AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ ಧೂಲಿಪಾಲಾಗೆ ಟಾಂಗ್ ಕೊಟ್ಟರಾ ನಟಿ ಸಮಂತಾ? ವಿಡಿಯೋ ವೈರಲ್

ನಟಿ ಸಮಂತಾ ರುತ್ ಪ್ರಭು ಗರ್ಭಿಣಿ ಆಗಿದ್ದು, ಸಂತೋಷದಲ್ಲಿದ್ದಾರೆ. ಇತ್ತೀಚೆಗೆ ಅವರು ನೀಡಿದ ಸಂಬಂಧಗಳ ಕುರಿತ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶೋಭಿತಾ ಧೂಲಿಪಾಲಾರ ಹೇಳಿಕೆಗೆ ಇದು ಪರೋಕ್ಷ ಉತ್ತರ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ‘ಮಹಿಳೆಯರು ತಮ್ಮ ಮೇಲೆ ನಂಬಿಕೆ ಇಡಬೇಕು, ಮತ್ತೊಬ್ಬರ ಬರುವಿಕೆಗಾಗಿ ಕಾಯಬಾರದು’ ಎಂಬ ಸಮಂತಾ ಸಂದೇಶವು ಸ್ವಾವಲಂಬನೆಯ ಮಹತ್ವ ಸಾರಿದೆ.

ಶೋಭಿತಾ ಧೂಲಿಪಾಲಾಗೆ ಟಾಂಗ್ ಕೊಟ್ಟರಾ ನಟಿ ಸಮಂತಾ? ವಿಡಿಯೋ ವೈರಲ್
ಶೋಭಿತಾ-ನಾಗ ಚೈತನ್ಯ-ಸಮಂತಾ
ರಾಜೇಶ್ ಹೆಗಡೆ ದುಗ್ಗುಮನೆ
|

Updated on:Jun 26, 2026 | 7:51 AM

Share

ಮುಖ್ಯಾಂಶಗಳು

  • ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಯ್ತು ಸಮಂತಾ ಅವರ ಸಂಬಂಧಗಳ ಕುರಿತ ಹೇಳಿಕೆ
  • ಸಮಂತಾ vs ಶೋಭಿತಾ: 'ಪರಿಪೂರ್ಣತೆ' ಕುರಿತ ವಿಭಿನ್ನ ದೃಷ್ಟಿಕೋನಗಳು
  • ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ ಚರ್ಚೆ

ನಟಿ ಸಮಂತಾ ರುತ್ ಪ್ರಭು (Samantha) ಈಗ ತಾಯಿ ಆಗುವ ಸಂಭ್ರಮದಲಿದ್ದಾರೆ. ಅವರಿಗೆ ಯಾರಾದರೂ ಏನಾದರೂ ಹೇಳಿದರೆ ಅದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಕೊರಗುವವರು ಅವರು ಅಲ್ಲವೇ ಅಲ್ಲ. ಈಗ ಅವರು ಇತ್ತೀಚೆಗೆ ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅವರು ಪರೋಕ್ಷವಾಗಿ ನಟಿ ಶೋಭಿತಾ ಧೂಲಿಪಾಲಾಗೆ ತಿರುಗೇಟು ನೀಡಿದ್ದಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ತಮ್ಮ ‘ಮಾ ಇಂಟಿ ಬಂಗಾರಂ’ ಚಿತ್ರದ ಸಕ್ಸಸ್​ ಮೀಟ್​​ನಲ್ಲಿ ಮಾತನಾಡಿದ ಸಮಂತಾ, ‘ಕೆಲವೊಮ್ಮೆ ಸಂಬಂಧಗಳು ತುಂಬಾ ಜಟಿಲವಾಗಿರುತ್ತವೆ. ಅವು ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ಒಂದು ಸಂಬಂಧ ಚೆನ್ನಾಗಿರಲು ಇಬ್ಬರ ಶ್ರಮವೂ ಬೇಕಾಗುತ್ತದೆ’ ಎಂದು ಸಮಂತಾ ಹೇಳಿದ್ದಾರೆ.

