ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ; ಪ್ರದರ್ಶನವಾಗಲಿದೆ 55 ದೇಶಗಳ ಸಿನಿಮಾ

ಈ ಬಾರಿ 55 ರಾಷ್ಟ್ರಗಳ 200ಕ್ಕೂ ಹೆಚ್ಚು ಸಿನಿಮಾ ಪ್ರದರ್ಶನವಾಗಲಿದೆ. ಮಾರ್ಚ್ 10ರವರೆಗೆ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯಲಿದೆ.  ಸಂಜೆ 7:45ಕ್ಕೆ ಉದ್ಘಾಟನಾ ಚಿತ್ರವಾಗಿ ಗ್ರೀಸ್​ನ ‘ಟೈಲರ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಚಾಲನೆ; ಪ್ರದರ್ಶನವಾಗಲಿದೆ 55 ದೇಶಗಳ ಸಿನಿಮಾ
ಫಿಲ್ಮ್ ಫೆಸ್ಟಿವಲ್
Follow us
| Updated By: ರಾಜೇಶ್ ದುಗ್ಗುಮನೆ

Updated on:Mar 03, 2022 | 6:46 PM

ಬೆಂಗಳೂರಿನ (Bengaluru)ಜಿಕೆವಿಕೆಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (13th Bengaluru International Film Festival) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಮಾರ್ಚ್​ 3) ಸಂಜೆ ಚಾಲನೆ ನೀಡಿದ್ದಾರೆ. ಹಲವು ರಾಷ್ಟ್ರಗಳಲ್ಲಿ ಹಲವು ರೀತಿಯ ಸಿನಿಮಾಗಳು ತಯಾರಾಗುತ್ತವೆ. ಪ್ರತಿ ದೇಶದ ಸಿನಿಮಾಗಳು ಅಲ್ಲಿಯ ಸಂಸ್ಕೃತಿಯನ್ನು ಪ್ರತಿನಿಧಿಸುತ್ತವೆ. ಈ ರೀತಿ 55 ದೇಶಗಳ ಸಿನಿಮಾಗಳನ್ನು ಒಂದೇ ಕಡೆ ನೋಡುವ ಅವಕಾಶ ಈ ಬಾರಿಯ ಬೆಂಗಳೂರು ಚಲನಚಿತ್ರೋತ್ಸದಲ್ಲಿ ಆಗುತ್ತಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ (Nirmala Sitharaman)​, ರಾಜೀವ್ ಚಂದ್ರಶೇಖರ್​ ಅವರು ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ವಿಶೇಷ ಅತಿಥಿಯಾಗಿ ಭಾರತಿ ವಿಷ್ಣುವರ್ಧನ್ ಭಾಗಿಯಾಗಿದ್ದಾರೆ. ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಮೊದಲಾದವರು ಪಾಲ್ಗೊಂಡಿದ್ದಾರೆ.

ಈ ಬಾರಿ 55 ರಾಷ್ಟ್ರಗಳ 200ಕ್ಕೂ ಹೆಚ್ಚು ಸಿನಿಮಾ ಪ್ರದರ್ಶನವಾಗಲಿದೆ. ಮಾರ್ಚ್ 10ರವರೆಗೆ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯಲಿದೆ.  ಸಂಜೆ 7:45ಕ್ಕೆ ಉದ್ಘಾಟನಾ ಚಿತ್ರವಾಗಿ ಗ್ರೀಸ್​ನ ‘ಟೈಲರ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸೋನಿಯಾ ಲಿಸಾ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಅಪ್ಪುಗೆ ಗೌರವ:

ಪುನೀತ್​ ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಅವರು 46ನೇ ವಯಸ್ಸಿಗೆ ಹೃದಯಾಘಾತದಿಂದ ಮೃತಪಟ್ಟರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಈ ಕಾರಣಕ್ಕೆ ಸಿನಿಮೋತ್ಸವದಲ್ಲಿ ಪುನೀತ್​ ಅವರಿಗೆ ಮೌನಾಚರಣೆ ಮೂಲಕ ನಮನ ಸಲ್ಲಿಸಿ ಫಿಲ್ಮ್​ ಫೆಸ್ಟಿವಲ್ ಆರಂಭ ಮಾಡಿದೆ.

