Puneeth Rajkumar: ಸುಮಾರು 25 ಲಕ್ಷ ಜನರಿಂದ ಪುನೀತ್​ ಅಂತಿಮ ದರ್ಶನ; ಎಲ್ಲರ ಸಹಕಾರಕ್ಕೆ ಸಿಎಂ ಬೊಮ್ಮಾಯಿ ಕೃತಜ್ಞತೆ

CM Basavaraj Bommai: ಸುಮಾರು 25 ಲಕ್ಷ ಅಭಿಮಾನಿಗಳು ಆಗಮಿಸಿ ಪುನೀತ್​ಗೆ ನಮನ ಸಲ್ಲಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ.

Puneeth Rajkumar: ಸುಮಾರು 25 ಲಕ್ಷ ಜನರಿಂದ ಪುನೀತ್​ ಅಂತಿಮ ದರ್ಶನ; ಎಲ್ಲರ ಸಹಕಾರಕ್ಕೆ ಸಿಎಂ ಬೊಮ್ಮಾಯಿ ಕೃತಜ್ಞತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Oct 31, 2021 | 2:58 PM

ಪುನೀತ್ ಅಂತಿಮ ದರ್ಶನ, ಅಂತ್ಯಕ್ರಿಯೆಯನ್ನು ಸಣ್ಣ ಪ್ರಮಾದವೂ ಆಗದಂತೆ ಪೊಲೀಸರು, ಕಂದಾಯ ಇಲಾಖೆಯ ಅಧಿಕಾರಿಗಳು, ಬಿಬಿಎಂಪಿಯವರು ಶ್ರದ್ಧಾಪೂರ್ವಕವಾಗಿ ನಿರ್ವಹಿಸಿದ್ದಾರೆ. ಸಹಕಾರ ಕೊಟ್ಟಿರುವ ಎಲ್ಲರಿಗೂ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನುಡಿದಿದ್ದಾರೆ. ಡಾ.ರಾಜ್ ಕುಟುಂಬಸ್ಥರು ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ. ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಹಾಗೂ ಅವರ ಕುಟುಂಬದವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಕರುನಾಡಿನ ಜನರು ಶಾಂತಿಯುತವಾಗಿ ಸಹಕರಿಸಿದ್ದಾರೆ. ಅಧಿಕಾರಿಗಳು ತಮ್ಮ ಕರ್ತವ್ಯ ಉತ್ತಮವಾಗಿ ನಿಭಾಯಿಸಿದ್ದಾರೆ. ಅದಕ್ಕೆ ಶಿವರಾಜ್‌ಕುಮಾರ್ ಧನ್ಯವಾದಗಳನ್ನು ಹೇಳಿದ್ದಾರೆ. ಇದು ಅವರ ಹಾಗೂ ದೊಡ್ಮನೆ ದೊಡ್ಡಗುಣ ತೋರಿಸುತ್ತದೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುಮಾರು 25 ಲಕ್ಷ ಜನರಿಂದ ಅಂತಿಮ ದರ್ಶನ; ಗೃಹ ಸಚಿವ ಆರಗ ಜ್ಞಾನೇಂದ್ರ ಸುಮಾರು 25 ಲಕ್ಷ ಜನರು ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಅವರು ಮಾತನಾಡಿದರು. ಇದೇ ವೇಳೆ ಅವರು ಅಂತ್ಯಕ್ರಿಯೆಗೆ ಸಹಕಾರ ನೀಡಿದ ಅಧಿಕಾರಿಗಳು, ಅಭಿಮಾನಿಗಳು ಹಾಗೂ ಭದ್ರತಾ ಪಡೆಯ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ. ‘‘ಶಾಂತಿ ಸುವ್ಯವಸ್ಥೆ ಕಾಪಾಡಿದವರಿಗೆ ಅಭಿನಂದನೆ ಸಲ್ಲಿಸುವೆ. ಪೊಲೀಸರ ಶ್ರಮ ಬಹಳ ಇದೆ. ಬೆಂಗಳೂರಿನಲ್ಲಿ ಭದ್ರತೆಗೆ 20 ಸಾವಿರ ಪೊಲೀಸರು, ಜಿಲ್ಲೆಗಳಿಂದ ಒಂದೂವರೆ ಸಾವಿರ ಪೊಲೀಸರು, ಕೇಂದ್ರ ಪಡೆ, 50 ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿತ್ತು. ಹಗಲು ರಾತ್ರಿ ಎನ್ನದೆ ಎಲ್ಲರೂ ನಿದ್ದೆಯನ್ನು ಬಿಟ್ಟು ಶ್ರಮಿಸಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವರು ಜತೆಯಲ್ಲಿದ್ದು ಸಹಕರಿಸಿದ್ದಾರೆ. ಅಭಿಮಾನಿಗಳು ಶಾಂತಿಯಿಂದ, ಶಿಸ್ತಿನಿಂದ ಸಹಕರಿಸಿದ್ದಾರೆ. ಡಾ.ರಾಜ್ ಕುಟುಂಬವೂ ಸರ್ಕಾರಕ್ಕೆ ಸಹಕಾರ ನೀಡಿದೆ. ಮಾಧ್ಯಮಗಳು ಕೂಡ ಉತ್ತಮ ಕೆಲಸವನ್ನು ಮಾಡಿವೆ’’ ಎಂದು ಆರಗ ನುಡಿದಿದ್ಧಾರೆ.