‘ಮಹಿಳೆಯರು ಮುಖ್ಯವಾಗಿ ತಮ್ಮ ಮೇಲೆ ತಮಗೆ ನಂಬಿಕೆ ಇಟ್ಟುಕೊಳ್ಳಬೇಕು. ನಿಮ್ಮನ್ನು ಪೂರ್ಣಗೊಳಿಸಲು ಇನ್ನೊಬ್ಬರು ಬೇಕು ಎಂದು ಕಾಯಬಾರದು. ಹಾಗೆ ಕಾಯುತ್ತಾ ಕೂತರೆ ಎದುರಿಗಿರುವವರ ಮೇಲೆ ನಿರೀಕ್ಷೆಗಳು ಹೆಚ್ಚಾಗುತ್ತವೆ. ಅದು ಖಂಡಿತಾ ಸರಿಯಲ್ಲ’ ಎಂದು ಸಮಂತಾ ಹೇಳಿದ್ದಾರೆ

ಸಮಂತಾ ಮಾತನಾಡಿದ್ದಕ್ಕೂ, ಶೋಭಿತಾಗೂ ಏನು ಸಂಬಂಧ ಅಂದುಕೊಳ್ಳುತ್ತಿದ್ದೀರಾ? ಖಂಡಿತ ಇದೆ. ನಾಗ ಚೈತನ್ಯ ಮತ್ತು ಶೋಭಿತಾ ಅವರ ಮದುವೆಯ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗಿತ್ತು. ಆ ವಿಡಿಯೋದಲ್ಲಿ ಶೋಭಿತಾ ಒಂದು ಮಾತನ್ನು ಹೇಳಿದ್ದರು. ‘ಒಬ್ಬ ವ್ಯಕ್ತಿ ಅಪೂರ್ಣವಾಗಿರುತ್ತಾನೆ. ಇನ್ನೊಬ್ಬರು ಬಂದು ಆ ಶೂನ್ಯವನ್ನು ತುಂಬುತ್ತಾರೆ ಎಂದು ನಾನು ನಂಬುತ್ತೇನೆ. ಅವರ ಅನುಪಸ್ಥಿತಿಯಲ್ಲಿ ನಾನು ಪರಿಪೂರ್ಣವಾಗಿ ಇರಲು ಸಾಧ್ಯವಿಲ್ಲ’ ಎಂದು ಶೋಭಿತಾ ಹೇಳಿದ್ದರು. ಸಮಂತಾ ಈಗ ಇದಕ್ಕೆ ತದ್ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಮಂತಾ ಮೇಲೆ ವೈಯಕ್ತಿಕ ದಾಳಿ ಮಾಡಿದವರಿಗೆ ಕಾಲವೇ ಕೊಟ್ಟಿತು ತಕ್ಕ ಉತ್ತರ

ನಾಗ ಚೈತನ್ಯ ಮತ್ತು ಸಮಂತಾ ಹಿಂದೆ ಮದುವೆಯಾಗಿದ್ದರು. ಆದರೆ ನಾಲ್ಕು ವರ್ಷಗಳ ದಾಂಪತ್ಯದ ನಂತರ 2021ರಲ್ಲಿ ಇವರು ಬೇರ್ಪಟ್ಟರು. ನಂತರ ನಾಗ ಚೈತನ್ಯ ಅವರು ಶೋಭಿತಾ ಅವರನ್ನು ವಿವಾಹವಾದರು. ಮತ್ತೊಂದೆಡೆ ಸಮಂತಾ ಕೂಡ ತಮ್ಮ ಜೀವನದಲ್ಲಿ ಮೂವ್ ಆನ್ ಆಗಿದ್ದಾರೆ. ಅವರು ಡಿಸೆಂಬರ್ 2025 ರಲ್ಲಿ ನಿರ್ದೇಶಕ ರಾಜ್ ನಿಡಿಮೋರು ಅವರನ್ನು ವಿವಾಹವಾಗಿದ್ದಾರೆ. ಈ ಜೋಡಿ ಈಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Fri, 26 June 26

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು