ವಿಶೇಷ ಆಮ್ಲಜನಕ ಚಿಕಿತ್ಸೆ ಪಡೆಯುತ್ತಿರುವ ಸಮಂತಾ: ಏನಿದರ ವಿಶೇಷತೆ?

Samantha: ನಟಿ ಸಮಂತಾ ತಾವು ಪಡೆಯುತ್ತಿರುವ ವಿಶೇಷ ಆಮ್ಲಜನಕ ಚಿಕಿತ್ಸೆ ಕುರಿತಾದ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ವಿಶೇಷ ಆಮ್ಲಜನಕ ಚಿಕಿತ್ಸೆ ಪಡೆಯುತ್ತಿರುವ ಸಮಂತಾ: ಏನಿದರ ವಿಶೇಷತೆ?
ಸಮಂತಾ
Follow us
ಮಂಜುನಾಥ ಸಿ.
|

Updated on: Jul 09, 2023 | 11:01 PM

ನಟಿ ಸಮಂತಾ (Samantha) ಸತತವಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಲೇ ಇದ್ದಾರೆ. ವಿಚ್ಛೇದನದ ಬಳಿಕ ಖಿನ್ನತೆಗೆ ಜಾರಿದ್ದ ಸಮಂತಾ ಅದಾದ ಬಳಿಕ ಭಿನ್ನ ಭಿನ್ನ ಆರೋಗ್ಯ (Health) ಸಮಸ್ಯೆಗಳಿಗೆ ಒಳಗಾಗುತ್ತಲೇ ಇದ್ದರು. ಚರ್ಮದ ಸಮಸ್ಯೆ, ಶ್ವಾಸಕೋಶದ ಸಮಸ್ಯೆ ಹೀಗೆ ಒಂದರ ಹಿಂದೊಂದು ಸಮಸ್ಯೆಗಳು ಸಮಂತಾರನ್ನು ಕಾಡುತ್ತಲೇ ಇದ್ದವು. ರೋಗಗಳಿಂದ ದೂರವಾಗಲೆಂದು ಹೊಸ ಮಾದರಿಯ ಥೆರಪಿಯೊಂದನ್ನು ಸಮಂತಾ ಮಾಡಿಸಿಕೊಳ್ಳುತ್ತಿದ್ದಾರೆ. ಇದು ಆಮ್ಲಜನಕದ ಥೆರಪಿಯಾಗಿದ್ದು, ಥೆರಪಿಯ ಚಿತ್ರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಎಚ್​ಬಿಓಟಿ ಹೆಸರಿನ ಚಿಕತ್ಸೆಯನ್ನು ಸಮಂತಾ ಪಡೆದುಕೊಳ್ಳುತ್ತಿದ್ದಾರೆ. ಎಚ್​ಬಿಓಟಿ ಎಂದರೆ ಹೈಪರ್​ಬ್ಯಾರಿಕ್ ಆಕ್ಸಿಜನ್ ಥೆರಪಿ ಎಂದರ್ಥ. ಈ ಚಿಕಿತ್ಸಾ ವಿಧಾನದಲ್ಲಿ ವ್ಯಕ್ತಿಗೆ ಪ್ರತ್ಯೇಕವಾಗಿ ಶುದ್ಧ ಆಮ್ಲಜನಕವನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನ ವೇಗದಲ್ಲಿ ನೀಡಲಾಗುತ್ತದೆ. ಈ ಥೆರಪಿ ಮಾಡಿಸಲು ವಿಶೇಷವಾದ ಕೋಣೆ ಅಥವಾ ಚೇಂಬರ್​ಗಳನ್ನು ನಿರ್ಮಿಸಿ ಅದರಲ್ಲಿ ಚಿಕಿತ್ಸೆ ಪಡೆಯುವವರನ್ನು ಕೂರಿಸಿ ಅಥವಾ ಮಲಗಿಸಿ ವೇಗವಾಗಿ ಶುದ್ಧ ಆಮ್ಲಜನಕವನ್ನು ಅವರ ದೇಹಕ್ಕೆ ಹರಿಸಲಾಗುತ್ತದೆ.

