AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಹಲವು ಸಮಯದ ಬಳಿಕ ಗುಡ್ ನ್ಯೂಸ್ ಕೊಟ್ಟ ಸಮಂತಾ

ಸಮಂತಾ ಅವರ ನಿರ್ಮಾಣ ಸಂಸ್ಥೆ 'ಟ್ರಲಾಲಾ ಮೂವಿಂಗ್ ಪಿಕ್ಚರ್ಸ್' ಅಡಿಯಲ್ಲಿ ನಿರ್ಮಾಣವಾದ 'ಶುಭಂ' ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಮೇ ತಿಂಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಸಮಂತಾ ಅವರು ಹಲವಾರು ವೆಬ್ ಸೀರಿಸ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ವೃತ್ತಿಪರ ಜೀವನದಲ್ಲಿ ಏಳುಬೀಳುಗಳ ನಡುವೆಯೂ, ಸಮಂತಾ ಸಿನಿಮಾ ಮತ್ತು ವೆಬ್ ಸೀರಿಸ್ ಗಳಲ್ಲಿ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ಮನರಂಜಿಸುತ್ತಲೇ ಇದ್ದಾರೆ.

Samantha: ಹಲವು ಸಮಯದ ಬಳಿಕ ಗುಡ್ ನ್ಯೂಸ್ ಕೊಟ್ಟ ಸಮಂತಾ
ಸಮಂತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 19, 2025 | 8:06 AM

Share

ನಟಿ ಸಮಂತಾ ಅವರು ಇತ್ತೀಚೆಗೆ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ. ಅವರು ವಿಚ್ಛೇದನದ ಬಳಿಕ ಅನಾರೋಗ್ಯ ಸಮಸ್ಯೆ ಎದುರಿಸಿದರು. ಈ ಕಾರಣದಿಂದಲೇ ಅವರಿಗೆ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗಲೇ ಇಲ್ಲ. ಸಮಂತಾ (Samantha) ಅವರು ‘ಟ್ರಲಾಲಾ ಮೂವಿಂಗ್ ಪಿಕ್ಚರ್’ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದು ಗೊತ್ತೇ ಇದೆ. ಇದರ ಅಡಿ ಸಿದ್ಧವಾದ ಸಿನಿಮಾ ರಿಲೀಸ್​ಗೆ ರೆಡಿ ಆಗಿದೆ. ಬೇಸಿಗೆ ವೇಳೆಗೆ ಚಿತ್ರ ರಿಲೀಸ್ ಆಗುವ ಸಾಧ್ಯತೆ ಇದೆ.

ಸಮಂತಾ ಅವರು ‘ಟ್ರಲಾಲಾ ಮೂವಿಂಗ್ ಪಿಕ್ಚರ್ಸ್’ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಬ್ಯಾನರ್ ಅಡಿಯಲ್ಲಿ ‘ಮಾ ಉಂಟಿ ಬಂಗಾರಮ್’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದರು. ಈ ಚಿತ್ರದಲ್ಲಿ ಸಮಂತಾ ಅವರೇ ನಟಿಸಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ನಿರ್ದೇಶಕರು ಹಾಗೂ ಇತರ ಪಾತ್ರವರ್ಗದ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ. ಈ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಈಗ ಇದೇ ನಿರ್ಮಾಣ ಸಂಸ್ಥೆ ಅಡಿ ಮೂಡಿ ಬಂದ ಮತ್ತೊಂದು ಸಿನಿಮಾ ಬಿಡುಗಡೆ ಕಾಣುತ್ತಿದೆ.

ಹೌದು, ವಸಂತ್ ಮರಿನ್​ಕಂಡಿ ಮತ್ತು ಪ್ರವೀಣ್ ಒಟ್ಟಾಗಿ ನಿರ್ದೇಶಿಸಿದ ‘ಶುಭಂ’ ಸಿನಿಮಾ ರೆಡಿ ಆಗಿದೆ. ಈ ಮೊದಲು ಇಬ್ಬರೂ ‘ಸಿನಿಮಾ ಬಂಡಿ’ ಹೆಸರಿನ ಚಿತ್ರ ಮಾಡಿದ್ದರು. ಈಗ ಹೊಸ ತಂಡದೊಂದಿಗೆ ಮಾಡಿದ ‘ಶುಭಂ’ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿಕೊಂಡಿದೆ.

ಇದನ್ನೂ ಓದಿ
Image
ಐಪಿಎಲ್ ಉದ್ಘಾಟನೆಗೆ ಹಾಜರಿ ಹಾಕಲಿದೆ ಇಡೀ ಬಾಲಿವುಡ್; ಇಲ್ಲಿದೆ ಲಿಸ್ಟ್
Image
ರಾಮ್ ಚರಣ್ ಮುಂದಿನ ಚಿತ್ರದಲ್ಲಿ ನಟಿಸಲಿದ್ದಾರೆ ಎಂಎಸ್ ಧೋನಿ?
Image
‘ಅವನಿರಬೇಕಿತ್ತು’ ಹೊಸಬರ ಪ್ರಯತ್ನ, ಹೊಸ ಹಾಡು ಬಿಡುಗಡೆ
Image
ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

ಸಮಂತಾ ಅವರು ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬರು. ಈ ಸಿನಿಮಾ ಮೇ ವೇಳೆಗೆ ರಿಲೀಸ್ ಆಗುವ ಸಾಧ್ಯತೆ ಇದೆ. ಸಿನಿಮಾದ ಟ್ರೇಲರ್ ರಿಲೀಸ್ ಆದ ಬಳಿಕವೇ ಈ ಚಿತ್ರ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎಂಬ ಮಾಹಿತಿ ಲಭ್ಯವಾಗಲಿದೆ.

ಇದನ್ನೂ ಓದಿ: ಬಿಡುಗಡೆಗೆ ರೆಡಿಯಾಗಿದೆ ಸಮಂತಾ ನಿರ್ಮಾಣದ ಮೊದಲ ಸಿನಿಮಾ

ಸಮಂತಾ ಅವರು ಸಾಲು ಸಾಲು ವೆಬ್ ಸೀರಿಸ್​ಗಳನ್ನು ಮಾಡುತ್ತಿದ್ದಾರೆ. ಅವರು ಈ ಮೊದಲು ‘ಫ್ಯಾಮಿಲಿಮ್ಯಾನ್ 2’ ಸೀರಿಸ್​ನಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ‘ಸಿಟಾಡೆಲ್: ಹನಿ ಬನಿ’ ಸೀರಿಸ್ ಮಾಡಿದರು. ಈಗ ಅವರು ಮತ್ತೊಂದು ವೆಬ್ ಸೀರಿಸ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಶೂಟ್ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.