AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುನ್ನ ತಿರುಪತಿಗೆ ಸಮಂತಾ ಭೇಟಿ; ಸಂಪ್ರದಾಯ ಮರೆಯದ ನಟಿ

ನಟಿ ಸಮಂತಾ ರುತ್ ಪ್ರಭು ಅಭಿನಯದ 'ಮಾ ಇಂಟಿ ಬಂಗಾರಂ' ತೆಲುಗು ಚಿತ್ರ ಇಂದು ಬಿಡುಗಡೆಯಾಗಿದೆ. ಸಿನಿಮಾ ರಿಲೀಸ್‌ಗೂ ಮುನ್ನ ಸಮಂತಾ ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು. ಸಾಂಪ್ರದಾಯಿಕ ಉಡುಗೆಯಲ್ಲಿ ಅವರ ಫೋಟೋಗಳು ವೈರಲ್ ಆಗಿವೆ. ವಿಶೇಷವೆಂದರೆ, ಸಿನಿಮಾ ಬಿಡುಗಡೆಗೂ ಮುನ್ನವೇ ಲಾಭ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಓಪನಿಂಗ್ ಪಡೆಯುವ ನಿರೀಕ್ಷೆ ಇದೆ.

'ಮಾ ಇಂಟಿ ಬಂಗಾರಂ' ಬಿಡುಗಡೆ ಮುನ್ನ ತಿರುಪತಿಗೆ ಸಮಂತಾ ಭೇಟಿ; ಸಂಪ್ರದಾಯ ಮರೆಯದ ನಟಿ
ಸಮಂತಾ Image Credit source: Sam cults
ರಾಜೇಶ್ ದುಗ್ಗುಮನೆ
|

Updated on: Jun 19, 2026 | 7:31 AM

Share

ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅಭಿನಯದ, ಬಹುನಿರೀಕ್ಷಿತ ಆ್ಯಕ್ಷನ್-ಕಾಮಿಡಿ ತೆಲುಗು ಚಿತ್ರ ‘ಮಾ ಇಂಟಿ ಬಂಗಾರಂ’ ಇಂದು (ಜೂನ್ 19) ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಿನಿಮಾ ರಿಲೀಸ್ ಆಗುವ ಮುನ್ನ ಸಮಂತಾ ಅವರು ಚಿತ್ರದ ನಿರ್ದೇಶಕಿ ಬಿ.ವಿ. ನಂದಿನಿ ರೆಡ್ಡಿ ಮತ್ತು ಪತಿ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ತಿರುಪತಿಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.

‘ಮಾ ಇಂಟಿ ಬಂಗಾರಂ’ ತಂಡದವರು ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡ ಈ ಜೋಡಿಯ ಫೋಟೋಗಳು ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಪ್ರತಿ ಸಿನಿಮಾ ಸಂದರ್ಭದಲ್ಲಿ ಅಥವಾ ಯಾವುದೇ ಒಳ್ಳೆಯ ಕೆಲಸ ಆಗುವಾಗ ಸಮಂತಾ ತಿರುಪತಿಗೆ ಭೇಟಿ ನೀಡುತ್ತಾರೆ. ಅವರು ಇತ್ತೀಚೆಗೆ ಆಧ್ಯಾತ್ಮದ ಕಡೆ ಹೆಚ್ಚು ಒಲಿದಿದ್ದಾರೆ. ರಾಜ್ ನಿಡಿಮೋರು ಜೊತೆ ಅವರು ಮದುವೆ ಆಗುವಾಗ ಆಯ್ಕೆ ಮಾಡಿಕೊಂಡಿದ್ದು ಸದ್ಗುರು ಆಶ್ರಮ ಅನ್ನೋದು ವಿಶೇಷ. ಈಗ ಅವರು ತಮ್ಮ ಸಿನಿಮಾ ರಿಲೀಸ್​​ಗೂ ಮೊದಲು ಸಂಪ್ರದಾಯವನ್ನು ಪೂರ್ಣಗೊಳಿಸಿದ್ದಾರೆ.

‘ಮಾ ಇಂಟಿ ಬಂಗಾರಂ’ ಚಿತ್ರದ ಕುರಿತು ಮಾತನಾಡುತ್ತಾ ಸಮಂತಾ ಮತ್ತೊಂದು ಸ್ವಾರಸ್ಯಕರ ಸಂಗತಿಯನ್ನು ಬಿಚ್ಚಿಟ್ಟಿದ್ದರು. ಈ ಚಿತ್ರದ ಕಥೆಯನ್ನು ನಿರ್ದೇಶಕಿ ನಂದಿನಿ ರೆಡ್ಡಿ ಮೊದಲು ಬರೆದಿದ್ದು ನಟಿ ಸಾಯಿ ಪಲ್ಲವಿ ಅವರಿಗಾಗಿ ಅಂತೆ. ಆದರೆ ಡೇಟ್ಸ್ ಕೊರತೆಯಿಂದಾಗಿ ಸಾಯಿ ಪಲ್ಲವಿ ಈ ಚಿತ್ರದಿಂದ ಹೊರಗುಳಿಯಬೇಕಾಯಿತು. ಆ ಬಳಿಕ ಕಥೆಯಲ್ಲಿ ಬದಲಾವಣೆ ಮಾಡಿ ಸಮಂತಾ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಲಾಯಿತು.

ಇದನ್ನೂ ಓದಿ: ವೇದಿಕೆ ಮೇಲೆ ಸಮಂತಾಗೆ ‘ಐ ಲವ್ ಯೂ’ ಹೇಳಲು ನಿರಾಕರಿಸಿದ ಪತಿ ರಾಜ್ ನಿಡಿಮೋರು

ಬಿಡುಗಡೆಗೂ ಮುನ್ನವೇ ಲಾಭದಲ್ಲಿ ಸಿನಿಮಾ

ಥಿಯೇಟ್ರಿಕಲ್ ಹಾಗೂ ನಾನ್-ಥಿಯೇಟ್ರಿಕಲ್ ಹಕ್ಕುಗಳಿಗಾಗಿ ಭಾರಿ ಪೈಪೋಟಿ ನಡೆದ ಪರಿಣಾಮ, ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆಗೂ ಮುನ್ನವೇ ತನ್ನ ಸಂಪೂರ್ಣ ನಿರ್ಮಾಣ ವೆಚ್ಚವನ್ನು ಮರಳಿ ಪಡೆದಿದೆ. ಸದ್ಯ ಚಿತ್ರಮಂದಿರಗಳಲ್ಲಿ ಉತ್ತಮ ಓಪನಿಂಗ್ ಪಡೆದುಕೊಂಡಿರುವ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?