AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

23ನೇ ವರ್ಷದ ‘ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ’ ಪ್ರಕಟ; ಈ ಬಾರಿ ಯಾರಿಗೆಲ್ಲ ಅವಾರ್ಡ್​?

11 ವಿಭಾಗಗಳಲ್ಲಿ ‘ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ’ ನೀಡಲಾಗುವುದು. ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ ಹಲವರನ್ನು ಸನ್ಮಾನಿಸಲಾಗುವುದು. ಜನವರಿ 27ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಕಲಾವಿದರ ಸಂಘದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಗಳ ವಿವರ ಇಲ್ಲಿದೆ..

23ನೇ ವರ್ಷದ ‘ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ’ ಪ್ರಕಟ; ಈ ಬಾರಿ ಯಾರಿಗೆಲ್ಲ ಅವಾರ್ಡ್​?
ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಗೆ ಭಾಜನರಾದವರು
ಮದನ್​ ಕುಮಾರ್​
|

Updated on: Jan 11, 2024 | 12:14 PM

Share

ಕನ್ನಡ ಚಿತ್ರರಂಗದ (Sandalwood) ಹಿರಿಯ ಪಿಆರ್​ಒ ಆಗಿದ್ದ ಡಿ.ವಿ. ಸುಧೀಂದ್ರ ಅವರು ‘ಶ್ರೀ ರಾಘವೇಂದ್ರ ಚಿತ್ರವಾಣಿ’ ಸಂಸ್ಥೆ ಆರಂಭಿಸಿ 25 ವರ್ಷಗಳು ಕಳೆದ ಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಪತ್ರಕರ್ತರಿಗೆ ಪ್ರಶಸ್ತಿಗಳನ್ನು ನೀಡಲು ಆರಂಭಿಸಿದರು. ಈಗ ಅದನ್ನು ಅವರ ಕುಟುಂಬದವರು ಮುಂದುವರಿಸಿಕೊಂಡು ಬಂದಿದ್ದಾರೆ. 23ನೇ ವರ್ಷದ ‘ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ’ (Raghavendra Chitravani Award) ಪ್ರಕಟ ಆಗಿದೆ. ಜನವರಿ 27ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇರುವ ಕಲಾವಿದರ ಸಂಘದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಅದೇ ದಿನ ಈ ಸಂಸ್ಥೆಯ 48ನೇ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ.

11 ವಿಭಾಗಗಳಲ್ಲಿ ‘ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ’ ನೀಡಲಾಗುವುದು. ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ ಹಲವರನ್ನು ಸನ್ಮಾನಿಸಲಾಗುವುದು. ಈ ಬಾರಿ ನಿರ್ಮಾಪಕ ರಾಮು ಅವರಿಗೆ ಮರಣೋತ್ತರವಾಗಿ ‘ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ’ ನೀಡಲಾಗುತ್ತಿದೆ. ಹಿರಿಯ ಚಲನಚಿತ್ರ ಪತ್ರಕರ್ತ ಮುರಳಿಧರ ಖಜಾನೆ ಕೂಡ ಈ ಪ್ರಶಸ್ತಿಗೆ ಭಾಜನರಾಗುತ್ತಿದ್ದಾರೆ.

ಖ್ಯಾತ ಹಿನ್ನಲೆ ಗಾಯಕ ಹೇಮಂತ್ ಕುಮಾರ್ ಅವರಿಗೆ ‘ಡಾ. ರಾಜ್‌ಕುಮಾರ್ ಪ್ರಶಸ್ತಿ’, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ‘ಯಜಮಾನ’ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ, ಜಯಲಕ್ಷ್ಮಿ ಪಿ (ದುಬೈ) ಅವರಿಗೆ ‘ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ’ ನೀಡಲಾಗುತ್ತಿದೆ. ‘ಹೊಂದಿಸಿ ಬರೆಯಿರಿ’ ಚಿತ್ರಕ್ಕಾಗಿ ಜೋ ಕೋಸ್ಟ ಅವರಿಗೆ ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿ ಘೋಷಿಸಲಾಗಿದೆ.

ಇದನ್ನೂ ಓದಿ: ‘ವರ್ಷದ ಭಾರತೀಯ 2023’: ಕುಟುಂಬದ ಕಡುಕಷ್ಟದ ಬಳಿಕ ಶಾರುಖ್​ ಖಾನ್​ಗೆ ಸಿಕ್ತು ಪ್ರಶಸ್ತಿ

‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಾಗಿ ಹೇಮಂತ್ ರಾವ್ ಅವರಿಗೆ ‘ಅತ್ಯುತ್ತಮ ಕಥಾಲೇಖಕರು’ ಪ್ರಶಸ್ತಿ ಸಿಗಲಿದೆ. ‘ವಿರಾಟಪುರದ ವಿರಾಗಿ’ ಚಿತ್ರಕ್ಕಾಗಿ ಬಿ.ಎಸ್. ಲಿಂಗದೇವರು ಮತ್ತು ಶರಣು ಹುಲ್ಲೂರು ಅವರು ‘ಅತ್ಯುತ್ತಮ ಸಂಭಾಷಣೆ’ ಪ್ರಶಸ್ತಿ ಪಡೆಯಲಿದ್ದಾರೆ. ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ ‘ಆಚಾರ್​ ಆ್ಯಂಡ್​ ಕೋ’ ಸಿನಿಮಾದ ನಿರ್ದೇಶಕಿ ಸಿಂಧು ಶ್ರೀನಿವಾಸಮೂರ್ತಿ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇದನ್ನೂ ಓದಿ: Golden Globes 2024: 81ನೇ ಸಾಲಿನ ‘ಗೋಲ್ಡನ್​ ಗ್ಲೋಬ್ಸ್’ ಅವಾರ್ಡ್​; ಇಲ್ಲಿದೆ ವಿಜೇತರ ಪಟ್ಟಿ

‘ಟಗರು ಪಲ್ಯ’ ಸಿನಿಮಾದ ‘ಸಂಬಂಜ ಅನ್ನೋದು ದೊಡ್ಡದು ಕನಾ..’ ಗೀತರಚನೆಗಾಗಿ ಡಾಲಿ ಧನಂಜಯ್​ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಹಿರಿಯ ಪೋಷಕ ಕಲಾವಿದ ಸುಂದರ್​ ರಾಜ್ ಅವರಿಗೆ ‘ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ’ ಸಿಗಲಿದೆ. ‘ರಾಷ್ಟ್ರ ಪ್ರಶಸ್ತಿ’ ಪುರಸ್ಕೃತರಾದ ಅನಿರುದ್ಧ್ ಜತ್ಕರ್, ಬಿ.ಎನ್. ಸುಬ್ರಹ್ಮಣ್ಯ ಮತ್ತು ರಕ್ಷಿತ್ ಶೆಟ್ಟಿ ಅವರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್