
‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ.
ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಸಾವು ಹಾಗೂ ಬದುಕಿನ ನಡುವಿನ ಕಥೆಯನ್ನು ಹೇಳಲಾಗಿದೆ. ಈ ಚಿತ್ರ ನೋಡಿದ ಅನೇಕರು ಮೆಚ್ಚಿಗೆ ಸೂಚಿಸುತ್ತಿದ್ದಾರೆ. ಸಿನಿಮಾದ ಗ್ರಾಫಿಕ್ಸ್ ತುಂಬಾನೇ ಇಷ್ಟ ಆಯಿತು ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಚಿತ್ರದ ಥೀಮ್ನ ಇಷ್ಟಪಟ್ಟಿದ್ದಾರೆ.
‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್ಸ್ಪೇಸ್ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.
ಇದನ್ನೂ ಓದಿ: ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ
‘45’ ಸಿನಿಮಾದಲ್ಲಿ ಶಿವರಾಜ್ಕುಮಾರ್, ರಾಜ್ ಹಾಗೂ ಉಪ್ಪಿ ಜೊತೆ ಪ್ರಮೋದ್ ಶೆಟ್ಟಿ, ಕೌಸ್ತುಭಾ ಮಣಿ ಮೊದಲಾದವರು ನಟಿಸಿದ್ದಾರೆ. ಗರುಡ ಪುರಾಣದ ಕಥೆಯ ಉಲ್ಲೇಖವನ್ನು ಚಿತ್ರದಲ್ಲಿ ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.