
ಹೈದರಾಬಾದ್: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಪವನ್ ಕಲ್ಯಾಣ್ ಅಭಿಮಾನಿಗಳು ಮೃತಪಟ್ಟಿರುವ ದುರ್ಘಟನೆ ತೆಲಂಗಾಣದ ವರಂಗಲ್ ಜಿಲ್ಲೆಯ ಪಸರಗೊಂಡ ಗ್ರಾಮದ ಬಳಿ ಸಂಭವಿಸಿದೆ. ಪ್ರವೀಣ್, ರಾಕೇಶ್, ರೋಹಿತ್, ಪವನ್, ರಹೀಂ ಮೃತ ದುರ್ದೈವಿಗಳು.
ಜನಸೇನಾ ಅಧ್ಯಕ್ಷ, ನಟ ಪವನ್ ಕಲ್ಯಾಣ್ ಜನ್ಮದಿನದ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಕಾರ್ಯಕ್ರಮ ಸಮಾರಂಭದ ಸಿದ್ಧತೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಮರುಳು ಲಾರಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಐವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.