AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರು ಮರಿಗಳಿಗೆ ಜನ್ಮ ನೀಡಿದ 777 ಚಾರ್ಲಿ; ಲೈವ್​ ಬಂದು ಸಿಹಿ ಸುದ್ದಿ ನೀಡಿದ ರಕ್ಷಿತ್​ ಶೆಟ್ಟಿ

ಚಾರ್ಲಿ ಮರಿ ಹಾಕುವ ಸಾಧ್ಯತೆಗಳು ಕಡಿಮೆ ಇತ್ತು. ಆ ಬಗ್ಗೆ ರಕ್ಷಿತ್​ ಶೆಟ್ಟಿ ಅವರು ವಿಚಾರಿಸುತ್ತಲೇ ಇದ್ದರು. ಈಗ 6 ಮರಿಗಳಿಗೆ ಚಾರ್ಲಿ ಜನ್ಮ ನೀಡಿದೆ. ‘777 ಚಾರ್ಲಿ ಸಿನಿಮಾದ ಜರ್ನಿ ಸಂಪೂರ್ಣ ಆದಂತೆ ಅನಿಸುತ್ತಿದೆ. ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು’ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ. ಮರಿಗಳನ್ನು ನೋಡಲು ಅವರು ಮೈಸೂರಿಗೆ ತೆರಳಿದ್ದಾರೆ.

ಆರು ಮರಿಗಳಿಗೆ ಜನ್ಮ ನೀಡಿದ 777 ಚಾರ್ಲಿ; ಲೈವ್​ ಬಂದು ಸಿಹಿ ಸುದ್ದಿ ನೀಡಿದ ರಕ್ಷಿತ್​ ಶೆಟ್ಟಿ
ಚಾರ್ಲಿ, ರಕ್ಷಿತ್​ ಶೆಟ್ಟಿ
ಮದನ್​ ಕುಮಾರ್​
|

Updated on:May 15, 2024 | 9:08 PM

Share

ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಸಡನ್​ ಆಗಿ ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿದ್ದಾರೆ. ಯಾವುದೇ ಮುನ್ಸೂಚನೆ ನೀಡದೇ ಅವರು ಅಭಿಮಾನಿಗಳ ಎದುರು ಬಂದು ಒಂದು ಗುಡ್​ ನ್ಯೂಸ್​ ಹಂಚಿಕೊಂಡಿದ್ದಾರೆ. ಅಂದಹಾಗೆ, ಈ ಖುಷಿಯ ಸಮಾಚಾರ ಚಾರ್ಲಿ ಶ್ವಾನಕ್ಕೆ ಸಂಬಂಧಿಸಿದ್ದು. ‘777 ಚಾರ್ಲಿ’ (777 Charlie) ಸಿನಿಮಾದಲ್ಲಿ ನಟಿಸಿದ ಚಾರ್ಲಿ ಈಗ ತಾಯಿ ಆಗಿದೆ. 6 ಮರಿಗಳಿಗೆ ಜನ್ಮ ನೀಡಿದೆ. ಚಾರ್ಲಿ (777 Charlie Dog) ಮತ್ತು ಅದರ ಮರಿಗಳನ್ನು ನೋಡಲು ರಕ್ಷಿತ್​ ಶೆಟ್ಟಿ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿಂದ ಅವರು ಬಹಳ ಖುಷಿಯಲ್ಲಿ ಲೈವ್​ ಬಂದಿದ್ದಾರೆ.

2022ರ ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ ಬಿಡುಗಡೆ ಆಗಿತ್ತು. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲಿ ಈ ಸಿನಿಮಾ ತೆರೆಕಂಡು ಜನಮೆಚ್ಚುಗೆ ಗಳಿಸಿತ್ತು. ಸಿನಿಮಾದ ಗೆಲುವಿನಲ್ಲಿ ಚಾರ್ಲಿ ಮುಖ್ಯ ಪಾತ್ರ ವಹಿಸಿತ್ತು. ಚಾರ್ಲಿಯ ನಟನೆಗೆ ಶ್ವಾನಪ್ರಿಯರು ಮೆಚ್ಚುಗೆ ಸೂಚಿಸಿದ್ದರು. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮರಿಗಳಿಗೆ ಚಾರ್ಲಿ ಜನ್ಮ ನೀಡಿತ್ತು. ಆದರೆ ರಿಯಲ್​ ಲೈಫ್​ನಲ್ಲಿ ಇಷ್ಟು ವರ್ಷ ಕಳೆದರೂ ಚಾರ್ಲಿಗೆ ತಾಯಿ ಆಗುವ ಸಮಯ ಬಂದಿರಲಿಲ್ಲ. ಈಗ ಅದು ನೆರವೇರಿದೆ.