ಈ ರೀತಿಯಾಗಿ ಮಾಡುವುದರಿಂದ ಶ್ವಾಸಕೋಶಗಳು ಹೆಚ್ಚು ಆಮ್ಲಜನಕವನ್ನು ಹೀರಿಕೊಳ್ಳುತ್ತವೆ ಹಾಗೂ ರಕ್ತದಲ್ಲಿಯೂ ಆಮ್ಲಜನಕದ ಪ್ರಮಾಣ ಹೆಚ್ಚಾಗುತ್ತದೆ. ಚರ್ಮವು ಶುಷ್ಕವಾಗಿ ಬಿಳಿಚಿಕೊಳ್ಳುವುದರಿಂದ ರಕ್ಷಿಸುತ್ತದೆ, ರಕ್ತದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಶ್ವಾಸಕೋಶದ ಸೋಂಕುಗಳು ನಿವಾರಣೆಯಾಗುತ್ತದೆ. ಗಾಯಗಳು, ನೋವುಗಳು ಬೇಗನೆ ಮಾಯಲು, ವಾಸಿಯಾಗಲು ಪ್ರಾರಂಭವಾಗುತ್ತವೆ.

ಇದನ್ನೂ ಓದಿ:Samantha: ಸಮಂತಾ ಅನಾರೋಗ್ಯದ ಬಗ್ಗೆ ಮತ್ತೆ ಹಬ್ಬಿದೆ ಸುದ್ದಿ; 6 ತಿಂಗಳು ಅಮೆರಿಕದಲ್ಲಿ ಚಿಕಿತ್ಸೆ?

ಮತ್ತೊಂದು ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ಕಳೆದ ಆರು ತಿಂಗಳು ನನ್ನ ಪಾಲಿಗೆ ಅತ್ಯಂತ ಕಠಿಣವಾದ ಹಾಗೂ ಶ್ರಮದಾಯಕವಾದ ಆರು ತಿಂಗಳಾಗಿದ್ದವು. ಕೊನೆಗೂ ಅದು ಅಂತ್ಯವಾಗಿದೆ ಎಂದು ಬರೆದುಕೊಂಡಿದ್ದಾರೆ. ಅನಾರೋಗ್ಯ ಇನ್ನಿತರೆ ಕಾರಣಗಳಿಗೆ ಸಮಂತಾರ ಶೂಟಿಂಗ್ ಶೆಡ್ಯೂಲ್​ನಲ್ಲಿ ವ್ಯತ್ಯಾಸವಾಗಿ ಒಪ್ಪಿಕೊಂಡಿದ್ದ ಸಿನಿಮಾ ಹಾಗೂ ವೆಬ್ ಸರಣಿಯನ್ನು ಬೇಗನೆ ಮುಗಿಸಿಕೊಡುವ ಒತ್ತಡ ಸಮಂತಾ ಮೇಲಿತ್ತು. ಹಾಗಾಗಿ ಸತತ ಪ್ರಯಾಣ, ಹಗಲು ರಾತ್ರಿ ಚಿತ್ರೀಕರಣದಲ್ಲಿ ಸಮಂತಾ ಭಾಗಿಯಾಗಿದ್ದರು. ಸಿನಿಮಾ ಪ್ರಚಾರಗಳಲ್ಲಿಯೂ ಭಾಗಿಯಾಗಿದ್ದರು, ಇದರ ನಡುವೆ ಅನಾರೋಗ್ಯವೂ ಸಮಂತಾರನ್ನು ಕಾಡಿತ್ತು. ಹಾಗಾಗಿ ಕಳೆದ ಆರು ತಿಂಗಳು ಬಹಳ ಕಷ್ಟಕರವಾಗಿತ್ತು ಎಂದು ಸಮಂತಾ ಹೇಳಿದ್ದಾರೆ.

ಸಮಂತಾ ಪ್ರಸ್ತುತ ಹಲವು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಜೊತೆಗೆ ನಟಿಸಿರುವ ಖುಷಿ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅದರ ಜೊತೆಗೆ ವರುಣ್ ಧವನ್ ಜೊತೆಗೆ ಹಿಂದಿ ಸಿಟಾಡೆಲ್ ವೆಬ್ ಸರಣಿಯಲ್ಲಿ ಸಮಂತಾ ನಟಿಸಿದ್ದು ಅದೂ ಸಹ ಶೀಘ್ರವೇ ತೆರೆಗೆ ಬರಲಿದೆ. ಅದರ ಬಳಿಕ ಬಾಲಿವುಡ್​ನ ಹೊಸ ಸಿನಿಮಾದಲ್ಲಿ ಸಮಂತಾ ನಟಿಸಲಿದ್ದಾರೆ. ಅದರ ಬಳಿಕ ಇಂಗ್ಲೀಷ್​ನ ಅರೇಂಜ್​ಮೆಂಟ್ ಆಫ್ ಲವ್ಸ್ ಸಿನಿಮಾದಲ್ಲಿಯೂ ಸಮಂತಾ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!