಗಳಿಗೆ ಆತಂಕ
Samantha: ಶಾಕುಂತಲಂ ಸಿನಿಮಾ ಚಿತ್ರೀಕರಣದ ಐದು ಕೆಟ್ಟ ಅನುಭವಗಳ ನೆನೆದ ಸಮಂತಾ
ಮಾಜಿ ಗಂಡನ ಕುಟುಂಬದ ಮೇಲೆ ಸಮಂತಾಗೆ ಇನ್ನೂ ಕಡಿಮೆ ಆಗಿಲ್ಲ ಪ್ರೀತಿ; ಇಲ್ಲಿದೆ ಹೊಸ ಸಾಕ್ಷಿ
Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ

ಸಮಂತಾ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಗುವುದರಲ್ಲಿ ಅನುಮಾನವೇ ಇಲ್ಲ. ಯಾಕೆಂದರೆ ಅವರೀಗ ‘ಸಿಟಾಡೆಲ್​’ ವೆಬ್​ ಸರಣಿಯ ಇಂಡಿಯನ್​ ವರ್ಷನ್​ನಲ್ಲಿ ನಟಿಸುತ್ತಿದ್ದಾರೆ. ಈ ಸೀರಿಸ್​ಗೆ ರಾಜ್​ ಮತ್ತು ಡಿಕೆ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಭರ್ಜರಿ ಸಾಹಸ ದೃಶ್ಯಗಳು ಇರಲಿವೆ. ‘ಸಿಟಾಡೆಲ್​’ ಸಲುವಾಗಿ ಸಮಂತಾ ಅವರು ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಅವರಿಗೆ ಬಾಲಿವುಡ್​ ನಟ ವರುಣ್​ ಧವನ್​ ಜೋಡಿ ಆಗಿದ್ದಾರೆ. ಈ ವೆಬ್​ ಸಿರೀಸ್​ ಬಿಡುಗಡೆ ಆದ ಬಳಿಕ ಸಮಂತಾ ಅವರು ಇನ್ನಷ್ಟು ಮಿಂಚಲಿದ್ದಾರೆ.

ಇದನ್ನೂ ಓದಿ: Samantha: ಇಂಗ್ಲೆಂಡ್​ ಜನರ ರೀತಿ ಇಂಗ್ಲಿಷ್​ ಮಾತನಾಡಲು ಹೋಗಿ ಟ್ರೋಲ್​ ಆದ ಸಮಂತಾ; ವಿಡಿಯೋ ವೈರಲ್​

ವಿಚ್ಛೇದನ ಪಡೆದ ಬಳಿಕ ಸಮಂತಾ ಅವರ ಪಾತ್ರಗಳ ಆಯ್ಕೆಯಲ್ಲಿ ತುಂಬಾ ಬದಲಾವಣೆ ಆಯಿತು. ಬೋಲ್ಡ್​ ಆಗಿ ಕಾಣಿಸಿಕೊಳ್ಳಲು ಅವರು ಹಿಂದೇಟು ಹಾಕುತ್ತಿಲ್ಲ. ‘ಪುಷ್ಪ’ ಸಿನಿಮಾದಲ್ಲಿನ ‘ಉ ಅಂಟಾವಾ ಮಾವ..’ ಹಾಡಿನಲ್ಲಿ ಹಾಟ್​ ಆಗಿ ಡ್ಯಾನ್ಸ್​ ಮಾಡಿದ ಬಳಿಕ ಅವರ ಹವಾ ಹೆಚ್ಚಾಯಿತು. ವಿಜಯ್​ ದೇವರಕೊಂಡ ಜೊತೆ ‘ಖುಷಿ’ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us