AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’

Kantara Movie Records: ಎಲ್ಲ ಕಡೆಗಳಲ್ಲಿ ‘ಕಾಂತಾರ’ ಸಿನಿಮಾ ಅಬ್ಬರಿಸುತ್ತಿದೆ. ಕರ್ನಾಟಕದಲ್ಲಿ ಈ ಚಿತ್ರ ಹಲವು ದಾಖಲೆಗಳನ್ನು ಮಾಡಿದೆ. ಇದರಿಂದ ರಿಷಬ್​ ಶೆಟ್ಟಿ ಖ್ಯಾತಿ ಹೆಚ್ಚಿದೆ.

Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
ಕಾಂತಾರ
TV9 Web
| Updated By: ಮದನ್​ ಕುಮಾರ್​|

Updated on: Nov 10, 2022 | 7:33 AM

Share

ಕನ್ನಡ ಚಿತ್ರರಂಗಕ್ಕೆ ಈಗ ಸುಗ್ಗಿ ಕಾಲ. ಅನೇಕ ಸಿನಿಮಾಗಳು ಸಾಧನೆ ಮಾಡುತ್ತಿವೆ. ‘ಕಾಂತಾರ’ (Kantara) ಸಿನಿಮಾ ಹಲವು ಮೈಲಿಗಲ್ಲುಗಳನ್ನು ಸೃಷ್ಟಿ ಮಾಡಿದೆ. ಬಿಡುಗಡೆಯಾಗಿ ಒಂದೂವರೆ ತಿಂಗಳು ಕಳೆದರೂ ಕೂಡ ಇನ್ನೂ ಅನೇಕ ಕಡೆಗಳಲ್ಲಿ ಈ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ರಿಷಬ್​ ಶೆಟ್ಟಿ (Rishab Shetty) ಅವರ ನಟನೆ ಮತ್ತು ನಿರ್ದೇಶನಕ್ಕೆ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಅನೇಕ ದಾಖಲೆಗಳನ್ನು ಈ ಸಿನಿಮಾ ಮಾಡಿದೆ. ಇದರಿಂದ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆಗೆ ಸಖತ್​ ಲಾಭ ಆಗಿದೆ. ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ ಒಂದು ಕೋಟಿ ಟಿಕೆಟ್​ಗಳು ಮಾರಾಟ ಆಗಿವೆ. ಈ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದೆ.

‘ಕೆಜಿಎಫ್​: ಚಾಪ್ಟರ್​ 2’ ರೀತಿಯ ಸಿನಿಮಾ ನಿರ್ಮಾಣ ಮಾಡುವ ಮೂಲಕ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಈ ಬ್ಯಾನರ್​ ಮೂಲಕ ನಿರ್ಮಾಣವಾದ ಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಸಿನಿಮಾ ಎಂಬ ಖ್ಯಾತಿಗೆ ‘ಕಾಂತಾರ’ ಚಿತ್ರ ಒಳಗಾಗಿತ್ತು. ಈಗ ಇನ್ನೊಂದು ದಾಖಲೆ ಈ ಸಿನಿಮಾದಿಂದ ಆಗಿದೆ. ಕರುನಾಡಿನಲ್ಲಿ ‘ಕಾಂತಾರ’ ಚಿತ್ರದ ಬರೋಬ್ಬರಿ ಒಂದು ಕೋಟಿ ಟಿಕೆಟ್​ಗಳು ಈವರೆಗೆ ಮಾರಾಟ ಆಗಿವೆ. ಈ ಕುರಿತು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಹೆಮ್ಮೆಯಿಂದ ಹೇಳಿಕೊಂಡಿದೆ.

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಬಾಯಿ ಮಾತಿನ ಪ್ರಚಾರ ಜೋರಾಗಿಯೇ ಸಿಕ್ಕಿತು. ಬುಕ್ ಮೈ ಶೋ ಹಾಗೂ ಐಎಂಡಿಬಿಯಲ್ಲಿ ಒಳ್ಳೆಯ ರೇಟಿಂಗ್ ಸಿಕ್ಕಿತು. ಸಿನಿಮಾ ನೋಡಿದ ಪ್ರೇಕ್ಷಕರು ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದರು. ಇದರಿಂದ ದಿನ ಕಳೆದಂತೆ ಸಿನಿಮಾದ ಕಲೆಕ್ಷನ್ ಹೆಚ್ಚುತಲೇ ಹೋಯಿತು. ಇನ್ನು, ಸಿನಿಮಾ ಡಬ್ ಮಾಡಿ ತೆರೆಗೆ ತರುವ ಒತ್ತಾಯ ಬಂದಿದ್ದರಿಂದ ಸಿನಿಮಾವನ್ನು ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ರಿಲೀಸ್ ಮಾಡಲಾಯಿತು. ಹಾಗಾಗಿ, ಹೊರರಾಜ್ಯಗಳಲ್ಲೂ ಈ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದೆ.

ಇದನ್ನೂ ಓದಿ
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ಹಿಂದಿಯಲ್ಲಿ ಈವರೆಗೆ 67 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಎಲ್ಲ ಭಾಷೆಗಳಿಂದ ಸೇರಿ ಚಿತ್ರದ ಗಳಿಕೆ 300 ಕೋಟಿ ರೂಪಾಯಿಗೂ ಅಧಿಕ ಆಗಿದೆ. ಕನ್ನಡ ಸಿನಿಮಾ ಈ ಪರಿ ಸಾಧನೆ ಮಾಡಿರುವುದಕ್ಕೆ ಇಡೀ ಸ್ಯಾಂಡಲ್​ವುಡ್​ ಹೆಮ್ಮೆ ಪಡುತ್ತಿದೆ. ಪ್ರಭಾಸ್​, ಅನುಷ್ಕಾ ಶೆಟ್ಟಿ, ರಜನಿಕಾಂತ್, ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.