ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ದರ್ಶನ್​ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್​, ಮೊಬೈಲ್ ಮುಂತಾದ್ದನ್ನು ನೀಡಲಾಗಿದೆ. ಇದರಿಂದ ಜೈಲಿನ ನಿಯಮಗಳು ಉಲ್ಲಂಘನೆ ಆಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಎಫ್​ಐಆರ್​ ದಾಖಲಾಗಿದ್ದ, ಎಲ್ಲದರಲ್ಲಿಯೂ ದರ್ಶನ್​ ಆರೋಪಿ ಆಗಿದ್ದಾರೆ.

ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು
ಜೈಲಿನಲ್ಲಿ ಸಹಚರರ ಜೊತೆ ದರ್ಶನ್​
Edited By:

Updated on: Aug 26, 2024 | 2:54 PM

ಸ್ಯಾಂಡಲ್​ವುಡ್​ ನಟ ದರ್ಶನ್​ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ಬಗೆಬಗೆಯ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್​​ಐಆರ್ ದಾಖಲಾಗಿದೆ. ಈ ಮೂರೂ ಎಫ್​ಐಆರ್​ಗಳಲ್ಲಿ ದರ್ಶನ್​ ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಸಂಕಷ್ಟ ಹೆಚ್ಚಾಗಿದೆ.

ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್​ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ
ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ಆಗಿದೆ.

ಇದನ್ನೂ ಓದಿ: ಜೈಲಿಂದ ದರ್ಶನ್ ವಿಡಿಯೋ ಕಾಲ್ ಮಾಡಿದ್ದು ಕೂಡ ರೌಡಿಗಳಿಗೆ; ಸ್ವಲ್ಪವೂ ಬದಲಾಗಿಲ್ಲ ದಾಸ

ಆರೋಪಿ ದರ್ಶನ್​ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್​​ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್​​ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ಎಫ್​​ಐಆರ್​ಗಳಲ್ಲೂ ಕೂಡ ದರ್ಶನ್ ಆರೋಪಿ ಆಗಿದ್ದಾರೆ. ಇದರಿಂದ ಅವರಿಗೆ ಜಾಮೀನು ಪಡೆಯುವಲ್ಲಿ ಸಂಕಷ್ಟ ಎದುರಾಗಲಿದೆ.

ಇದನ್ನೂ ಓದಿ: ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತನಿಂದ ಅಶ್ಲೀಲ ಸಂದೇಶ ಬಂದಿತ್ತು. ಆ ಕಾರಣಕ್ಕಾಗಿ ಆತನಿಗೆ ಬೆಂಗಳೂರಿನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿಸಿದ ಆರೋಪ ದರ್ಶನ್​ ಹಾಗೂ ಸಹಚರರ ಮೇಲಿದೆ. ಇದೇ ಕೇಸ್​ನಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಈಗ ಜೈಲಿನಲ್ಲಿ ಅವರು ಪ್ರಭಾವ ಬಳಸಿ ನಿಯಮಗಳನ್ನು ಮುರಿದಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ಜೈಲಿನ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಅನುಮಾನ ಮೂಡುವ ರೀತಿಯಲ್ಲಿ ನಟನ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us