AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆದ ‘19.20.21’ ಸಿನಿಮಾ ಟೀಸರ್​; ಮತ್ತೆ ಗಂಭೀರ ವಿಷಯ ಹೇಳಲು ಬಂದ ಮಂಸೋರೆ

19.20.21 Kannada Movie: ‘19.20.21’ ಸಿನಿಮಾದ ಫಸ್ಟ್​ ಪೋಸ್ಟರ್​ ಬಿಡುಗಡೆ ಆದಾಗಲೇ ಸಿನಿಪ್ರಿಯರ ಮನದಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಟೀಸರ್​ನಿಂದಾಗಿ ಆ ನಿರೀಕ್ಷೆ ಡಬಲ್​ ಆಗಿದೆ.

ಗಮನ ಸೆಳೆದ ‘19.20.21’ ಸಿನಿಮಾ ಟೀಸರ್​; ಮತ್ತೆ ಗಂಭೀರ ವಿಷಯ ಹೇಳಲು ಬಂದ ಮಂಸೋರೆ
19.20.21 ಸಿನಿಮಾದ ದೃಶ್ಯ
TV9 Web
| Edited By: |

Updated on: Jan 20, 2023 | 10:01 PM

Share

ಕನ್ನಡದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘19.20.21’ (19.20.21 Kannada Movie) ಚಿತ್ರ ಕೂಡ ಪ್ರಮುಖವಾಗಿದೆ. ಶೀರ್ಷಿಕೆಯ ಕಾರಣದಿಂದಲೂ ಈ ಸಿನಿಮಾ ಕೌತುಕ ಮೂಡಿಸಿದೆ. ಈಗ ಈ ಚಿತ್ರದ ಟೀಸರ್​ ಬಿಡುಗಡೆ ಆಗಿದ್ದು, ಪ್ರೇಕ್ಷಕರ ಮನದಲ್ಲಿ ನಿರೀಕ್ಷೆ ಹೆಚ್ಚುವಂತಾಗಿದೆ. ‘ಲಹರಿ ಮ್ಯೂಸಿಕ್​’ ಮೂಲಕ ‘19.20.21’ ಚಿತ್ರದ ಟೀಸರ್​ (19.20.21 Teaser) ಬಿಡುಗಡೆ ಆಗಿದೆ. ಟೀಸರ್​ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರಕ್ಕೆ ನಿರ್ದೇಶಕ ಮಂಸೋರೆ (Mansore) ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಪ್ರತಿ ಸಿನಿಮಾದಲ್ಲೂ ಅವರು ಒಂದು ಗಂಭೀರವಾದ ವಿಚಾರವನ್ನು ಆಯ್ದುಕೊಳ್ಳುತ್ತಾರೆ. ‘19.20.21’ ಸಿನಿಮಾದಲ್ಲೂ ಅದು ಮುಂದುವರಿದಿದೆ ಎಂಬುದು ಟೀಸರ್​ ಮೂಲಕ ಖಚಿತವಾಗಿದೆ.

‘19.20.21’ ಸಿನಿಮಾದ ಫಸ್ಟ್​ ಪೋಸ್ಟರ್​ ಬಿಡುಗಡೆ ಆದಾಗಲೇ ಸಿನಿಪ್ರಿಯರ ಮನದಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಟೀಸರ್​ನಿಂದಾಗಿ ಆ ನಿರೀಕ್ಷೆ ಡಬಲ್​ ಆಗಿದೆ. ಕಾಡಿನ ಜನರ ಮೇಲೆ ನಡೆದ ದೌರ್ಜನ್ಯದ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದಕ್ಕೆ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಇದನ್ನು ನೋಡಿದ ಎಲ್ಲರೂ ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ‘ಈ ಚಿತ್ರಕ್ಕೆ ಖಂಡಿತ ರಾಷ್ಟ್ರ ಪ್ರಶಸ್ತಿ ಸಿಗಲಿದೆ. ಕನ್ನಡ ಚಿತ್ರರಂಗದಲ್ಲಿ ಇದು ಅತ್ಯುತ್ತಮ ಸಿನಿಮಾ ಆಗಲಿದೆ. ಟ್ರೇಲರ್​ಗಾಗಿ ಕಾಯುತ್ತಿದ್ದೇವೆ’ ಎಂಬ ಕಮೆಂಟ್​ಗಳು ಬಂದಿವೆ.

ಇದನ್ನೂ ಓದಿ
Image
‘777 ಚಾರ್ಲಿ’ ಸಿನಿಮಾಗೆ ಮಾತ್ರ ತೆರಿಗೆ ವಿನಾಯಿತಿ ಯಾಕೆ? ಬೊಮ್ಮಾಯಿ ಸರ್ಕಾರದ ಕಿವಿ ಹಿಂಡಿದ ಮಂಸೋರೆ
Image
ಬದುಕು ಬದಲಿಸಿದ ಹೆದ್ದಾರಿಯಿಂದಲೇ ಸಾವು; ಸಂಚಾರಿ ವಿಜಯ್ ನೆನೆದು ದುಃಖ ಹೊರಹಾಕಿದ ನಿರ್ದೇಶಕ ಮಂಸೋರೆ
Image
ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
Image
ಮಂಸೋರೆ ನಿರ್ದೇಶನದ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡಲಿದ್ದಾರಾ ಸಾಯಿ ಪಲ್ಲವಿ? ಇಲ್ಲಿದೆ ಅಸಲಿಯತ್ತು

ಇದನ್ನೂ ಓದಿ: ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಅವರು ‘ಹರಿವು’, ‘ನಾತಿಚರಾಮಿ’, ‘ಆಕ್ಟ್​ 1978’ ಸಿನಿಮಾಗಳ ಮೂಲಕ ತಮ್ಮ ಛಾಪು ಮೂಡಿಸಿದ್ದಾರೆ. ಈ ಮೂರೂ ಸಿನಿಮಾಗಳು ವಿಶೇಷ ರೀತಿಯಲ್ಲಿ ಗುರುತಿಸಿಕೊಂಡಿವೆ. ಈಗ ಅವರ ನಾಲ್ಕನೇ ಚಿತ್ರವಾಗಿ ‘19.20.21’ ಸಿನಿಮಾ ಮೂಡಿಬಂದಿದೆ. ‘ಡಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ದೇವರಾಜ್​ ಆರ್​. ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

‘19.20.21’ ಚಿತ್ರದಲ್ಲಿ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಶೃಂಗ ಬಿವಿ, ಬಾಲಾಜಿ ಮನೋಹರ್​, ಎಂ.ಡಿ. ಪಲ್ಲವಿ, ರಾಜೇಶ್​ ನಟರಂಗ್​, ಅವಿನಾಶ್​, ಗಿರಿರಾಜ್​, ಕೃಷ್ಣ ಹೆಬ್ಬಾಳೆ ಮುಂತಾದವರು ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಜನವರಿ 27ರಂದು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಲಿದೆ. ಹಾಡುಗಳಿಗೆ ಬಿಂದು ಮಾಲಿನಿ ಸಂಗೀತ ನೀಡಿದ್ದಾರೆ. ಕಿರಣ್​ ಕಾವೇರಪ್ಪ ಸಾಹಿತ್ಯ ಬರೆದಿದ್ದಾರೆ. ಶಿವ ಬಿ.ಕೆ. ಛಾಯಾಗ್ರಹಣ, ಸುರೇಶ್​ ಆರ್ಮುಗಂ ಸಂಕಲನ, ಸಂತೋಷ್​ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