666 ಆಪರೇಷನ್ ಡ್ರೀಮ್ ಥಿಯೇಟರ್‌: ಶಿವರಾಜ್‌ಕುಮಾರ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

‘666 ಆಪರೇಷನ್ ಡ್ರೀಮ್ ಥಿಯೇಟರ್‌’ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಹಾಗೂ ಡಾಲಿ ಧನಂಜಯ ಅವರು ಪ್ರಮುಖ ಪಾತಗಳನ್ನು ಮಾಡುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾಗೆ ಚಿತ್ರೀಕರಣ ಪ್ರಾರಂಭ ಆಗಲಿದೆ. ದೊಡ್ಡ ಬಜೆಟ್‌ನಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗುತ್ತಿದೆ. ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆ ಮಾಡುವ ಪ್ಲ್ಯಾನ್ ಇದೆ.

666 ಆಪರೇಷನ್ ಡ್ರೀಮ್ ಥಿಯೇಟರ್‌: ಶಿವರಾಜ್‌ಕುಮಾರ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
Shiva Rajkumar

Updated on: Jul 09, 2025 | 5:04 PM

ಡಾಲಿ ಧನಂಜಯ, ಶಿವರಾಜ್​ಕುಮಾರ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ (666 Operation Dream Theatre) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಿಂದ ಇತ್ತೀಚೆಗಷ್ಟೇ ಡಾಲಿ ಧನಂಜಯ ಅವರ ಎರಡು ಲುಕ್‌ ಬಿಡುಗಡೆ ಮಾಡಲಾಗಿತ್ತು. ಆ ಪೋಸ್ಟರ್​ಗಳನ್ನು ನೋಡಿದ ಪ್ರೇಕ್ಷಕರ ನಿರೀಕ್ಷೆ ಜಾಸ್ತಿ ಆಗಿತ್ತು. ಈಗ ಈ ಸಿನಿಮಾದಿಂದ ಶಿವರಾಜ್​ಕುಮಾರ್ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಶಿವರಾಜ್​ಕುಮಾರ್ (Shivarajkumar) ಅವರು ಹೊಸ ಗೆಟಪ್ ಧರಿಸಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈ ಮೂಲಕ ಕಾಣಿಸಿದೆ.

‘ಡ್ರೀಮ್ ಥಿಯೇಟರ್‌ಗೆ ಒಬ್ನೇ ರಾಜ’ ಎಂಬ ಕ್ಯಾಪ್ಷನ್​ನೊಂದಿಗೆ ಶಿವರಾಜ್​ಕುಮಾರ್ ಅವರ ಈ ಹೊಸ ಪೋಸ್ಟರ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಶಿವಣ್ಣ ಅವರ ಈ ಗೆಟಪ್‌ ರೆಟ್ರೋ ಶೈಲಿಯಲ್ಲಿದೆ. ಸೂಟ್‌ ಧರಿಸಿ, ಕೈಯಲ್ಲಿ ರಿವಾಲ್ವರ್‌ ಹಿಡಿದು, ತೀಕ್ಷ್ಣ ನೋಟ ಬೀರುತ್ತಾ ಅವರು ಹೆಜ್ಜೆ ಹಾಕುತ್ತಿರುವ ಪೋಸ್ ಈ ಪೋಸ್ಟರ್​ನಲ್ಲಿದೆ.

ಈ ಲುಕ್ ನೋಡುತ್ತಿದ್ದರೆ ಡಾ. ರಾಜ್​ಕುಮಾರ್ ಅವರ ಸ್ಪೈ ಸಿನಿಮಾಗಳು ನೆನಪಾಗುತ್ತವೆ. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ ಎಂಬ ಸುಳಿವನ್ನು ಈ ಫೊಸ್ಟರ್ ಮೂಲಕ ನೀಡಲಾಗಿದೆ. ಶಿವಣ್ಣ ಪ್ರತಿ ಚಿತ್ರದಲ್ಲೂ ಹೊಸತನದ ಪಾತ್ರಗಳನ್ನು ಪ್ರಯತ್ನಿಸುತ್ತಾರೆ. ಆ ಸಾಲಿಗೆ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಕೂಡ ಸೇರ್ಪಡೆ ಆಗುತ್ತಿದೆ.

‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ಶಿವಣ್ಣ ಅವರ ಪಾತ್ರವು ಪ್ರೇಕ್ಷಕರಿಗೆ ಮರೆಯಲಾಗದ ಅನುಭವ ನೀಡಲಿದೆ ಎಂದು ಚಿತ್ರತಂಡ ಹೇಳಿದೆ. ಈ ಸಿನಿಮಾದಲ್ಲಿ ರೆಟ್ರೋ ಕಥೆ ಇರಲಿದೆ. ಹೇಮಂತ್ ಎಂ. ರಾವ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಡಾ. ವೈಶಾಕ್ ಜೆ. ಗೌಡ ಅವರು ‘ವೈಶಾಕ್ ಜೆ. ಫಿಲ್ಮ್ಸ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: ಶಿವರಾಜ್​ಕುಮಾರ್-ಗೀತಾ ಪ್ರೇಮ ನೋಡಿ ಆ ವ್ಯಕ್ತಿಗೆ ನಿಜಕ್ಕೂ ಶಾಕ್ ಆಗಿತ್ತು..

ಈ ಸಿನಿಮಾಗೆ ಚರಣ್ ರಾಜ್ ಅವರು ಸಂಗೀತ ನೀಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಶ್ವಾಸ್ ಕಶ್ಯಪ್ ಅವರು ವಸ್ತ್ರ ವಿನ್ಯಾಸ ಮಾಡಿದ್ದಾರೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ ಮತ್ತು ಶಿವರಾಜ್​ಕುಮಾರ್ ಮಾತ್ರವಲ್ಲದೇ ಇನ್ನೂ ಯಾರೆಲ್ಲ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಶೀಘ್ರದಲ್ಲೇ ಚಿತ್ರತಂಡ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us