ಪ್ರದರ್ಶನ ಎಲ್ಲಿ?

ಈ ಬಾರಿ 55 ದೇಶಗಳ 200ಕ್ಕೂ ಅಧಿಕ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿರುವ ಪಿವಿಆರ್​ನಲ್ಲಿ ಈ ಸಿನಿಮೋತ್ಸವ ನಡೆಯಲಿದೆ. ಎಲ್ಲಾ ಸಿನಿಮಾಗಳು ಇಲ್ಲಿಯೇ ಪ್ರದರ್ಶನ ಕಾಣಲಿದೆ. ಈಗಾಗಲೇ ಯಾವ ಸಿನಿಮಾ ಯಾವ ಸಮಯದಲ್ಲಿ ಪ್ರದರ್ಶನ ಕಾಣುತ್ತಿದೆ ಎನ್ನುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಏರಿಯಲ್​ ಬ್ಯಾನರ್​ ಡಿಸ್​ಪ್ಲೇ:

ಈ ಬಾರಿಯ ಬೆಂಗಳೂರು ಸಿನಿಮೋತ್ಸವಕ್ಕೆ ವಿಶೇಷ ರೀತಿಯಲ್ಲಿ ಏರಿಯಲ್​ ಬ್ಯಾನರ್​ ಡಿಸ್​ಪ್ಲೇ ಪ್ರದರ್ಶನ ಮಾಡಲಾಯಿತು.  ‘Taking The State To Newer Hights Welcome to BIFFES’ ಎಂಬ ಸಂದೇಶ ಹೊತ್ತ ವಿಮಾನ ಸಂಜೆ 4.30 ರಿಂದ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಹಾರಾಟ ನಡೆಸಿದೆ.

ಸಿಎಂ ಏನಂದ್ರು?

‘ಈ ದೇಶ ಬಲಿಯೋದಕ್ಕೆ ಹಾಗೂ ಬೆಳೆಯೋದಕ್ಕೆ ಕನ್ನಡ ಚಿತ್ರರಂಗದ ಅವಶ್ಯಕತೆ ಮುಖ್ಯವಾಗಿದೆ. ನನಗೆ ಬ್ಲಾಕ್ ಆ್ಯಂಡ್​ ವೈಟ್ ಸಿನಿಮಾಗಳೆ ತುಂಬಾ ಇಷ್ಟ. ಪುನೀತ್ ಸಣ್ಣ ವಯಸ್ಸಲ್ಲೆ ಸಾಧನೆ ಮಾಡಿದ್ದರು. ಸ್ವಾಮಿ ವಿವೇಕಾನಂದ ಅವರು ಕೂಡ ಸಣ್ಣ ವಯಸ್ಸಲ್ಲೇ ಸಾಧನೆ ಮಾಡಿದ್ದರು’ ಎಂದಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ: ಪಾದಯಾತ್ರೆಯಲ್ಲೂ ರಾರಾಜಿಸಿತು ಪುನೀತ್​ ಫೋಟೋ; ಎಂದೂ ಮರೆಯಾಗದು ಅಪ್ಪು ಮೇಲಿನ ಅಭಿಮಾನ

‘ಪೆದ್ರೂ’ ಚಿತ್ರಕ್ಕೆ ಬೆಂಗಳೂರು ಸಿನಿಮೋತ್ಸವದಲ್ಲಿ ಇಲ್ಲ ಮನ್ನಣೆ; ಬಹಿರಂಗ ಪತ್ರದಲ್ಲಿ ರಿಷಬ್​ ಶೆಟ್ಟಿ ಅಸಮಾಧಾನ

Published On - 5:44 pm, Thu, 3 March 22

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?