‘ಲೈವ್​ ಬರಲು ಒಂದು ಕಾರಣ ಇದೆ. 777 ಚಾರ್ಲಿ ಸಿನಿಮಾ ಬಿಡುಗಡೆ ಆಗಿ ಬಹುತೇಕ 2 ವರ್ಷ ಆಗುತ್ತಾ ಬಂತು. ಸಿನಿಮಾ ಬಿಡುಗಡೆ ಆಗಿ ಇಷ್ಟು ಸಮಯ ಆದರೂ ನಮ್ಮ ಮನದಲ್ಲಿ ಒಂದು ವಿಚಾರ ಇತ್ತು. ಒಂದು ವೇಳೆ ಚಾರ್ಲಿ ತಾಯಿಯಾದರೆ ಈ ಜರ್ನಿಗೆ ಒಂದು ಸರ್ಕಲ್​ ಪೂರ್ಣ ಆಗತ್ತೆ. ಅದನ್ನು ಕಿರಣ್​ ರಾಜ್​ ಅವರು ಮೊದಲೇ ಹೇಳಿದ್ದರು. ಅದನ್ನು ಕೇಳಿದ ಬಳಿಕ ಚಾರ್ಲಿ ತಾಯಿ ಆಗಬೇಕು ಅಂತ ನಾನು ಕೂಡ ಕಾದಿದ್ದೆ. ಅದರ ಬಗ್ಗೆ ನಾನು ವಿಚಾರಿಸುತ್ತಲೇ ಇದ್ದೆ’ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ‘ರಕ್ಷಿತ್ ಶೆಟ್ಟಿ ಮೇಲೆ ಒತ್ತಡ ಹಾಕೋದು ನ್ಯಾಯವಲ್ಲ’: ‘ಥಗ್ಸ್​ ಆಫ್​ ಮಾಲ್ಗುಡಿ’ ಬಗ್ಗೆ ಸುದೀಪ್​ ಮಾತು

‘ಪ್ರಮೋದ್​ ಜೊತೆ ಚಾರ್ಲಿ ಇರುತ್ತದೆ. ಅವರಿಗೆ ಕಾಲ್​ ಮಾಡಿದಾಗಲೆಲ್ಲ ಚಾರ್ಲಿ ತಾಯಿ ಆಗುವ ಸಾಧ್ಯತೆ ಬಗ್ಗೆ ಕೇಳುತ್ತಿದ್ದೆ. ಅದಕ್ಕೆ ವಯಸ್ಸು ಆಗಿದ್ದರಿಂದ ಏನಾಗತ್ತೋ ಗೊತ್ತಿಲ್ಲ ಅಂತ ಅವರು ಹೇಳುತ್ತಿದ್ದರು. ಅಚ್ಚರಿ ಏನೆಂದರೆ ಮೇ 9ರಂದು ಚಾರ್ಲಿ 6 ಮರಿಗಳಿಗೆ ಜನ್ಮ ನೀಡಿದೆ. ಹಾಗಾಗಿ ಚಾರ್ಲಿ ಮತ್ತು ಅದರ ಮರಿಗಳನ್ನು ನೋಡಲು ನಾನು ಮೈಸೂರಿಗೆ ಬಂದೆ’ ಎಂದಿದ್ದಾರೆ ರಕ್ಷಿತ್​ ಶೆಟ್ಟಿ. ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ರಕ್ಷಿತ್​ ಶೆಟ್ಟಿ ಅವರು ಚಾರ್ಲಿ ಮತ್ತು ಅದರ ಮರಿಗಳನ್ನು ಅಭಿಮಾನಿಗಳಿಗೆ ತೋರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:06 pm, Wed, 15 May 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?