Rakshit Shetty: ರಕ್ಷಿತ್​ ಶೆಟ್ಟಿ ಬರ್ತ್​ಡೇಗೆ ಸಿಗುತ್ತಿದೆ ವಿಶೇಷ ಗಿಫ್ಟ್​; ಐದು ಭಾಷೆಗಳಲ್ಲಿ 777 ಚಾರ್ಲಿ ಟೀಸರ್​

‘777 ಚಾರ್ಲಿ’ ಸಿನಿಮಾದಲ್ಲಿ ಶ್ವಾನ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಸಿನಿಮಾ ತಂಡದಿಂದ ಸಾಕಷ್ಟು ಪೋಸ್ಟರ್​ ರಿಲೀಸ್​ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

Rakshit Shetty: ರಕ್ಷಿತ್​ ಶೆಟ್ಟಿ ಬರ್ತ್​ಡೇಗೆ ಸಿಗುತ್ತಿದೆ ವಿಶೇಷ ಗಿಫ್ಟ್​; ಐದು ಭಾಷೆಗಳಲ್ಲಿ 777 ಚಾರ್ಲಿ ಟೀಸರ್​
777 ಚಾರ್ಲಿ ಸಿನಿಮಾದಲ್ಲಿ ರಕ್ಷಿತ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: May 28, 2021 | 2:56 PM

ರಕ್ಷಿತ್​ ಶೆಟ್ಟಿ ಜೂನ್​ 6ರಂದು 38ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಸ್ಟಾರ್​ ನಟರ ಜನ್ಮದಿನ ಎಂದರೆ ಸಿನಿಮಾ ತಂಡದಿಂದ ವಿಶೇಷ ಗಿಫ್ಟ್​ ಸಿಗೋದು ಸಂಪ್ರದಾಯ. ರಕ್ಷಿತ್​ ಬರ್ತ್​ಡೇಗೂ ಈಗ ಗಿಫ್ಟ್​ ಒಂದು ಸಿಗುತ್ತಿದೆ. ಅವರ ನಟನೆಯ 777 ಚಾರ್ಲಿ ತಂಡ ಜೂನ್​ 6ರಂದು ಟೀಸರ್​ ರಿಲೀಸ್ ಮಾಡುತ್ತಿದೆ.

ರಕ್ಷಿತ್​ ಶೆಟ್ಟಿ ಸ್ಯಾಂಡಲ್​ವುಡ್​ನ ಸಿಂಪಲ್​ ಸ್ಟಾರ್​. ನಟನೆಯ ಜತೆಗೆ ಅವರು ನಿರ್ದೇಶನದ ಮೂಲಕವೂ ಭೇಷ್​ ಎನಿಸಿಕೊಂಡಿದ್ದಾರೆ. ಅವರ ನಿರ್ದೇಶಿಸಿ, ನಟಿಸಿರುವ ಉಳಿದವರು ಕಂಡಂತೆ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಅವರ ನಟನೆಯ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕಿರಿಕ್​ ಪಾರ್ಟಿ’, ‘ಅವನೇ ಶ್ರೀಮನ್ನಾರಾಯಣ’ ಮೊದಲಾದ ಚಿತ್ರಗಳು ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿಕೊಂಡಿದ್ದವು. ಈಗ ಅವರು ‘777 ಚಾರ್ಲಿ’ ಹೆಸರಿನ ಭಿನ್ನ ಕಥೆ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

‘777 ಚಾರ್ಲಿ’ ಸಿನಿಮಾದಲ್ಲಿ ಶ್ವಾನ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಸಿನಿಮಾ ತಂಡದಿಂದ ಸಾಕಷ್ಟು ಪೋಸ್ಟರ್​ ರಿಲೀಸ್​ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ. ಚಿತ್ರದಲ್ಲಿ ರಕ್ಷಿತ್​ ಹಾಗೂ ಶ್ವಾನದ ಕಾಂಬಿನೇಷನ್​ ಪ್ರೇಕ್ಷಕರಿಗೆ ಇಷ್ಟವಾಗುವ ಎಲ್ಲಾ ಸಾಧ್ಯತೆ ಇದೆ.

ಸದ್ಯ, 777 ಚಾರ್ಲಿ ತಂಡ ಪೋಸ್ಟ್​ ಪ್ರೊಡಕ್ಷನ್​ ಪೂರ್ಣಗೊಳಿಸುವ ಹಂತದಲ್ಲಿದೆ. ಡಬ್ಬಿಂಗ್​ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಶೀಘ್ರವೇ ಸಿದ್ಧಗೊಳ್ಳಲಿದೆ. ಈಗ ಜೂನ್​ 6ರಂದು ಟೀಸರ್​ ರಿಲೀಸ್​ ಆಗುತ್ತಿದ್ದು, ಅಭಿಮಾನಿಗಳಿಗೆ ಕುತೂಹಲ ಹೆಚ್ಚಿದೆ.

777 ಚಾರ್ಲಿ ಸಿನಿಮಾಕ್ಕೆ ಸುಮಾರು 160 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಶ್ವಾನದ ಮೂಡ್ ನೋಡಿಕೊಂಡು ಶೂಟ್​ ಮಾಡಬೇಕಾದ ಪರಿಸ್ಥಿತಿ ಇದ್ದಿದ್ದರಿಂದ ಶೂಟಿಂಗ್​ಗೆ ಹೆಚ್ಚು ದಿನ ಹಿಡಿದಿದೆ. 777 ಚಾರ್ಲಿ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಹೀಗಾಗಿ, ಟೀಸರ್ ಕೂಡ ಐದು ಭಾಷೆಗಳಲ್ಲಿ ರಿಲೀಸ್​ ಆಗುತ್ತಿದೆ.

ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಪರಮ್ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ.

ಇದನ್ನೂ ಓದಿ: Ramya Divya Spandana: ರಕ್ಷಿತ್​ ಶೆಟ್ಟಿ ಜೊತೆ ರಮ್ಯಾ ಮದುವೆ ಆಗ್ಬೇಕು; ಫ್ಯಾನ್ಸ್​ ಬಯಕೆಗೆ ಉತ್ತರ ಕೊಟ್ಟ ಸ್ಯಾಂಡಲ್​ವುಡ್​ ಕ್ವೀನ್​

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್