AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​​ಗೂ ಮೊದಲೇ ಸೇಫ್ ಆದ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’

ಸಮಂತಾ ರುತ್ ಪ್ರಭು ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ತೆರೆಗೆ ಬರಲಿದೆ. ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವು ಬಿಡುಗಡೆಗೂ ಮುನ್ನವೇ ಭಾರಿ ಲಾಭ ಗಳಿಸಿದೆ. ಥಿಯೇಟರಿಕಲ್, ಒಟಿಟಿ, ಸ್ಯಾಟಲೈಟ್ ಹಕ್ಕುಗಳಿಂದ ನಿರ್ಮಾಪಕರು ಈಗಾಗಲೇ ಬಂಡವಾಳ ಮರಳಿ ಪಡೆದಿದ್ದಾರೆ. ಮಹಿಳಾ ಪ್ರಧಾನ ಚಿತ್ರವೊಂದಕ್ಕೆ ಸಿಕ್ಕ ಈ ಯಶಸ್ಸು ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸಿದೆ, ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ.

ರಿಲೀಸ್​​ಗೂ ಮೊದಲೇ ಸೇಫ್ ಆದ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Jun 16, 2026 | 2:35 PM

Share

ಸಮಂತಾ ರುತ್ ಪ್ರಭು (Samantha) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಈ ಸಿನಿಮಾ ಬಗ್ಗೆ ಈಗ ಒಂದು ಅಚ್ಚರಿಯ ಮಾಹಿತಿ ರಿವೀಲ್ ಆಗಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲೇ ಸೇಫ್ ಆಗಿದೆಯಂತೆ. ಈ ಮೂಲಕ ಮುಂದೆ ಬರೋದೆಲ್ಲವೂ ಲಾಭದ ರೂಪದಲ್ಲಿ ನಿರ್ಮಾಪಕರ ಜೇಬಿಗೆ ಇಳಿಯಲಿದೆ. ಸಿನಿಮಾದ ನಿರ್ಮಾಪಕರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಮಾ ಇಂಟಿ ಬಂಗಾರಂ’ ಆ್ಯಕ್ಷನ್ ಕಾಮಿಡಿ ಸಿನಿಮಾ. ಈ ಸಿನಿಮಾದಲ್ಲಿ ಸಮಂತಾಗೆ ಎರಡು ಶೇಡ್​​ನ ಪಾತ್ರ ಇದೆ. ಮನೆಯ ಒಳಗೆ ಸಾಮಾನ್ಯ ಸಂಪ್ರದಾಯಸ್ಥ ಕುಟುಂಬದವರಂತೆ ಕಂಡರೂ ವಿಲನ್​​ಗಳಿಗೆ ವಿಲನ್ ಇವರು. ಕನ್ನಡದ ದಿಗಂತ್ ಮಂಚಾಲೆ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಥಿಯೇಟರಿಕಲ್ ಹಕ್ಕುಗಳು ಒಳ್ಳೆಯ ಬೆಲೆಗೆ ಮಾರಾಟ ಆಗಿವೆ ಎಂದು ವರದಿ ಆಗಿದೆ.

‘ಮಾ ಇಂಟಿ ಬಂಗಾರಂ’ ಸಿನಿಮಾ ಟ್ರೇಲರ್ ಮೂಲಕವೇ ಭರವಸೆ ಮೂಡಿಸಿದೆ. ಹೀಗಾಗಿ, ಇದರ ಹಕ್ಕನ್ನು ಪಡೆಯಲು ಸಾಕಷ್ಟು ಮಂದಿ ಸರತಿಸಾಲಿನಲ್ಲಿ ನಿಂತಿದ್ದರು. ಈ ಕಾರಣದಿಂದ ಚಿತ್ರದ ಹಕ್ಕು ಒಳ್ಳೆಯ ಬೆಲೆಗೆ ಮಾರಾಟ ಆಗಿವೆ. ಒಟಿಟಿ, ಸ್ಯಾಟಲೈಟ್​​ ಹಕ್ಕು ಮಾರಾಟದಿಂದಲೂ ಸಿನಿಮಾಗೆ ಭಾರೀ ಹಣ ಹರಿದು ಬಂದಿದೆ. ಹೀಗಾಗಿ, ಸಿನಿಮಾ ನಿರ್ಮಾಪಕರು ಈಗಲೇ ಲಾಭ ಕಾಣುವ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?

‘ಸಿನಿಮಾ ರಿಲೀಸ್ ಆಗುವ ಮುನ್ನವೇ ನಾವು ಹೂಡಿಕೆ ಮಾಡಿದ ಸಂಪೂರ್ಣ ಬಂಡವಾಳ ಮರಳಿ ಪಡೆದಿದ್ದೇವೆ. ನಮ್ಮ ಚಿತ್ರದ ಮೇಲೆ ಇಡೀ ಮಾರುಕಟ್ಟೆ ಇಟ್ಟಿರುವ ನಂಬಿಕೆಗೆ ಇದು ಸಾಕ್ಷಿ. ಮಹಿಳಾ ಪ್ರಧಾನ ತೆಲುಗು ಸಿನಿಮಾಗೆ ಒಟಿಟಿ ಪ್ಲಾಟ್‌ಫಾರ್ಮ್‌ಗಳು ಹಾಗೂ ವಿವಿಧ ಪ್ರಾಂತ್ಯಗಳ ವಿತರಕರಿಂದ ಇಷ್ಟೊಂದು ಅದ್ಭುತ ಪ್ರತಿಕ್ರಿಯೆ ಸಿಕ್ಕಿರುವುದು ನಿಜಕ್ಕೂ ಹೆಮ್ಮೆ ತಂದಿದೆ’ ಎಂದಿದ್ದಾರೆ ಹಿಮಾಂಕ್ ದುವ್ವುರು. ‘ಪ್ರಸ್ತುತ ಮಾರುಕಟ್ಟೆಯಲ್ಲಿ ಮಹಿಳಾ ಪ್ರಧಾನ ಚಿತ್ರವೊಂದಕ್ಕೆ ಈ ಮಟ್ಟದ ಬೆಂಬಲ ಸಿಕ್ಕಿರುವುದು ಒಂದು ದೊಡ್ಡ ಕಮರ್ಷಿಯಲ್ ಸಿಗ್ನಲ್. ಚಿತ್ರದ ಹಕ್ಕುಗಳನ್ನು ಮಾರಲು ಆರಂಭದಲ್ಲೇ ಪ್ಯಾಕೇಜ್ ಮಾಡಲಾಗಿತ್ತು, ಖರೀದಿದಾರರನ್ನು ಮುಂಚಿತವಾಗಿಯೇ ಸಂಪರ್ಕಿಸಲಾಗಿತ್ತು’ ಎಂದಿದ್ದಾರೆ ಅವರು. ಸದ್ಯ ಈ ವಿಷಯ ಸಮಂತಾ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?