ಕಾಲಿವುಡ್ ಸ್ಟಾರ್ ನಟನ ಚಿತ್ರಕ್ಕೆ ಕನ್ನಡದ ನಟಿ ಸಂಯುಕ್ತಾ ಹೆಗಡೆ ಎಂಟ್ರಿ

ಕನ್ನಡ ಚಿತ್ರರಂಗದಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಸಂಯುಕ್ತಾ ಹೆಗಡೆ ಇದೀಗ ಪರಭಾಷೆಗಳಲ್ಲೂ ಮಿಂಚುತ್ತಿದ್ದಾರೆ. ಕಾಲಿವುಡ್ ಸೂಪರ್ ಸ್ಟಾರ್ ಚಿಯಾನ್ ವಿಕ್ರಮ್ ನಟನೆಯ ಬಹುನಿರೀಕ್ಷಿತ 'ಚಿಯಾನ್ 63' ಚಿತ್ರಕ್ಕೆ ಸಂಯುಕ್ತಾ ಆಯ್ಕೆಯಾಗಿದ್ದು, ಇದು ಅವರ ವೃತ್ತಿಜೀವನಕ್ಕೆ ದೊಡ್ಡ ತಿರುವು ನೀಡಲಿದೆ. 'ಕಿರಿಕ್ ಪಾರ್ಟಿ' ಮೂಲಕ ಗುರುತಿಸಿಕೊಂಡ ಇವರು, ತಮಿಳು ಮತ್ತು ಬಾಲಿವುಡ್‌ನಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

ಕಾಲಿವುಡ್ ಸ್ಟಾರ್ ನಟನ ಚಿತ್ರಕ್ಕೆ ಕನ್ನಡದ ನಟಿ ಸಂಯುಕ್ತಾ ಹೆಗಡೆ ಎಂಟ್ರಿ
ಸಂಯುಕ್ತಾ

Updated on: Jun 16, 2026 | 7:33 AM

ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಈಗ ಪರಭಾಷೆಗಳಲ್ಲೂ ಧೂಳೆಬ್ಬಿಸುತ್ತಿರುವ ನಟಿ ಸಂಯುಕ್ತಾ ಹೆಗಡೆ ಅವರ ಖಾತೆಗೆ ಮತ್ತೊಂದು ದೊಡ್ಡ ಸಿನಿಮಾ ಸೇರ್ಪಡೆಯಾಗಿದೆ. ಕಾಲಿವುಡ್ ಸೂಪರ್ ಸ್ಟಾರ್ ಚಿಯಾನ್ ವಿಕ್ರಮ್ ನಟನೆಯ, ಆನಂದ್ ಶಂಕರ್ ನಿರ್ದೇಶನದ ಬಹುನಿರೀಕ್ಷಿತ ‘ಚಿಯಾನ್ 63’ ಚಿತ್ರಕ್ಕೆ ಸಂಯುಕ್ತಾ ಆಯ್ಕೆಯಾಗಿದ್ದಾರೆ. ಈ ಹಿಂದೆ ವಿಕ್ರಮ್ ಹಾಗೂ ಆನಂದ್ ಅವರು ‘ಇರು ಮುಗನ್’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದಾದ ಹತ್ತು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗುತ್ತಿದೆ. ಈ ಬಿಗ್ ಪ್ರಾಜೆಕ್ಟ್‌ನಲ್ಲಿ ಸಂಯುಕ್ತಾ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ.

ರಕ್ಷಿತ್ ಶೆಟ್ಟಿ ನಟನೆಯ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಹಿಟ್ ಚಿತ್ರ ‘ಕಿರಿಕ್ ಪಾರ್ಟಿ’ ಮೂಲಕ ಸಂಯುಕ್ತಾ ಹೆಗಡೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ತಮ್ಮ ಮೊದಲ ಸಿನಿಮಾದಲ್ಲೇ ಪ್ರೇಕ್ಷಕರ ಮನಗೆದ್ದ ಇವರು, ಚಿತ್ರದಲ್ಲಿನ ಆರ್ಯ ಪಾತ್ರದ ಮೂಲಕ ರಾತ್ರೋರಾತ್ರಿ ಸ್ಟಾರ್ ಪಟ್ಟ ತಂದುಕೊಂಡರು. ಈ ಚಿತ್ರದ ಯಶಸ್ಸಿನ ಬೆನ್ನಲ್ಲೇ ಇದರ ತೆಲುಗು ರಿಮೇಕ್ ‘ಕಿರಾಕ್ ಪಾರ್ಟಿ’ ಮೂಲಕ ಅವರು ಟಾಲಿವುಡ್‌ಗೂ ಎಂಟ್ರಿ ಕೊಟ್ಟರು.

ಕನ್ನಡದ ನಂತರ ತಮಿಳು ಚಿತ್ರರಂಗದಲ್ಲೂ ಸಕ್ರಿಯರಾದರು. ‘ಕೋಮಾಲಿ’ ಮತ್ತು ‘ಮನ್ಮಥ ಲೀಲೆ’ ಚಿತ್ರಗಳಲ್ಲಿನ ತಮ್ಮ ನಟನೆಯ ಮೂಲಕ ಕಾಲಿವುಡ್ ಪ್ರೇಕ್ಷಕರಿಗೆ ಹತ್ತಿರವಾದರು. ಕೇವಲ ಗ್ಲಾಮರ್ ಮಾತ್ರವಲ್ಲದೆ ವಿಭಿನ್ನ ಪಾತ್ರಗಳ ಮೂಲಕ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಮಾರುಕಟ್ಟೆ ಸೃಷ್ಟಿಸಿಕೊಂಡ ಈ ಕರಾವಳಿ ಬೆಡಗಿ, ಇತ್ತೀಚೆಗೆ ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟು ಅಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಕನ್ನಡ ಬಿಗ್ ಬಾಸ್ ಅಲ್ಲೂ ಸಂಯುಕ್ತಾ ಕಾಣಿಸಿಕೊಂಡಿದ್ದರು. ಸಹ ಸ್ಪರ್ಧಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸಬೇಕಾಯಿತು. ಬಿಗ್ ಬಾಸ್ ಮನೆಯ ಕಟ್ಟುನಿಟ್ಟಿನ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಅವರನ್ನು ಶೋನಿಂದ ಅರ್ಧಕ್ಕೇ ಎಲಿಮಿನೇಟ್ ಮಾಡಿ ಹೊರಗೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಸತತ ಸೋಲಿನ ಬಳಿಕ ಸಂಭಾವನೆಯನ್ನು ಗಣನೀಯವಾಗಿ ಇಳಿಸಿಕೊಂಡ ವಿಕ್ರಮ್

ಈಗ ಸಂಯುಕ್ತಾಗೆ ದೊಡ್ಡ ಆಫರ್​ ಸಿಕ್ಕಿದೆ. ಈ ಸಿನಿಮಾ ಕಂಪ್ಲೀಟ್ ಫ್ಯಾಮಿಲಿ ಆ್ಯಕ್ಷನ್ ಎಂಟರ್‌ಟೈನರ್ ಆಗಿ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ಕೇವಲ ವಿಕ್ರಮ್ ಅಷ್ಟೇ ಅಲ್ಲದೆ ಹಿರಿಯ ನಟಿ ಊರ್ವಶಿ, ಎಂ.ಎಸ್. ಭಾಸ್ಕರ್ ಮತ್ತು ರಿಯಾ ಶಿಬು ಸೇರಿದಂತೆ ಒಂದು ದೊಡ್ಡ ತಾರಾಬಳಗವೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us