ನಟಿ ಮಾನ್ವಿತಾಗೆ ಕೂಡಿಬಂತು ಕಂಕಣ ಭಾಗ್ಯ; ಹುಡ್ಗ ಯಾರು? ಮದ್ವೆ ಎಲ್ಲಿ?

ಟಗರು ಪುಟ್ಟಿ ಮಾನ್ವಿತಾ ಕಾಮತ್ (Manvitha Kamath) ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹೌದು.. ಕೆಂಡಸಂಪಿಗೆ ಕುವರಿ ಮಾನ್ವಿತಾ ಕಾಮತ್ ಈಗ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದಾರೆ. ಹಾಗಾದ್ರೆ, ಮಾನ್ವಿಯಾ ಮದುವೆ ಆಗುವ ಗಂಡು ಯಾರು? ಎಲ್ಲಿ ಮದುವೆ? ಎನ್ನುವ ಮಾಹಿತಿ ಇಲ್ಲಿದೆ.

ನಟಿ ಮಾನ್ವಿತಾಗೆ ಕೂಡಿಬಂತು ಕಂಕಣ ಭಾಗ್ಯ; ಹುಡ್ಗ ಯಾರು? ಮದ್ವೆ ಎಲ್ಲಿ?
ಮಾನ್ವಿತಾ ಕಾಮತ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 12, 2024 | 10:07 PM

ಕೆಂಡಸಂಪಿಗೆ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸಸ್ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್ (Actress Manvita Kamath)  ಮದುವೆ ಮುಹೂರ್ತ ಫಿಕ್ಸ್ ಆಗಿದೆ. ಮೈಸೂರು ಮೂಲದ ಸಂಗೀತ ನಿರ್ದೇಶಕ ಅರುಣ್ ಕುಮಾರ್ ಅವರೊಂದಿಗೆ ಕೆಂಡಸಂಪಿಗೆ ಕುವರಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ಮೇ 01 ರಂದು ಮಾನ್ವಿತಾ- ಅರುಣ್ ಕುಮಾರ್ ವಿವಾಹೋತ್ಸವ ನಡೆಯಲಿದೆ.

ಮಾನ್ವಿತಾ ಕಾಮತ್ ಹಾಗೂ ಅರುಣ್ ಕುಮಾರ್ ಕೊಂಕಣಿ ಸಂಪ್ರದಾಯದಂತೆ ಮೇ1 ಕ್ಕೆ ಹೊಸ ಬಾಳಿಗೆ ಹೆಜ್ಜೆ ಇಡಲಿದ್ದಾರೆ. ಅದಕ್ಕೂ ಮುನ್ನ ಏಪ್ರಿಲ್ 29ಕ್ಕೆ ಮೆಹಂದಿ ಕಾರ್ಯಕ್ರಮ, ಏಪ್ರಿಲ್ 30 ಅರಿಶಿನ ಶಾಸ್ತ್ರ ಜರುಗಿದರೆ, ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ನಡೆಯಲಿದೆ. ಚಿಕ್ಕಮಗಳೂರಿನ ಕಳಸದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆ ನಡೆಯಲಿದೆ. ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿರುವುದು ವಿಶೇಷ.

ಆರ್​ಜೆಯಾಗಿದ್ದ ಮಾನ್ವಿತಾ ಸುಕ್ಕ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಶಿವಣ್ಣನ ಟಗರು ಸಿನಿಮಾದಲ್ಲಿ ಬಣ್ಣ ಹಚ್ಚಿ ಟಗರು ಪುಟ್ಟಿಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದ ಈ ಸುಂದರಿ ಈಗ ಹಸೆಮಣೆ ಏರಲು ರೆಡಿಯಾಗಿದ್ದು, ಮದುವೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