ಪೋಸ್ಟರ್​ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿ ಹಂಚಿಕೊಂಡ ಶಿವಣ್ಣ

ಸ್ಯಾಂಡಲ್​ವುಡ್ ನ ಹ್ಯಾಟ್ರಿಕ್ ಹೀರೋ , ಅಭಿಮಾನಿಗಳ ಪಾಲಿನ ಮೆಚ್ಚಿನ ಶಿವಣ್ಣ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಪೋಸ್ಟರ್​ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿ ಹಂಚಿಕೊಂಡ ಶಿವಣ್ಣ
Actor Shiva Rajkumar
Edited By:

Updated on: Dec 08, 2022 | 9:49 PM

ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ (Hattrick Hero Shivaraj Kumar ) ನಟನೆಯ ಬಹು ನಿರೀಕ್ಷಿತ ‘ವೇದ’ ಸಿನಿಮಾ ಇದೇ ಡಿಸೆಂಬರ್ 23ರಂದು ತೆರೆಗೆ ಬರಲು ಸಜ್ಜಾಗಿದೆ. ಇದಕ್ಕೆ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ. ಇದರ ಮಧ್ಯೆ ತಮ್ಮ ಅಭಿಮಾನಿಗಳಿಗೆ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಹೌದು.. ಶಿವಣ್ಣ ಎಂದೇ ಹೆಸರಾದ ಸ್ಯಾಂಡಲ್​ವುಡ್(Sandalwood) ಹ್ಯಾಟ್ರಿಕ್ ಶಿವರಾಜ್‍ಕುಮಾರ್ ಇದೀಗ ಕಾಲಿವುಡ್​ಗೆ ಎಂಟ್ರಿಕೊಟ್ಟಿದ್ದಾರೆ.

ಇದನ್ನೂ ಓದಿ: ಜಾಕ್​ ಮಂಜು ನಿರ್ಮಾಣದ ಮುಂದಿನ ಚಿತ್ರದ ಟೈಟಲ್ ಲಾಂಚ್: 5 ಭಾಷೆಗಳಲ್ಲಿ ಚಿತ್ರ ತೆರೆಗೆ

ಅರುಣ್ ಮಾಥೇಶ್ವರನ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ಅಭಿನಯಿಸಿದ್ದು, ಈ ಬಗ್ಗೆ ಶಿವಣ್ಣ ಸಿನಿಮಾ ಪೋಸ್ಟರ್ ಹಂಚಿಕೊಳ್ಳುವುದರ ಮೂಲಕ ಅಭಿಮಾನಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಇದರೊಂದಿಗೆ ಕಾಲಿವುಡ್ ಗೆ ಸ್ಯಾಂಡಲ್ ವುಡ್ ಶಿವಣ್ಣನ ಆಗಮನವಾಗಿದೆ.

ಸ್ಯಾಂಡಲ್ ವುಡ್ ಶಿವಣ್ಣ ಈಗ ಅರುಣ್ ಮಾಥೇಶ್ವರನ್ ನಿರ್ದೇಶನದ ತಮಿಳು ನಟ ಧನುಷ್ ಅಭಿನಯದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಲಿದ್ದು, ಧನುಷ್ ಅಣ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ಸತ್ಯಜ್ಯೋತಿ ಫಿಲ್ಮ್ಸ್‌ ಬಂಡವಾಳ ಹೂಡಿದೆ.


ಇನ್ನು ಸಂದೀಪ್ ಕಿಶನ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಈ ‘ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಬಿಡುಗಡೆಯಾಗಲಿದೆ. ಆದ್ರೆ, ಯಾವಾಗ ಏನು ಎನ್ನುವುದು ಮಾತ್ರ ಇನ್ನೂ ಡೇಟ್ ಫಿಕ್ಸ್ ಆಗಿಲ್ಲ. ಚಿತ್ರತಂಡ ಸಹ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:42 pm, Thu, 8 December 22