AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನನ್ನ ಸಿಕ್ಸ್​ ಪ್ಯಾಕ್’; ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ ಸಮಂತಾ

ನಟಿ ಸಮಂತಾ ರುತ್ ಪ್ರಭು ತಮ್ಮ ಬೇಬಿ ಬಂಪ್ ಸಿಕ್ಸ್-ಪ್ಯಾಕ್ ಫೋಟೋವನ್ನು ಹಂಚಿಕೊಂಡು ವೈರಲ್ ಆಗಿದ್ದಾರೆ. ಇತ್ತೀಚೆಗೆ ತಮ್ಮ ಗರ್ಭಧಾರಣೆಯನ್ನು ಅಧಿಕೃತವಾಗಿ ಘೋಷಿಸಿದ ಸಮಂತಾ, ಸದ್ಯಕ್ಕೆ ಚಿತ್ರರಂಗದಿಂದ ವಿರಾಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು ಜೊತೆಗಿನ ಮದುವೆ ಮತ್ತು 'ಮಾ ಇಂಟಿ ಬಂಗಾರಂ' ಚಿತ್ರದ ಯಶಸ್ಸಿನ ನಂತರ, ಸಮಂತಾ ತಾಯ್ತನದ ಖುಷಿಯಲ್ಲಿದ್ದಾರೆ.

‘ಇದು ನನ್ನ ಸಿಕ್ಸ್​ ಪ್ಯಾಕ್’; ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ ಸಮಂತಾ
ಸಮಂತಾ
ರಾಜೇಶ್ ದುಗ್ಗುಮನೆ
|

Updated on:Jul 01, 2026 | 6:23 PM

Share

ಮುಖ್ಯಾಂಶಗಳು

  • ಇನ್‌ಸ್ಟಾಗ್ರಾಮ್‌ನಲ್ಲಿ ಬೇಬಿ ಬಂಪ್ ಝಲಕ್ ತೋರಿಸಿ ಸಿಕ್ಸ್ ಪ್ಯಾಕ್ ಎಂದು ತಮಾಷೆ ಮಾಡಿದ ಸಮಂತಾ
  • ಚಿತ್ರರಂಗಕ್ಕೆ ಸಣ್ಣ ಬ್ರೇಕ್ ಘೋಷಿಸಿದ ನಟಿ: ಹೆರಿಗೆ ರಜೆಯ ಬಳಿಕ ಮತ್ತೊಂದು ಸಿನಿಮಾ ಧಮಾಕಾ
  • ಮದುವೆ ಸಂಭ್ರಮ ಹಾಗೂ ಬಾಕ್ಸ್ ಆಫೀಸ್‌ನಲ್ಲಿ 80 ಕೋಟಿ ದಾಟಿದ ಚಿತ್ರದ ಯಶಸ್ಸಿನ ನಡುವೆ ತಾಯ್ತನದ ಸುಖ

ದಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ ರುತ್ ಪ್ರಭು ಅವರು (Samantha) ಶೀಘ್ರದಲ್ಲೇ ತಾಯಿಯಾಗಲಿದ್ದಾರೆ. ಇತ್ತೀಚೆಗೆ ಅವರು ಈ ವಿಷಯ ಘೋಷಣೆ ಮಾಡಿದ್ದರು. ಇದು ಅವರ ಅಭಿಮಾನಿಗಳಲ್ಲಿ ಖುಷಿ ತಂದಿತ್ತು. ಈಗ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಸಮಂತಾ ತಮ್ಮ ಬೇಬಿ ಬಂಪ್ ಪ್ರದರ್ಶಿಸಿದ್ದಾರೆ. ಜೊತೆಗೆ ಕ್ಯೂಟ್ ಕ್ಯಾಪ್ಶನ್ ಬರೆದುಕೊಂಡಿದ್ದಾರೆ.

ಪ್ರೆಗ್ನೆನ್ಸಿ ಘೋಷಣೆ

ಸಮಂತಾ ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ‘ಮಾ ಇಂಟಿ ಬಂಗಾರಂ’ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಪ್ರೆಗ್ನೆನ್ಸಿಯನ್ನು ಅಧಿಕೃತವಾಗಿ ಘೋಷಿಸಿದ್ದರು. ತಮ್ಮ ಆರೋಗ್ಯದ ದೃಷ್ಟಿಯಿಂದ ಸದ್ಯದಲ್ಲೇ ಚಿತ್ರರಂಗದಿಂದ ಸಣ್ಣ ಬ್ರೇಕ್ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ. ಹೆರಿಗೆ ರಜೆಯ ಮತ್ತೆ ಚಿತ್ರರಂಗಕ್ಕೆ ಮರಳುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

ಹೊಸ ಫೋಟೋ

ಇನ್​​​ಸ್ಟಾಗ್ರಾಮ್ ಸ್ಟೇಟಸ್​​ನಲ್ಲಿ ಸಮಂತಾ ಅವರು ತಮ್ಮ ಹೊಟ್ಟೆಯ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್​ಗೆ ‘ನನ್ನ ಸಿಕ್ಸ್ ಪ್ಯಾಕ್’ ಎಂದು ಬರೆದುಕೊಂಡಿದ್ದಾರೆ. ‘ನಿನ್ನನ್ನು ನೋಡುವ ಸಮಯಕ್ಕಾಗಿ ನಾನು ಕಾಯುತ್ತಿದ್ದೇನೆ’ ಎಂಬರ್ಥ ಬರುವ ರೀತಿಯಲ್ಲಿ ಸಮಂತಾ ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ರಾಜ್ ನಿಡಿಮೋರು ಜೊತೆ ಮದುವೆ

ಸಮಂತಾ ಅವರು ಕಳೆದ ವರ್ಷ ಡಿಸೆಂಬರ್ 1ರಂದು ಪ್ರಸಿದ್ಧ ನಿರ್ದೇಶಕ ರಾಜ್ ನಿಡಿಮೋರು ಅವರನ್ನು ವಿವಾಹವಾದರು. ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಇವರ ಮದುವೆ ಅತ್ಯಂತ ಸರಳವಾಗಿ ನಡೆದಿತ್ತು. ವೆಬ್ ಸೀರಿಸ್ ಚಿತ್ರೀಕರಣದ ಸಮಯದಲ್ಲಿ ಇವರಿಬ್ಬರ ನಡುವೆ ಪ್ರೀತಿ ಚಿಗುರಿತ್ತು.

ಇದನ್ನೂ ಓದಿ: ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್

ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ

ಸಮಂತಾ ನಟನೆಯ ಇತ್ತೀಚಿನ ತೆಲುಗು ಸಿನಿಮಾ ‘ಮಾ ಇಂಟಿ ಬಂಗಾರಂ’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ. ನಂದಿನಿ ರೆಡ್ಡಿ ನಿರ್ದೇಶನದ ಈ ಸಿನಿಮಾ ಈಗಾಗಲೇ ಸುಮಾರು 80 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಮೂಲಕ ಸಮಂತಾ ತೆಲುಗು ಚಿತ್ರರಂಗಕ್ಕೆ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಚಿತ್ರದಲ್ಲಿ ದಿಗಂತ್ ಮತ್ತು ಗುಲ್ಶನ್ ದೇವಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:24 pm, Wed, 1 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