AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್‌ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ

ಸಮಂತಾ ರುತ್ ಪ್ರಭು ಅವರ 'ಮಾ ಇಂಟಿ ಬಂಗಾರಂ' ಸಿನಿಮಾ ಜೂನ್ 19ರಂದು ತೆರೆಗೆ ಬರಲಿದೆ. ನಿರ್ದೇಶಕಿ ನಂದಿನಿ ರೆಡ್ಡಿ ಇದು ಸೂಪರ್‌ಸ್ಟಾರ್ ರಜನಿಕಾಂತ್ ಅವರ 'ಬಾಷಾ' ಚಿತ್ರದಿಂದ ಸ್ಪೂರ್ತಿ ಪಡೆದಿದೆ ಎಂದು ಹೇಳಿದ್ದಾರೆ. 'ಬಾಷಾ' ಕಥೆಯ ಟೆಂಪ್ಲೇಟ್‌ಗೆ ಮಹಿಳಾ ಪಾತ್ರವನ್ನು ಸೇರಿಸಿ ಹೊಸ ಟ್ವಿಸ್ಟ್ ನೀಡಲಾಗಿದೆ. ಸಾಯಿ ಪಲ್ಲವಿ ಬದಲಿಗೆ ಸಮಂತಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ದಿಗಂತ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.

ರಜನಿಕಾಂತ್‌ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ
ಸಮಂತಾ-ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Jun 13, 2026 | 8:53 AM

Share

ಟಾಲಿವುಡ್ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅಭಿನಯದ ಮುಂಬರುವ ಆ್ಯಕ್ಷನ್ ಕಾಮಿಡಿ ಸಿನಿಮಾ ‘ಮಾ ಇಂಟಿ ಬಂಗಾರಂ’ ಸದ್ಯ ಭಾರಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ಕನ್ನಡದ ಹೀರೋ ದಿಗಂತ್ ಕೂಡ ನಟಿಸಿದ್ದಾರೆ. ಇದರ ನಡುವೆ ಚಿತ್ರದ ಕಥೆಯ ಬಗ್ಗೆ ಪ್ರಮುಖ ರಹಸ್ಯವೊಂದನ್ನು ನಿರ್ದೇಶಕಿ ನಂದಿನಿ ರೆಡ್ಡಿ ಬಿಚ್ಚಿಟ್ಟಿದ್ದಾರೆ. ಈ ಚಿತ್ರದ ಕಥೆಯು ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ‘ಬಾಷಾ’ ಸಿನಿಮಾದಿಂದ ಸ್ಫೂರ್ತಿ ಪಡೆದಿದೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮವೊಂದರ ಜೊತೆ ಮಾತನಾಡಿರುವ ನಿರ್ದೇಶಕಿ ನಂದಿನಿ ರೆಡ್ಡಿ, ‘ಮಾ ಇಂಟಿ ಬಂಗಾರಂ ಸಿನಿಮಾ ಬಾಷಾ ರೀತಿಯ ಕಥೆಯನ್ನು ಹೊಂದಿದೆ. ಬಾಷಾ ಚಿತ್ರದಲ್ಲಿ ನಾಯಕನಿಗೆ ಒಂದು ಫ್ಲ್ಯಾಶ್‌ಬ್ಯಾಕ್ (ರಹಸ್ಯ ಹಿನ್ನೆಲೆ) ಇರುವಂತೆ, ಇಲ್ಲೂ ಕೂಡ ಮುಖ್ಯ ಪಾತ್ರಕ್ಕೆ ಒಂದು ದೊಡ್ಡ ಹಿನ್ನೆಲೆ ಇರುತ್ತದೆ. ಆದರೆ, ನಾವು ಆ ಟೆಂಪ್ಲೇಟ್‌ಗೆ ಸಣ್ಣದೊಂದು ಟ್ವಿಸ್ಟ್ ಕೊಟ್ಟಿದ್ದೇವೆ. ಓರ್ವ ಮಹಿಳೆ ಆ ಜಾಗದಲ್ಲಿದ್ದರೆ ಕಥೆ ಹೇಗೆ ಸಾಗುತ್ತದೆ ಎಂಬುದನ್ನು ಕೌತುಕವಾಗಿ ತೋರಿಸಿದ್ದೇವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾಯಿ ಪಲ್ಲವಿ ಮಾಡಬೇಕಿದ್ದ ಪಾತ್ರ ಸಮಂತಾ ಪಾಲಾಗಿದ್ದು ಹೇಗೆ?

ಇತ್ತೀಚೆಗೆ ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡು ಆಸಕ್ತಿದಾಯಕ ವಿಷಯವೊಂದನ್ನು ಹಂಚಿಕೊಂಡಿದ್ದರು. ನಿರ್ದೇಶಕಿ ನಂದಿನಿ ರೆಡ್ಡಿ ಅವರು ಮೊದಲು ಈ ಚಿತ್ರದ ಕಥೆಯನ್ನು ಸಾಯಿ ಪಲ್ಲವಿ ಮನಸ್ಸಿನಲ್ಲಿಟ್ಟುಕೊಂಡು ಬರೆದಿದ್ದರಂತೆ. ಆದರೆ, ಸಾಯಿ ಪಲ್ಲವಿ ಬೇರೆ ಸಿನಿಮಾಗಳ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದರಿಂದ ಈ ಚಿತ್ರ ಮಾಡಲು ಸಾಧ್ಯವಾಗಲಿಲ್ಲ. ಆ ಬಳಿಕ ಚಿತ್ರಕಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಸಮಂತಾ ಅವರಿಗೆ ಸೂಟ್ ಆಗುವಂತೆ ಸಿದ್ಧಪಡಿಸಲಾಯಿತಂತೆ.

ಇದನ್ನೂ ಓದಿ: ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್ 

ಕನ್ನಡದವರಾದ ನಟ ದಿಗಂತ್ , ಗುಲ್ಶನ್ ದೇವಯ್ಯ ನಟಿಸಿದ್ದಾರೆ, ಗೌತಮಿ, ಶ್ರೀಮುಖಿ, ಆನಂದ್, ಲಕ್ಷ್ಮಿ, ಶ್ರೀನಿವಾಸ್ ಗವಿರೆಡ್ಡಿ ಮತ್ತು ಮಂಜುಷಾ ಪೋಷಕ ಪಾತ್ರಗಳಲ್ಲಿದ್ದಾರೆ. ಸಮಂತಾ ಅವರ ಸ್ವಂತ ನಿರ್ಮಾಣ ಸಂಸ್ಥೆಯಾದ ‘ಟ್ರಾಲಿಲಾ ಮೂವಿಂಗ್ ಪಿಕ್ಚರ್ಸ್’ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಿದೆ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘ಯು/ಎ’ ಸರ್ಟಿಫಿಕೇಟ್ ಸಿಕ್ಕಿದ್ದು, ಚಿತ್ರದ ರನ್‌ಟೈಮ್ 2 ಗಂಟೆ, 34 ನಿಮಿಷ ಇರಲಿದೆ. ಜೂನ್ 19ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್