AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ನೀಡಿದ ಸಮಂತಾ; ಸತ್ಯ ಬಯಲಿಗೆ ಎಳೆದ ಡಾಕ್ಟರ್​

ಸಮಂತಾ ಅವರು ಭಾರಿ ಉತ್ಸಾಹದಿಂದ ಆರೋಗ್ಯದ ಕುರಿತು ಪಾಡ್​ ಕಾಸ್ಟ್​ ಮಾಡುತ್ತಿದ್ದಾರೆ. ‘ಟೇಕ್​ 20’ ಹೆಸರಿನ ಈ ಕಾರ್ಯಕ್ರಮದಲ್ಲಿ ಅವರು ಕೆಲವು ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಆ ಮಾಹಿತಿ ತಪ್ಪಾಗಿದ್ದು, ಜನರ ದಾರಿ ತಪ್ಪಿಸುತ್ತಿದೆ ಎಂದು ವೈದ್ಯರೊಬ್ಬರು ಟೀಕೆ ವ್ಯಕ್ತಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ.

ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ನೀಡಿದ ಸಮಂತಾ; ಸತ್ಯ ಬಯಲಿಗೆ ಎಳೆದ ಡಾಕ್ಟರ್​
ಸಮಂತಾ ರುತ್​ ಪ್ರಭು
ಮದನ್​ ಕುಮಾರ್​
|

Updated on: Mar 14, 2024 | 4:03 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಆರೋಗ್ಯದ ವಿಚಾರದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಿದ್ದಾರೆ. ಮಯೋಸೈಟಿಸ್​ ಕಾಯಿಲೆಯಿಂದ ಅವರಿಗೆ ತುಂಬ ತೊಂದರೆ ಆಯಿತು. ಅದಕ್ಕೆ ಚಿಕಿತ್ಸೆ ಪಡೆಯುವ ಸಲುವಾಗಿ ಅವರು ವಿದೇಶಕ್ಕೆ ತೆರಳಿದ್ದರು. ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದರು. ಈಗ ಅವರು ಚೇತರಿಸಿಕೊಂಡಿದ್ದಾರೆ. ಸಿನಿಮಾ ಮಾತ್ರವಲ್ಲದೇ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಮಂತಾ ತೊಡಗಿಕೊಂಡಿದ್ದಾರೆ. ಅವರ ಪಾಡ್​ಕಾಸ್ಟ್​ ‘ಟೇಕ್​ 20’ (Take 20) ಕಾರ್ಯಕ್ರಮ ಫೇಮಸ್​ ಆಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ಆರೋಗ್ಯದ ಬಗ್ಗೆ ಸಮಂತಾ (Samantha) ಅವರು ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂಬ ಆರೋಪ ಎದುರಾಗಿದೆ.

ಸಮಂತಾ ರುತ್​ ಪ್ರಭು ಅವರು ಆರೋಗ್ಯದ ಬಗ್ಗೆ ಏನಾದರೂ ಹೇಳುತ್ತಾರೆ ಎಂದರೆ ಅಭಿಮಾನಿಗಳು ಗಮನವಿಟ್ಟು ಕೇಳುತ್ತಾರೆ. ಅದೇ ಕಾರಣಕ್ಕೋ ಏನೋ ‘ಟೇಕ್​ 20’ ಎಪಿಸೋಡ್​ನಲ್ಲಿ ಲಿವರ್​ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಆದರೆ ಈ ಸಂಚಿಕೆಯಲ್ಲಿ ಸಮಂತಾ ಹಾಗೂ ಅವರ ಜೊತೆ ಇರುವ ಅತಿಥಿ ಹಂಚಿಕೊಂಡ ಮಾಹಿತಿ ಸಂಪೂರ್ಣ ತಪ್ಪಾಗಿದೆ ಎಂದು ವೈದ್ಯರೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ: ಚಿಂತೆಯಿಲ್ಲದೇ ಬಾತ್​ ರೂಂ ಫೋಟೋ ಹಂಚಿಕೊಂಡ ಸಮಂತಾ ರುತ್​ ಪ್ರಭು

‘ಲಿವರ್​ ಡಿಟಾಕ್ಸ್​’ ಕುರಿತು ಈ ಸಂಚಿಕೆಯಲ್ಲಿ ಮಾಹಿತಿ ನೀಡಲಾಗಿದೆ. ಆದರೆ ಈ ಮಾಹಿತಿಯು ಜನರ ದಾರಿ ತಪ್ಪಿಸುತ್ತಿದೆ ಎಂದು ವೈದ್ಯರೊಬ್ಬರು ತಕರಾರು ತೆಗೆದಿದ್ದಾರೆ. ‘ಇವರು ಫೇಮಸ್​ ನಟಿ ಸಮಂತಾ. ತಮ್ಮ 33 ಮಿಲಿಯನ್​ ಫಾಲೋವರ್ಸ್​ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ವಿಜ್ಞಾನದ ಕುರಿತು ಅನಕ್ಷರಸ್ತರಾಗಿರುವ ಇಬ್ಬರು ವ್ಯಕ್ತಿಗಳು ತಮ್ಮ ಅಜ್ಞಾನವನ್ನು ಹರಡುತ್ತಿದ್ದಾರೆ. ಸಮಂತಾ ಜೊತೆ ಇರುವ ಈ ತರಬೇತುದಾರ ನಿಜವಾಗಿ ವೈದ್ಯಕೀಯ ಕ್ಷೇತ್ರದ ವ್ಯಕ್ತಿ ಅಲ್ಲ. ಲಿವರ್ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದೂ ಈತನಿಗೆ ಗೊತ್ತಿಲ್ಲ’ ಎಂದು ವೈದ್ಯರು ಛಾಟಿ ಬೀಸಿದ್ದಾರೆ.

‘ನಾನು ಲಿವರ್​ ವೈದ್ಯ. ಕಳೆದ 10 ವರ್ಷಗಳಿಂದ ಲಿವರ್​ಗೆ ಸಂಬಂಧಿಸಿದ ಚಿಕಿತ್ಸೆ ನೀಡುತ್ತಿದ್ದೇನೆ. ಈ ಪಾಡ್​ಕಾಸ್ಟ್​ನಲ್ಲಿ ಇವರು ಹೇಳುತ್ತಿರುವುದು ಸಂಪೂರ್ಣ ಸುಳ್ಳು’ ಎಂದು ವೈದ್ಯರು ಟೀಕೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವೈದ್ಯರ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಕೆಲವು ಅಭಿಮಾನಿಗಳು ಸಮಂತಾ ಪರವಾಗಿ ವಾದ ಮಂಡಿಸಲು ಬಂದಿದ್ದಾರೆ. ಆದರೆ ಅದಕ್ಕೂ ಕೂಡ ಡಾಕ್ಟರ್​ ಉತ್ತರ ನೀಡಿದ್ದು, ಸರಿಯಾಗಿ ತಿಳಿದುಕೊಳ್ಳುವಂತೆ ಹೇಳಿದ್ದಾರೆ. ‘ಸಮಂತಾ ಅಭಿಮಾನಿಗಳೇ.. ನೀವು ಅವರ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿ ಎಂಜಾಯ್​ ಮಾಡಿ. ಆದರೆ ವೈದ್ಯಕೀಯ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ತಜ್ಞರಿಗೆ ಬಿಡಿ. ಅದನ್ನು ನೀವು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ’ ಎಂದು ವೈದ್ಯರು ಖಡಕ್​ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್