ಭದ್ರತಾ ಸಿಬ್ಬಂದಿಯ ಕೈಕುಲುಕಿ ಪ್ರಶಂಸಿಸಿದ ಕಮಲ್ ಪಂತ್ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ವೇಳೆ ಭದ್ರತೆ ಒದಗಿಸಿ, ಸುಸೂತ್ರವಾಗಿ ನಡೆಯುವಂತೆ ಮಾಡಿದ ಪೊಲೀಸ್ ಸಿಬ್ಬಂದಿಗೆ ಕೈಕುಲುಕಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹಗಲು-ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

ವಿದೇಶಿ ನ್ಯೂಸ್​ ಚಾನೆಲ್​ಗಳಲ್ಲಿ ಪುನೀತ್​ ನಿಧನದ ಸುದ್ದಿ; ಸೌತ್​ ಕೊರಿಯಾದಲ್ಲೂ ಅಭಿಮಾನದ ಹೊಳೆ

ಇಬ್ಬರಿಗೆ ಪುನೀತ್ ರಾಜ್​ಕುಮಾರ್ ಕಣ್ಣುಗಳು ಅಳವಡಿಕೆ; ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

Published On - 2:31 pm, Sun, 31 October 21

ಟೀಂ ಇಂಡಿಯಾದ ನೂತನ ಏಕದಿನ ಜೆರ್ಸಿ ಹೇಗಿದೆ ಗೊತ್ತಾ?
ಟೀಂ ಇಂಡಿಯಾದ ನೂತನ ಏಕದಿನ ಜೆರ್ಸಿ ಹೇಗಿದೆ ಗೊತ್ತಾ?
ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ
ಮಂಜು ವಿರುದ್ಧ ತಂತ್ರ ರೂಪಿಸಿದ ರಜತ್, ತ್ರಿವಿಕ್ರಮ್; ಸಾಥ್ ಕೊಟ್ಟ ಭವ್ಯಾ
ಮಂಜು ವಿರುದ್ಧ ತಂತ್ರ ರೂಪಿಸಿದ ರಜತ್, ತ್ರಿವಿಕ್ರಮ್; ಸಾಥ್ ಕೊಟ್ಟ ಭವ್ಯಾ
ಸಾಲ ಸಿಗದಿದ್ದರೆ ರೈತ ಸಂಕಷ್ಟ ಮತ್ತು ಶೋಷಣೆಗೆ ಒಳಗಾಗುತ್ತಾನೆ: ಸಿದ್ದರಾಮಯ್ಯ
ಸಾಲ ಸಿಗದಿದ್ದರೆ ರೈತ ಸಂಕಷ್ಟ ಮತ್ತು ಶೋಷಣೆಗೆ ಒಳಗಾಗುತ್ತಾನೆ: ಸಿದ್ದರಾಮಯ್ಯ