
ಕ್ರಿಸ್ಮಸ್ ಪ್ರಯುಕ್ತ ರಿಲೀಸ್ ಆದ ‘45’ ಹಾಗೂ ‘ಮಾರ್ಕ್’ ಸಿನಿಮಾಗಳು (Mark Movie) ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಿವೆ. ಇಂದು ವಾರದ ದಿನ ಆಗಿರುವುದರಿಂದ, ಯಾವುದೇ ರಜೆ ಇಲ್ಲದಿರುವುದರಿಂದ ಕಲೆಕ್ಷನ್ ಕೊಂಚ ತಗ್ಗಬಹುದು. ಆದರೆ, ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ.
‘ಮ್ಯಾಕ್ಸ್’ ಆದ ಬಳಿಕ ‘ಮಾರ್ಕ್’ ಸಿನಿಮಾ ರಿಲೀಸ್ ಆಯಿತು. ಕಳೆದ ವರ್ಷ ಡಿಸೆಂಬರ್ 25ರಂದು ‘ಮ್ಯಾಕ್ಸ್’ ಬಂದಿದ್ದರೆ ಈ ವರ್ಷ ಅದೇ ದಿನಾಂಕದಂದು ‘ಮಾರ್ಕ್’ ಬಂದಿದೆ. ಈ ಚಿತ್ರ ‘ಮ್ಯಾಕ್ಸ್’ ಸಿನಿಮಾ ಶೇಡ್ನಲ್ಲಿ ಇದೆ ಎಂಬ ಅಭಿಪ್ರಾಯವನ್ನು ಅನೇಕರು ಹೊರ ಹಾಕಿದ್ದಾರೆ. ಎರಡು ದಿನದಲ್ಲಿ ನಡೆಯೋ ಕಥೆ ಆಗಿರುವುದರಿಂದ ಸಿನಿಮಾ ವೇಗವಾಗಿ ಸಾಗುತ್ತದೆ. ಈ ಚಿತ್ರ ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಿದೆ.
‘ಮಾರ್ಕ್’ ಸಿನಿಮಾ ಮೊದಲ ದಿನ 6.28 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು sacnilk ವರದಿ ಮಾಡಿದೆ. ಮೊದಲ ದಿನವೇ ಸಿನಿಮಾ ಅಬ್ಬರಿಸಿದಂತಾಗಿದೆ. ಈ ಚಿತ್ರಕ್ಕೆ ಈಗಾಗಲೇ ಎಲ್ಲ ಕಡೆಗಳಲ್ಲಿ ಪಾಸಿಟಿವ್ ವಿಮರ್ಶೆಗಳು ಸಿಕ್ಕಿದ್ದು ಸಿನಿಮಾಗೆ ಸಹಕಾರಿ ಆಗುತ್ತಿದೆ. ಈ ಚಿತ್ರಕ್ಕೆ ಸುದೀಪ್ ಹೀರೋ. ತಮಿಳು ನಿರ್ದೇಶಕ ವಿಜಯ್ ಕಾರ್ತಿಕೇಯನ್ ನಿರ್ದೇಶನ ಸಿನಿಮಾಗೆ ಇದೆ.
45 ಸಿನಿಮಾ ಕೂಡ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ಇದು ಮಲ್ಟಿ ಸ್ಟಾರರ್ ಚಿತ್ರ. ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್ಕುಮಾರ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಕೂಡ ಮೊದಲ ದಿನ ಒಳ್ಳೆಯ ಓಪನಿಂಗ್ ಪಡೆದಿದೆ.
ಇದನ್ನೂ ಓದಿ: ‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್ನಿಂದ ಆರ್ಡರ್ ತಂದ ‘45’, ‘ಮಾರ್ಕ್’
ಈ ಸಿನಿಮಾದ ಮೊದಲ ದಿನದ ಗಳಿಕೆ ಬಗ್ಗೆ sacnilk ಲೆಕ್ಕ ಕೊಟ್ಟಿದೆ. ಈ ಚಿತ್ರದ ಮೊದಲ ದಿನದ ಕಲೆಕ್ಷನ್ 4.25 ಕೋಟಿ ರೂಪಾಯಿ ಎನ್ನಲಾಗಿದೆ. ಪ್ರೀಮೀಯರ್ ಶೋಗಳ ಲೆಕ್ಕವೂ ಸೇರಿದರೆ 5 ಕೋಟಿ ರೂಪಾಯಿ ದಾಟಲಿದೆ. ಈ ಸಿನಿಮಾ ಅಭಿಮಾನಿಗಳು ಕೈ ಹಿಡಿಯುವ ಲಕ್ಷಣ ಗೋಚರವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.